ಬೆಂಗಳೂರು : ವಿಧಾನಸಭಾ ಚುನಾವಣೆ ಸಮೀಪದ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಬೆಂಬಲಿಗರ ಒತ್ತಾಸೆಯಂತೆ ಕೋಲಾರ ಕ್ಷೇತ್ರದಿಂದ ಕಣಕ್ಕಿಳಿಯಲು ಸಿದ್ದರಾಮಯ್ಯ ನಿರ್ಧರಿಸಿದ್ದಾರೆ. ಜತೆಗೆ, ಬಾದಾಮಿ ಕ್ಷೇತ್ರದಿಂದಲೂ ಅಭ್ಯರ್ಥಿಯಾಗಲು ಬಯಸಿದ್ದಾರೆ ಎನ್ನಲಾಗಿದೆ. ಆದರೆ, ಎರಡು ಕಡೆ ಸ್ಪರ್ಧೆಗೆ ಹೈಕಮಾಂಡ್ ಗ್ರೀನ್ ಸಿಗ್ನಲ್ ನೀಡಲಿದ್ಯಾ..? ಎಂಬುದು ಸದ್ಯಕ್ಕಿರುವ ಕುತೂಹಲ.
ಹಲವು ಲೆಕ್ಕಾಚಾರ ಮಾಡಿ ಅಳೆದು ತೂಗಿ ಕೊನೆಗೆ ಬೆನ್ನಲ್ಲೇ ಕೋಲಾರ ಕ್ಷೇತ್ರದಿಂದಲೇ ಮಾಜಿ ಸಿಎಂ ಸಿದ್ದರಾಮಯ್ಯ ಚುನಾವಣಾ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಬೆಂಬಲಿಗರ ಒತ್ತಾಸೆಯಂತೆ ಕೋಲಾರದಿಂದ ಅದೃಷ್ಟ ಪರೀಕ್ಷೆಗೆ ಮುಂದಾಗುವ ಅಂತಿಮ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಹೇಳಲಾಗಿದೆ.
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಡವರಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತುಮಕೂರು ಜಿಲ್ಲೆಯ ತುರುವೇಕೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ರಾಜ್ಯದ ಬಡ ಜನರು ನೆಮ್ಮದಿಯಿಂದ ಊಟ ಮಾಡಬೇಕು, ಹಾಗಾಗಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ 10 ಕೆಜಿ ಅಕ್ಕಿ ನೀಡುತ್ತೇವೆ ಎಂದು ಹೇಳಿದರು.
ಸಿಎಂ ಬಸವರಾಜ ಬೊಮ್ಮಾಯಿ ಅವರು ಪ್ರಧಾನಿ ಮೋದಿ ಮುಂದೆ ನಾಯಿ ಮರಿಯಂತೆ ಇರ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿವಾದಾತ್ಮಕ ಹೇಳಿಕೆ ನೀಡಿದ್ದರು. ತಮ್ಮ ಹೇಳಿಕೆಗೆ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ. ತುರುವೇಕೆರೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ ಸಿಎಂ ಬೊಮ್ಮಾಯಿ ಬಗ್ಗೆ ಲಘುವಾಗಿ ಮಾತನಾಡಿಲ್ಲ, ನಮ್ಮ ಹಳ್ಳಿ ಭಾಷೆಯಲ್ಲಿ ಹಾಗೆ ಮಾತನಾಡುವುದು, ಪ್ರಧಾನಿ ಮೋದಿ ಮುಂದೆ ಬೊಮ್ಮಾಯಿ ನಾಯಿಮರಿಯಂತೆ ಇರ್ತಾರೆ ಅಷ್ಟೇ ಎಂದು ಹೇಳಿದೆ ಎಂದು ಸ್ಪಷ್ಟನೆ ನೀಡಿದರು. ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ನಾಯಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.ಸಿಎಂ ಬಸವರಾಜ ಬೊಮ್ಮಾಯಿಗೆ ಧೈರ್ಯವಿದ್ರೆ ಅಭಿವೃದ್ಧಿ ಬಗ್ಗೆ ಚರ್ಚೆಗೆ ಬರಲಿ, ಕಾಂಗ್ರೆಸ್ ಧಮ್ ಬಗ್ಗೆ ಪ್ರಶ್ನೆ ಮಾಡುವ ಸಿಎಂ ಬೊಮ್ಮಾಯಿ,ಮೋದಿ ಮುಂದೆ ನಾಯಿಯಂತೆ ಇರ್ತಾರೆ. ಬೊಮ್ಮಾಯಿಗೆ ಧಮ್, ತಾಕತ್ ಇದ್ರೆ ಕೇಂದ್ರದಿಂದ ಅನುದಾನ ತನ್ನಿ ಎಂದು ಸಿದ್ದರಾಮಯ್ಯ ಹೇಳಿದ್ದರು.
ಇದು 2022ರ ‘ಬೆಂಗಳೂರು ಸಿಟಿ’ಯ ಸಂಪೂರ್ಣ ‘ಕ್ರೈಂ ರಿಪೋರ್ಟ್’ | Bangalore Crime Report
BIGG NEWS : ಹಾವೇರಿಯಲ್ಲಿ 3 ದಿನಗಳ ‘ಕನ್ನಡ ಸಾಹಿತ್ಯ ಸಮ್ಮೇಳನ’ಕ್ಕೆ ನಾಳೆ ವಿಧ್ಯುಕ್ತ ಚಾಲನೆ