ಗುವಾಹಟಿ: ಅಸ್ಸಾಂ ರಾಜಕಾರಣದಲ್ಲಿ ಇಂದು ಹೊಸ ಇತಿಹಾಸ ಸೃಷ್ಟಿಯಾಗಲಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟವನ್ನು ಸತತ ಎರಡನೇ ಬಾರಿಗೆ ಅಧಿಕಾರಕ್ಕೆ ತಂದಿರುವ ಹಿಮಂತ ಬಿಸ್ವ ಶರ್ಮಾ ಅವರು ಇಂದು (ಮಂಗಳವಾರ, ಮೇ 12, 2026) ಅಸ್ಸಾಂನ ಮುಖ್ಯಮಂತ್ರಿಯಾಗಿ ಎರಡನೇ ಅವಧಿಗೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ ಕಾಲೇಜು ಮೈದಾನದಲ್ಲಿ ಬೆಳಗ್ಗೆ 11:40ಕ್ಕೆ ಈ ಅದ್ಧೂರಿ ಸಮಾರಂಭ ನಡೆಯಲಿದೆ.
ಈ ಐತಿಹಾಸಿಕ ಕ್ಷಣಕ್ಕೆ ಸಾಕ್ಷಿಯಾಗಲು ದೇಶದ ಪ್ರಮುಖ ರಾಜಕೀಯ ನಾಯಕರು ಗುವಾಹಟಿಗೆ ಆಗಮಿಸುತ್ತಿದ್ದಾರೆ:ಪ್ರಧಾನಿ ನರೇಂದ್ರ ಮೋದಿ ಅವರು ಈ ಸಮಾರಂಭದ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಕೇಂದ್ರ ಸಚಿವ ಸರ್ಬಾನಂದ ಸೋನೋವಾಲ್ ಉಪಸ್ಥಿತರಿರಲಿದ್ದಾರೆ.
ಎನ್‌ಡಿಎ ಆಡಳಿತವಿರುವ ವಿವಿಧ ರಾಜ್ಯಗಳ ಸುಮಾರು 40ಕ್ಕೂ ಹೆಚ್ಚು ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು ಈ ಸಮಾರಂಭದಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಸೇರಿದಂತೆ ಹಿರಿಯ ನಾಯಕರು ಭಾಗವಹಿಸಲಿದ್ದಾರೆ.








