ಬೆಳಗಾವಿ : ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನವನ್ನು ಸೋಮವಾರ ಬೆಳಗ್ಗೆ 11 ಗಂಟೆಗೆ ಮುಂದೂಡಲಾಗಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸೋಮವಾರ ಬೆಳಗ್ಗೆ 11 ಗಂಟೆಗೆ ವಿಧಾನಸಭೆ ಕಲಾಪವನ್ನು ಮುಂದೂಡಿದ್ದಾರೆ. ಸೋಮವಾರದಿಂದ ಮತ್ತೆ ಸದನದಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ.
ಸುವರ್ಣಸೌಧದಲ್ಲಿ ನಡೆಯುತ್ತಿರುವ ಚಳಿಗಾಲ ಅಧಿವೇಶನ ಐದನೇ ದಿನಕ್ಕೆ ಕಾಲಿಟ್ಟಿದೆ. ಸದನದಲ್ಲಿ ಇಂದು ಸ್ಟಾಂಪ್ ನಾಲ್ಕನೇ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಬೀದಿ ಬದಿಯ ವ್ಯಾಪಾರಿಗಳಿಗೆ ಆತ್ಮ ನಿರ್ಭರ ನಿಧಿಯಡಿ ಸ್ಟಾಂಪ್ ಶುಲ್ಕ ಮನ್ನಾ ಮಾಡಲು ಅವಕಾಶ ಮಾಡಿಕೊಡುವ ವಿಧೇಯಕವನ್ನು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದೆ.
ಇನ್ನು ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ ನಿಲುವಳಿ ನೋಟಿಸ್ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು.
ಉತ್ತರಕರ್ನಾಟಕ, ಕಲ್ಯಾಣ ಕರ್ನಾಟಕ ಅಭಿವೃದ್ಧಿ ಬಗ್ಗೆ ಚರ್ಚೆಗೆ ಆಗ್ರಹಿಸಿ ವಿಧಾನಸಭೆಯಲ್ಲಿ ಜೆಡಿಎಸ್ ಪಕ್ಷ ನಿಲುವಳಿ ನೋಟಿಸ್ ನೀಡಿದೆ. ನಿಯಮ 69ರಡಿ ಸೋಮವಾರದ ಬಳಿಕ ಚರ್ಚೆಗೆ ಅವಕಾಶ ಕೊಡುವುದಾಗಿ ಸ್ಪೀಕರ್ ಕಾಗೇರಿ ತಿಳಿಸಿದರು.ಇನ್ನು ಬೆಂಗಳೂರು ನಗರದಲ್ಲಿ ಮತ್ತೆ ಕೊರೊನಾ ಹೆಚ್ಚಳ ಭೀತಿ ಹಿನ್ನೆಲೆಯಲ್ಲಿ ಬೆಳಗಾವಿ ಸುವರ್ಣಸೌಧದಲ್ಲಿ ಆರೋಗ್ಯ ಇಲಾಖೆಯಿಂದ ಅಲರ್ಟ್ ಆಗಿದೆ.ಸುವರ್ಣಸೌಧ ಎಂಟ್ರಿಯಲ್ಲಿ ಥರ್ಮಲ್ ಸ್ಯ್ಕಾನಿಂಗ್ ಮತ್ತು ಮಾಸ್ಕ್ ವ್ಯವಸ್ಥೆ ಮಾಡಲಾಗಿದೆ. ಆರೋಗ್ಯ ಇಲಾಖೆ ಸಿಬ್ಬಂದಿಗಳು ಜನ ಪ್ರತಿನಿಧಿಗಳು ಮತ್ತು ಜನರಿಗೆ ಥರ್ಮಲ್ ಸ್ಕ್ಯಾನ್ ಮಾಡುತ್ತಿದ್ದಾರೆ.
ರಾಜ್ಯದಲ್ಲಿ ‘ಅರೆ ಸೈನಿಕ ಕಲ್ಯಾಣ ಮಂಡಳಿ ‘ಸ್ಥಾಪಿಸುವಂತೆ ಶಾಸಕ ಯು.ಟಿ ಖಾದರ್ ಮನವಿ |Karnataka Winter Session