ಬೆಳಗಾವಿ : ವಿಧಾನಸಭೆ ಕಲಾಪ ಇಂದು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಲಾಗಿದೆ. ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಕಲಾಪವನ್ನು ಮಧ್ಯಾಹ್ನ 3 ಗಂಟೆಗೆ ಮುಂದೂಡಿಕೆ ಮಾಡಿದ್ದಾರೆ.
ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.
ಗಮನಿಸಿ : ವಿಕಲಚೇತನರ ರಿಯಾಯಿತಿ ದರದಲ್ಲಿ ಬಸ್ ಪಾಸ್ ಗೆ ಅರ್ಜಿ ಆಹ್ವಾನ
BREAKING NEWS: ಬೆಳಗಾವಿ ಚಳಿಗಾಲದ ಅಧಿವೇಶನ ನಾಳೆಯೇ ಮುಕ್ತಾಯಗೊಳ್ಳುವ ಸಾಧ್ಯತೆ?