ಬೆಂಗಳೂರು: ಇಂದು ವಿಧಾನಸಭೆಯಲ್ಲಿ ಕೇಂದ್ರದ ಅನುದಾನ ತಾರತಮ್ಯ ಖಂಡಿಸುವಂತ ಹಾಗೂ ಅನುದಾನದ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವಂತ ನಿರ್ಣಯವನ್ನು ಮಂಡಿಸಿ, ರಾಜ್ಯ ಸರ್ಕಾರ ಅಂಗೀಕಾರ ಪಡೆದಿದೆ.
ಇಂದು ವಿಧಾನಸಭೆಯಲ್ಲಿ ಅನುದಾನ ತಾರತಮ್ಯ ಆರೋಪ ಕುರಿತು ನಿರ್ಣಯವನ್ನು ರಾಜ್ಯ ಸರ್ಕಾರದಿಂದ ಮಂಡಿಸಲಾಯಿತು. ಈ ನಿರ್ಣಯ ಮಂಡಿಸಿ ಮಾತನಾಡಿದಂತ ಸಚಿವ ಹೆಚ್ ಕೆ ಪಾಟೀಲ್ ಅವರು ಕೇಂದ್ರದಿಂದ ರಾಜ್ಯಕ್ಕೆ 68,200 ಕೋಟಿ ರೂ ತೆರಿಗೆ ನಷ್ಟವಾಗಿದೆ ಎಂಬುದಾಗಿ ಅಂಕಿ ಅಂಶಗಳನ್ನು ಓದಿ ಹೇಳಿದರು.
ಅನುದಾನ, ತೆರಿಗೆ ಪಾಲು, ಬರದ ಬಗ್ಗೆ ವಿವರಿಸಿದಂತ ಅವರು, ಅನುದಾನದ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯವನ್ನು ಮಂಡಿಸಿ ಅಂಗೀಕಾರವನ್ನು ಪಡೆದುಕೊಂಡರು.
ಅನುದಾನ ಬಗ್ಗೆ ಕೇಂದ್ರಕ್ಕೆ ಒತ್ತಾಯಿಸುವ ನಿರ್ಣಯವನ್ನು ಮಂಡಿಸಿದಾಗ, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಸದಸ್ಯರು ತೀವ್ರ ವಿರೋಧ ವ್ಯಕ್ತ ಪಡಿಸಿದರು. ಅಲ್ಲದೇ ರಾಜ್ಯ ಸರ್ಕಾರದ ವಿರುದ್ಧ ವಾಗ್ಧಾಳಿ, ಘೋಷಣೆ ಕೂಗಲಾಯಿತು. ಇದರ ನಡುವೆ ನಿರ್ಣಯವನ್ನು ಮಂಡಿಸಿ, ಅಂಗೀಕಾರ ಪಡೆಯಲಾಯಿತು.
ರಾಜ್ಯ ಸರ್ಕಾರ ಮಂಡಿಸಿ ಅಂಗೀಕಾರ ಪಡೆದ ನಿರ್ಣಯದಲ್ಲಿ ಏನಿದೆ.?
ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.೫೦% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟçದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ.
“ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ ಮೇಲೆ ನಿರ್ಧರಿಸುವಂತೆ” ಒತ್ತಾಯಿಸಿ, ಭಾರತದಾದ್ಯಂತ ರೈತರು ಚಳುವಳಿ, ಆಂದೋಲನ ಮತ್ತು ಹೋರಾಟ ಅನಿವಾರ್ಯವಾಗಿದೆ.
ರಾಷ್ಟçದ ಅನ್ನದಾತರೆನ್ನಿಸಿಕೊಳ್ಳುವ ಮತ್ತು ಅರ್ಥವ್ಯವಸ್ಥೆಯ ಸರ್ವಾಂಗೀಣ ಅಭಿವೃದ್ಧಿಯ ಬೇರ್ಪಡಿಸಲಾಗದ ಭಾಗವಾಗಿರುವ ಕೃಷಿಕರ ಆದಾಯವನ್ನು ಸಂರಕ್ಷಿಸುವ ತನ್ಮೂಲಕ ಕೃಷಿಯನ್ನು ಲಾಭದಾಯಕಗೊಳಿಸುವ ಉದ್ದೇಶದಿಂದ ವಾಣಿಜ್ಯ ಬೆಳೆಗಳಿಗೆ ಬೆಲೆ ನಿಗದಿಪಡಿಸುವ ಮಾನದಂಡವನ್ನು ಇತರೆ ಕೃಷಿ ಉತ್ಪನ್ನಗಳಿಗೂ ಅನುಸರಿಸುವ ಕ್ರಮಗಳನ್ನು ಕರ್ನಾಟಕ ಬೆಂಬಲಿಸುತ್ತಲೇ ಬಂದಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕೇಂದ್ರ ಸರ್ಕಾರದ ಕ್ರಮಗಳು ರೈತ ವಿರೋಧಿ ನೀತಿಯಾಗಿ ರೈತನಿಗೆ ಕನಿಷ್ಠ ಬೆಂಬಲ ಬೆಲೆ ದೊರಕದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿವೆ.
ಈ ಹಿನ್ನೆಲೆಯಲ್ಲಿ ರೈತರ ಎಲ್ಲಾ ಬೆಳೆಗಳಿಗೂ ಕನಿಷ್ಠ ಬೆಂಬಲ ಬೆಲೆ ನಿಗದಿಪಡಿಸಲು ಕೇಂದ್ರ ಸರಕಾರ ಶಾಸನ ರೂಪಿಸುವಂತೆ ಈ ಸದನ ಒಕ್ಕೂರಲಿನಿಂದ ಒತ್ತಾಯಿಸುತ್ತದೆ. ರೈತರೊಂದಿಗೆ ಸಂಘರ್ಷದ ಹಾದಿ ತುಳಿಯದೇ ಅತ್ಯಂತ ನ್ಯಾಯಯುತವಾದ ಅವರ ಬೇಡಿಕೆಗಳನ್ನು ಈಡೇರಿಸಬೇಕೆಂದು ಈ ಸದನ ಒತ್ತಾಯಿಸುತ್ತದೆ.
BIG Alert: ಪೋಷಕರೇ..! ನೀವು ಮಕ್ಕಳಿಗೆ ‘ಬಾಂಬೆ ಮಿಠಾಯಿ’ ಕೊಡಿಸ್ತಾ ಇದ್ದೀರಾ.? ಇಲ್ಲಿದೆ ‘ಶಾಕಿಂಗ್ ನ್ಯೂಸ್’
ALEART: ‘ಆ್ಯಂಟಿಬಯೋಟಿಕ್’ ಮಾತ್ರೆ ಸೇವನೆ ಬಗ್ಗೆ ಕೇಂದ್ರ ಆರೋಗ್ಯ ಇಲಾಖೆಯಿಂದ ಮಹತ್ವದ ಎಚ್ಚರಿಕೆ!