ನವದೆಹಲಿ:ಭಾರತದ ರಾಜಕೀಯ ಭವಿಷ್ಯವನ್ನು ನಿರ್ಧರಿಸಲಿರುವ ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ, ಅಸ್ಸಾಂ ಮತ್ತು ಪುದುಚೇರಿ ರಾಜ್ಯಗಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು (ಮೇ 4) ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಆರಂಭವಾಗಲಿದೆ. 823 ಕ್ಷೇತ್ರಗಳ ಅಭ್ಯರ್ಥಿಗಳ ಹಣೆಬರಹ ಇಂದು ಮಧ್ಯಾಹ್ನದ ವೇಳೆಗೆ ಬಹುತೇಕ ಸ್ಪಷ್ಟವಾಗಲಿದೆ.
ಬೆಳಿಗ್ಗೆ 8:00: ಮೊದಲು ಅಂಚೆ ಮತಗಳ (Postal Ballots) ಎಣಿಕೆ ಆರಂಭವಾಗಲಿದೆ.
ಬೆಳಿಗ್ಗೆ 8:30: ಇವಿಎಂ (EVM) ಮತಗಳ ಎಣಿಕೆ ಶುರುವಾಗಲಿದ್ದು, ಆರಂಭಿಕ ಟ್ರೆಂಡ್‌ಗಳು ಹೊರಬೀಳಲಿವೆ.
ಪಶ್ಚಿಮ ಬಂಗಾಳದಲ್ಲಿ ಮಮತಾ ಬ್ಯಾನರ್ಜಿ ಮತ್ತು ಬಿಜೆಪಿ ನಡುವಿನ ಹಣಾಹಣಿ ಹಾಗೂ ತಮಿಳುನಾಡಿನಲ್ಲಿ ಡಿಎಂಕೆ-ಎಐಎಡಿಎಂಕೆ ನಡುವಿನ ಸಮರ ಇಡೀ ದೇಶದ ಗಮನ ಸೆಳೆದಿದೆ.
ಎಲ್ಲಾ ಮತ ಎಣಿಕೆ ಕೇಂದ್ರಗಳ ಸುತ್ತ ತ್ರಿಸ್ಟರದ ಭದ್ರತೆ ಕಲ್ಪಿಸಲಾಗಿದೆ.
ಚುನಾವಣಾ ಅಧಿಕಾರಿಗಳು ಮತ್ತು ಏಜೆಂಟ್‌ಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಪ್ರಕ್ರಿಯೆಯು ಸಂಪೂರ್ಣವಾಗಿ ಸಿಸಿಟಿವಿ ಕ್ಯಾಮೆರಾಗಳ ಕಣ್ಗಾವಲಿನಲ್ಲಿ ನಡೆಯಲಿದೆ.
ಪ್ರತಿ ಸುತ್ತಿನ ಎಣಿಕೆಯ ನಂತರ ಅಧಿಕೃತ ಅಂಕಿ-ಅಂಶಗಳನ್ನು ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿ ಅಪ್‌ಡೇಟ್ ಮಾಡಲಾಗುತ್ತದೆ.








