ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ಬಳಿಯಲ್ಲಿ ವಿಧಾನಸಭೆ ಉಪಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಅವರು ಗಾಯಗೊಂಡಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವಗೊಂಡನಹಳ್ಳಿ ಬಳಿಯ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ವಿಧಾನಸಭೆ ಉಪ ಸಭಾಪತಿ ರುದ್ರಪ್ಪ ಲಮಾಣಿ ಪ್ರಯಾಣಿಸುತ್ತಿದ್ದಂತ ಕಾರು ಅಪಘಾತವಾಗಿದೆ.
ಈ ಅಪಘಾತದಲ್ಲಿ ಉಪ ಸಭಾಪತಿ ರುದ್ರಪ್ಪ ಲಮಾಣಿ ಗಾಯಗೊಂಡಿದ್ದಾರೆ. ಅವರಿಗೆ ಹಿರಿಯೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆಯ ಎಸ್ ಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇದೀಗ ಚಿಕಿತ್ಸೆಯ ಬಳಿಕ ಉಪ ಸಭಾಪತಿ ರುದ್ರಪ್ಪ ಲಮಾಣಿ ಅವರು ಪ್ರಾಣಾಪಾಯದಿಂದ ಪಾರಾಗಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ವರದಿ: ವಸಂತ ಬಿ ಈಶ್ವರಗೆರೆ
Watch Video: ಗುಜರಾತಿನಲ್ಲಿ ಕುಡಿದು ವಾಹನ ಚಲಾಯಿಸಿ ಅಪಘಾತ: ಓರ್ವ ಮಹಿಳೆ ಸಾವು, ಮೂವರಿಗೆ ಗಾಯ