ಕೆಎನ್ಎನ್ ಡಿಜಿಟಲ್ ಡೆಸ್ಕ್ : ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ ಅಸ್ಸಾಂ-ಮೇಘಾಲಯ ಗಡಿಯಲ್ಲಿ ಮರ ಸಾಗಾಣೆ ವಿಚಾರವಾಗಿ ಪೊಲೀಸ್- ಸ್ಥಳೀಯರ ನಡುವೆ ನಡೆದ ಘರ್ಷಣೆಯಲ್ಲಿ ಆರು ಮಂದಿ ಸಾವನ್ನಪ್ಪಿದ ಪ್ರಕರಣ ಸಂಬಂಧ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ತನಿಖೆಗೆ ಆದೇಶಿಸಿದ್ದಾರೆ.
ಅಸ್ಸಾಂ ಸರ್ಕಾರವು ಮೃತ ಆರು ಜನರ ಮುಂದಿನ ಸಂಬಂಧಿಕರಿಗೆ ತಲಾ 5 ಲಕ್ಷ ರೂಪಾಯಿಗಳನ್ನು ನೀಡಲು ನಿರ್ಧರಿಸಿದೆ.
ನಾವು ನ್ಯಾಯಾಂಗ ತನಿಖೆಗೆ ಆದೇಶಿಸಿದ್ದೇವೆ. ಪ್ರಕರಣವನ್ನು ಸಿಬಿಐಗೆ ವಹಿಸಿದ್ದೇವೆ. ಎಸ್ಪಿಯನ್ನು ವರ್ಗಾವಣೆ ಮಾಡಲಾಗಿದೆ ಮತ್ತು ಸ್ಥಳೀಯ ಪೊಲೀಸರು ಮತ್ತು ಅರಣ್ಯ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಎಂದು ವಿಧಾನಸಭಾ ಚುನಾವಣೆಯ ಪ್ರಚಾರಕ್ಕಾಗಿ ಗುಜರಾತ್ನಲ್ಲಿರುವ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.
Gujarat | We have ordered a judicial investigation and have referred the matter to CBI. SP has been transferred and local police and forest officials have been placed under suspension: Assam CM HB Sarma on West Jaintia Hills firing incident pic.twitter.com/GBbclKBrcq
— ANI (@ANI) November 22, 2022
ಏನಿದು ಘಟನೆ
ಮಂಗಳವಾರ ಮುಂಜಾನೆ ಪಶ್ಚಿಮ ಕರ್ಬಿ ಅಂಗ್ಲಾಂಗ್ ಜಿಲ್ಲೆಯ (ಪಶ್ಚಿಮ ಜೈನ್ತಿಯಾ ಹಿಲ್ಸ್) ಅಸ್ಸಾಂ-ಮೇಘಾಲಯ ಗಡಿಯಲ್ಲಿ ಅಕ್ರಮ ಮರವನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ತಡೆದ ನಂತರ ಹಿಂಸಾಚಾರದಲ್ಲಿ ಅರಣ್ಯ ಸಿಬ್ಬಂದಿ ಸೇರಿದಂತೆ ಆರು ಜನರು ಸಾವನ್ನಪ್ಪಿದ್ದಾರೆ.
ಮುಕ್ರು ಪ್ರದೇಶದಲ್ಲಿ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಅರಣ್ಯ ತಂಡ ಟ್ರಕ್ ನಿಲ್ಲಿಸಿದಾಗ ಚಾಲಕ ವೇಗವಾಗಿ ಓಡಲು ಯತ್ನಿಸಿದ್ದಾನೆ. ಈ ವೇಳೆ ಅರಣ್ಯ ಸಿಬ್ಬಂದಿ ಟ್ರಕ್ನ ಟಯರ್ ಗೆ ಗುಂಡು ಹಾರಿಸಿದ್ದರು. ಈ ವೇಳೆ ಚಾಲಕ ಮತ್ತು ಇತರ ಇಬ್ಬರನ್ನು ಬಂಧಿಸಲಾಗಿತ್ತು. ಇದೇ ಸಮಯದಲ್ಲಿ ಹಲವರು ತಪ್ಪಿಸಿಕೊಂಡಿದ್ದಾರೆ ಎನ್ನಲಾಗುತ್ತಿದೆ.
ಮೃತರಲ್ಲಿ ಐವರು ಮೇಘಾಲಯದವರಾಗಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಮೇಘಾಲಯ ಕೂಡ ಘಟನೆಯ ಬಗ್ಗೆ ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶಿಸಿದೆ.
ಘಟನೆಯ ನಂತರ ಏಳು ಜಿಲ್ಲೆಗಳಲ್ಲಿ 48 ಗಂಟೆಗಳ ಕಾಲ ಮೊಬೈಲ್ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ.
ಆಸ್ಪತ್ರೆಯಲ್ಲಿ ‘ದೆವ್ವ’ದ ಜೊತೆ ‘ಸೆಕ್ಯುರಿಟಿ ಗಾರ್ಡ್’ ಸಂಭಾಷಣೆ ; ಶಾಕಿಂಗ್ ವಿಡಿಯೋ ವೈರಲ್.!