ಬೆಳಗಾವಿ : ಇಂದು ಅಧಿವೇಶನದಲ್ಲಿ ಹಲವು ಮಹತ್ವದ ಚರ್ಚೆ, ಮಸೂದೆ ಮಂಡನೆಯಾಗಿದ್ದು, ಇದೀಗ ನಾಳೆ ಬೆಳಗ್ಗೆ 10:30 ಕ್ಕೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಲಾಗಿದೆ.
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನಾಳೆ ಬೆಳಗ್ಗೆ 10:30 ಗಂಟೆಗೆ ವಿಧಾನಸಭಾ ಕಲಾಪ ಮುಂದೂಡಿಕೆ ಮಾಡಿದ್ದಾರೆ.
ಬೆಳಗಾವಿ: ಬೆಳಗಾವಿ ಚಳಿಗಾಲದ ಅಧಿವೇಶನ ನಿಗಧಿತ ದಿನಕ್ಕಿಂತ ಒಂದು ದಿನ ಮುಂಚೆ ಅಂದರೆ ನಾಳೆಯೇ ಮುಕ್ತಾಯಗೊಳ್ಳಲಿದೆ. .ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ್ ಹೆಗಡೆ ಕಾಗೇರಿ ಸದನದಲ್ಲಿ ಘೋಷಣೆ ಮಾಡಿದ್ದು, ನಾಳೆ ಡಿ.29 ರಂದು ಚಳಿಗಾಲದ ಅಧಿವೇಶನ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುತ್ತಿದೆ, ನಾಳೆ ಸಂಜೆ ವೇಳೆಗೆ ಮುಕ್ತಾಯಗೊಳ್ಳಲಿದೆ ಎಂದು ಹೇಳಿದ್ದಾರೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳಲಿದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ.
BIG NEWS: ಕೋವಿಡ್ 19 ರ 220 ರೂಪಾಂತರಗಳನ್ನು ಪತ್ತೆಹಚ್ಚಿದ ಭಾರತ | BF.7 variant
BIGG NEWS : ರಾಜ್ಯದ ಪೌರಕಾರ್ಮಿಕರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ : ಸಿಎಂ ಬೊಮ್ಮಾಯಿ ಘೋಷಣೆ