ಬೆಂಗಳೂರು : ಫೆಬ್ರವರಿ 12 ರಿಂದ ಫೆಬ್ರವರಿ 23 ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಿಧಾನಮಂಡಲದ ಅಧಿವೇಶನದ ಮೊದಲ ದಿನವಾದ ಫೆಬ್ರವರಿ 12ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ. ಈ ಸಂಬಂಧ ಇಂದಿನ ಸಚಿವ ಸಂಪುಟಲ್ಲಿ ಚರ್ಚೆ ಮಾಡಿ ತೀರ್ಮಾನಿಸಲಾಗಿದೆ.
ಮುಂದೆ ಲೋಕಸಭಾ ಚುನಾವಣೆ ಬರಲಿದೆ. ಹೀಗಾಗಿ ಚುನಾವಣೆ ನೀತಿ ಸಂಹಿತೆ ಇದೇ ಮಾರ್ಚ್‌ನಿಂದಲೇ ಜಾರಿಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ರಾಜ್ಯ ಬಜೆಟ್ ನ್ನು ಫೆಬ್ರವರಿಯಲ್ಲಿ ಮಂಡಿಸಲು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೀರ್ಮಾನಿಸಿದೆ. ಮುಂದೆ ಲೋಕಸಭಾ ಚುನಾವಣೆ ಇರುವುದರಿಂದ ಈ ಬಾರಿ ಸಿಎಂ ಸಿದ್ದರಾಮಯ್ಯನವರು ಮಂಡಿಸಲಿರುವ ಬಜೆಟ್, ಸಾರ್ವಜನಿಕ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ. ಹಣಕಾಸು ಖಾತೆಯನ್ನೂ ನಿರ್ವಹಿಸುತ್ತಿರುವ ಸಿಎಂ ಸಿದ್ದರಾಮಯ್ಯ ಅವರು, 2024 -25ನೇ ಸಾಲಿನ ಬಜೆಟ್ ಮಂಡನೆಗೆ ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಲೋಕಸಭೆ ಚುನಾವಣೆಯ ಹಿನ್ನೆಲೆಯಲ್ಲಿ ರಾಜ್ಯದ ಜನರಲ್ಲಿ ಹೊಸ ಭರವಸೆ ಮೂಡಿಸುವ, ನಿರೀಕ್ಷೆಗೆ ಸ್ಪಂದಿಸುವ ಗಂಭೀರ ಸವಾಲು ಎದುರಾಗಿದೆ. ಬಜೆಟ್ ಮಂಡನೆಯಲ್ಲಿ ಅನುಭವಿಯಾಗಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಈ ಬಜೆಟ್, ದಾಖಲೆಯ 15ನೇ ಬಜೆಟ್ ಆಗಲಿದೆ. 2023ರ ಜುಲೈ 7ರಂದು ಸಿದ್ದರಾಮಯ್ಯ, ತಮ್ಮ 14ನೇ ಬಜೆಟ್ ಮಂಡಿಸಿದ್ದರಾಗಿದೆ.