ನವದೆಹಲಿ:ಅಸ್ಸಾಂನಲ್ಲಿ ಪ್ರವಾಹ ಪರಿಸ್ಥಿತಿ ತೀವ್ರ ಸ್ವರೂಪಕ್ಕೆ ಏರಿರುವುದರಿಂದ, ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ಕಳವಳವನ್ನು ವ್ಯಕ್ತಪಡಿಸಿದರು ಮತ್ತು ಸಾಧ್ಯವಿರುವ ಎಲ್ಲ ಸಹಾಯವನ್ನು ತಲುಪುವಂತೆ ತಮ್ಮ ಪಕ್ಷದ ಕಾರ್ಯಕರ್ತರು ಮತ್ತು ಸರ್ಕಾರಗಳಿಗೆ ಮನವಿ ಮಾಡಿದರು.
ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕಿ “ಅಸ್ಸಾಂನಲ್ಲಿ ಪ್ರವಾಹದಿಂದಾಗಿ ಹೆಚ್ಚಿನ ಸಂಖ್ಯೆಯ ಜನರು ಸಾವನ್ನಪ್ಪಿದ ಸುದ್ದಿ ತುಂಬಾ ದುಃಖಕರವಾಗಿದೆ. ನಿರಂತರವಾಗಿ ಹದಗೆಡುತ್ತಿರುವ ಪರಿಸ್ಥಿತಿಯಿಂದಾಗಿ, ಲಕ್ಷಾಂತರ ಜನರು ಪರಿಹಾರ ಶಿಬಿರಗಳಲ್ಲಿ ವಾಸಿಸುತ್ತಿದ್ದಾರೆ. ಕಾಜಿರಂಗದಲ್ಲಿ ಹೆಚ್ಚಿನ ಸಂಖ್ಯೆಯ ಪ್ರಾಣಿಗಳು ಸಹ ಸಾವನ್ನಪ್ಪಿವೆ ಮತ್ತು ಅನೇಕರು ಗಾಯಗೊಂಡಿದ್ದಾರೆ. ಅಸ್ಸಾಂ ಜನರ ಬಗ್ಗೆ ನಮ್ಮ ಸಹಾನುಭೂತಿ ಇದೆ.
“ದಯವಿಟ್ಟು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಗಳಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ನಾನು ಕಾಂಗ್ರೆಸ್ ನಾಯಕರು ಮತ್ತು ಕಾರ್ಯಕರ್ತರಿಗೆ ಮನವಿ ಮಾಡುತ್ತೇನೆ” ಎಂದು ಅವರು ಹೇಳಿದರು.
“ಪೀಡಿತ ಜನರಿಗೆ ಸಾಧ್ಯವಿರುವ ಎಲ್ಲ ರೀತಿಯಲ್ಲಿ ಸಹಾಯ ಮಾಡುವಂತೆ ನಾನು ರಾಜ್ಯ ಮತ್ತು ಕೇಂದ್ರ ಸರ್ಕಾರವನ್ನು ವಿನಂತಿಸುತ್ತೇನೆ” ಎಂದು ಅವರು ಸರ್ಕಾರಗಳಿಗೆ ಮನವಿ ಮಾಡಿದರು.
ಅಸ್ಸಾಂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ, ಪ್ರವಾಹದಿಂದಾಗಿ ರಾಜ್ಯದಾದ್ಯಂತ ಇದುವರೆಗೆ 58 ಜನರು ಸಾವನ್ನಪ್ಪಿದ್ದಾರೆ. ಧುಬ್ರಿ ಅತಿ ಹೆಚ್ಚು ಹಾನಿಗೊಳಗಾದ ಜಿಲ್ಲೆಯಾಗಿದ್ದು, ನಂತರ ಕಚಾರ್ ಮತ್ತು ದರ್ರಾಂಗ್ ಇವೆ.
ಅಸ್ಸಾಂನ 29 ಜಿಲ್ಲೆಗಳಲ್ಲಿ 2.3 ದಶಲಕ್ಷಕ್ಕೂ ಹೆಚ್ಚು ಜನರು ಈ ಪ್ರವಾಹದಿಂದ ಬಾಧಿತರಾಗಿದ್ದಾರೆ.
526,000 ಕ್ಕೂ ಹೆಚ್ಚು ಜನರು 27 ಡಿ ಯಾದ್ಯಂತ 577 ಪರಿಹಾರ ಶಿಬಿರಗಳು ಮತ್ತು ವಿತರಣಾ ಕೇಂದ್ರಗಳಲ್ಲಿ ಆಶ್ರಯ ಪಡೆದಿದ್ದಾರೆ.