ಬೆಳಗಾವಿ: ವಿಧಾನಸಭೆಯ ಉಪ ಸಭಾಪತಿ ಆನಂದ ಮಾಮನಿ ಅವರ ಆರೋಗ್ಯದಲ್ಲಿ ಏರುಪೇರು ಆಗಿದೆ. ಹೀಗಾಗಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
BIGG NEWS: ಮುರುಘಾಮಠದ ಶ್ರೀಗಳ ವಿರುದ್ಧ ಪೋಕ್ಸೊ ಪ್ರಕರಣ; ಇಂದು ಮೂವರು ಆರೋಪಿಗಳ ಭವಿಷ್ಯ ನಿರ್ಧಾರ?
ಕಳೆದ ಕೆಲ ದಿನಗಳಿಂದ ಸಕ್ಕರೆ ಕಾಯಿಲೆಯಿಂದ ಬಳಲುತ್ತಿದ್ದ ಆನಂದ ಮಾಮನಿ ಅವರನ್ನು ನಿನ್ನೆ ಚೆನ್ನೈನ ಆಸ್ಪತ್ರೆಗೆ ದಾಖಲಿಸಲಾಗಿದೆ. . ಸದ್ಯ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ಆಪ್ತ ಮೂಲಗಳು ತಿಳಿಸಿವೆ.ಚೆನ್ನೈನ ರೇಲಾ ಆಸ್ಪತ್ರೆಯಲ್ಲಿ ಆನಂದ ಮಾಮನಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಆನಂದ ಮಾಮನಿ ಆರೋಗ್ಯ ಸ್ಥಿರವಾಗಿದೆ. ವಿಶ್ರಾಂತಿಗೆ ವೈದ್ಯರು ಸಲಹೆ ನೀಡಿದ್ದಾರೆ.
ಇನ್ನು ತಡರಾತ್ರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆನಂದ ಮಾಮನಿಗೆ ಕರೆ ಮಾಡಿ ಆರೋಗ್ಯ ವಿಚಾರಿಸಲಾಗಿದೆ.