ಮೈಸೂರು : ಬಿಜೆಪಿಯವರು ನ್ಯಾಯ ಯಾತ್ರೆಗೆ ಉದ್ದೇಶಪೂರ್ವಕವಾಗಿಯೇ ಸಮಸ್ಯೆಗಳನ್ನು ಉಂಟುಮಾಡುತ್ತಿದ್ದಾರೆ. ಇದು ಸಂವಿಧಾನಬಾಹಿರವಾದ ಕ್ರಮ. ಒಬ್ಬ ಮುಖ್ಯಮಂತ್ರಿ ಸ್ಥಾನದಲ್ಲಿರುವವರು ಹೀಗೆಲ್ಲಾ ನಡೆದುಕೊಳ್ಳಬಾರದು. ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಪಿರಿಯಾಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಅಸ್ಸಾಂನಲ್ಲಿ ರಾಹುಲ್ ಗಾಂಧಿ ಅವರ ನ್ಯಾಯ ಯಾತ್ರೆಗೆ ತಡೆಯೊಡ್ಡಿರುವ ಅಸ್ಸಾಂ ಸರ್ಕಾರದ ನಡೆಯ ಬಗ್ಗೆ ಪ್ರಧಾನಿಗಳು ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದರೂ ಪ್ರತಿಕ್ರಿಯೆ ನೀಡಿಲ್ಲ ಎಂಬ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಪ್ರತಿ ನಾಗರಿಕನಿಗೂ ಪಾದಯಾತ್ರೆ ಕೈಗೊಳ್ಳಲು ಅಥವಾ ಯಾವುದೇ ಸರ್ಕಾರದ ವಿರುದ್ಧ ಪ್ರತಿಭಟಿಸುವ ಸ್ವಾತಂತ್ರ್ಯವನ್ನು ಸಂವಿಧಾನ ಕೊಟ್ಟಿದೆ. ರಾಹುಲ್ ಗಾಂಧಿಯವರು ದೇಶದ ಜನರ ಸಮಸ್ಯೆಗಳನ್ನು ಅರಿಯಲು ಹಾಗೂ ಅವುಗಳಿಗೆ ಪರಿಹಾರವನ್ನು ಕಂಡುಕೊಳ್ಳಲು ಪಾದಯಾತ್ರೆ ಮಾಡುತ್ತಿದ್ದಾರೆ ಎಂದರು.
ಪ್ರಚೋದನೆ ನೀಡುವುದು ಸಂವಿಧಾನಬಾಹಿರ
ನೆಹರೂ ಕುಟುಂಬಕ್ಕೆ ಬೆದರಿಕೆಯಿದ್ದು, ಭಾರತ ಸರ್ಕಾರ ಹಾಗೂ ಅಸ್ಸಾಂ ರಾಜ್ಯ ಸರ್ಕಾರಗಳು ರಾಹುಲ್ ಗಾಂಧಿಯವರಿಗೆ ಸೂಕ್ತ ಭದ್ರತೆಯನ್ನು ಒದಗಿಸಬೇಕಾಗಿರುವುದು ಅವರ ಕರ್ತವ್ಯ. ಇದು ಅವರ ಕರ್ತವ್ಯಲೋಪ ಎಸೆಗಿದಂತಾಗುತ್ತದೆ ಎಂದರು. ಅಸ್ಸಾಂ ರಾಜ್ಯದ ಮುಖ್ಯಮಂತ್ರಿಗಳು ಮೊದಲು ಕಾಂಗ್ರೆಸ್‍ನಲ್ಲಿದ್ದು, ನಂತರ ಬಿಜೆಪಿಗೆ ಹೋಗಿ ಮುಖ್ಯಮಂತ್ರಿಗಳಾಗಿದ್ದಾರೆ. ಅಮಿತ್ ಶಾ ಹಾಗೂ ನರೇಂದ್ರ ಮೋದಿಯವರನ್ನು ಮೆಚ್ಚಿಸಲೆಂದು ಈ ರೀತಿ ಮಾಡುತ್ತಿದ್ದಾರೆ. ಅದು ಅವರ ಕರ್ತವ್ಯ ಲೋಪವಲ್ಲದೇ ಅವರ ಭದ್ರತಾ ವ್ಯವಸ್ಥೆ ಸಂಪೂರ್ಣವಾಗಿ ಸೋತಿದೆ. ಹಾಗೂ ಇಂಥದ್ದಕ್ಕೆ ಪ್ರಚೋದನೆ ನೀಡುವುದು ಸಂವಿಧಾನಬಾಹಿರ ಎಂದರು.
UPDATE : ಮೇಲುಕೋಟೆಯಲ್ಲಿ ಶಿಕ್ಷಕಿ ಕೊಲೆ ಪ್ರಕರಣ : 30 ಗಂಟೆಗಳಲ್ಲಿ ಆರೋಪಿಯನ್ನು ಬಂಧಿಸಿದ ಪೊಲೀಸರು
ಗೂಗಲ್ ಸರ್ಚ್‌ನಿಂದ 5 ಲಕ್ಷಕ್ಕೂ ಹೆಚ್ಚು ಹಣ ಕಳೆದುಕೊಂಡು ವಂಚನೆಗೊಳಗಾದ ಮಹಿಳೆ | Online Scam