ಸುಭಾಷಿತ :

Tuesday, February 18 , 2020 1:51 PM

ಚಿನ್ನಸ್ವಾಮಿಯಲ್ಲಿ ಚಿನ್ನದಂತಹ ಸರಣಿ ಗೆಲುವು : ಆಸೀಸ್ ವಿರುದ್ಧ ಭಾರತಕ್ಕೆ ಭರ್ಜರಿ ಜಯ


Sunday, January 19th, 2020 9:31 pm

ಬೆಂಗಳೂರು, :  ಆಸ್ಟ್ರೇಲಿಯ ವಿರುದ್ಧ ಮೂರನೇ ಹಾಗೂ ಅಂತಿಮ ಏಕದಿನ ಅಂತರ್‌ರಾಷ್ಟ್ರೀಯ ಪಂದ್ಯದಲ್ಲಿ ಭಾರತ 7 ವಿಕೆಟ್‌ಗಳ ಭರ್ಜರಿ ಜಯ ಗಳಿಸುವ ಮೂಲಕ  3 ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಡಿಸಿಕೊಂಡಿದೆ.

ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡೋ ಮೂಲಕ ಆಸೀಸ್ ಬ್ಯಾಟ್ಸ್‌ಮನ್‌ಗಳನ್ನು ಕಟ್ಟಿಹಾಕಿದರು. ಸ್ಟೀವ್ ಸ್ಮಿತ್ ಶತಕದಿಂದ ಆಸ್ಟ್ರೇಲಿಯಾ 286 ರನ್ ಸಿಡಿಸಿತು.287ರನ್ ಟಾರ್ಗೆಟ್ ಬೆನ್ನಟ್ಟಲು ಕಣಕ್ಕಿಳಿದ ಟೀಂ ಇಂಡಿಯಾಗೆ ರೋಹಿತ್ ಶರ್ಮಾ ಹಾಗೂ ಕೆಎಲ್ ರಾಹುಲ್ ಉತ್ತಮ ಆರಂಭ ನೀಡಿದರು.

ಶ್ರೇಯಸ್ ಅಯ್ಯರ್ ಅಜೇಯ 44 ರನ್ ಹಾಗೂ ಮನೀಶ್ ಪಾಂಡೆ ಅಜೇಯ 8 ರನ್ ಸಿಡಿಸಿದರು. ಭಾರತ 47.3 ಓವರ್‌ಗಳಲ್ಲಿ 3 ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತು. 7 ವಿಕೆಟ್ ಭರ್ಜರಿ ಗೆಲುವು ಸಾಧಿಸಿದ ಟೀಂ ಇಂಡಿಯಾ 2-1 ಅಂತರದಲ್ಲಿ ಸರಣಿ ಗೆದ್ದುಕೊಂಡಿತು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions