ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯಲ್ಲಿ ಅಪಘಾತದಲ್ಲಿ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರಿನಿಂದ ಕುಮಾರ ಪಟ್ಟಣ ಸಮೀಪದ ಸ್ವಗ್ರಾಮಕ್ಕೆ ತೆರಳುತ್ತಿದ್ದಂತ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರು ಮಾರ್ಗ ಮಧ್ಯೆ ಮೂತ್ರ ವಿಸರ್ಜನೆಗೆ ಕಾರಿನಿಂದ ಇಳಿಯುತ್ತಿದ್ದರು. ಈ ವೇಳೆಯಲ್ಲಿ ಹಿಂಬದಿಯಿಂದ ಸ್ಕೂಟರ್ ಒಂದು ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ತಲೆ, ಕೈ-ಕಾಲುಗಳಿಗೆ ಪೆಟ್ಟು ಬಿದ್ದಿರುವುದಾಗಿ ತಿಳಿದು ಬಂದಿದೆ.
ಬೈಕ್ ಗುದ್ದಿದ ಕಾರಣ ಗಾಯಗೊಂಡ ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ ಅವರನ್ನು ಹಿರಿಯೂರು ಸಾರ್ವಜನಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ. ಇದೀಗ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ.
ವರದಿ: ವಸಂತ ಬಿ ಈಶ್ವರಗೆರೆ
ಹಾಸನದ ಬೇಲೂರಲ್ಲಿ ಆನೆ ದಾಳಿಗೆ ಮಹಿಳೆ ಸಾವು: ಸಚಿವ ಈಶ್ವರ್ ಖಂಡ್ರೆ ಸಂತಾಪ
ಭಾರತದಲ್ಲಿ ಶೇ.57ರಷ್ಟು ಕಾರ್ಪೊರೇಟ್ ಪುರುಷರು ವಿಟಮಿನ್ ಬಿ12 ಕೊರತೆ ಎದುರಿಸುತ್ತಿದ್ದಾರೆ: ಸಮೀಕ್ಷೆ