ದುಬೈ : ಭಾರೀ ಮಳೆಯಿಂದಾಗಿ ಒಮಾನ್ ನಲ್ಲಿ ಪ್ರವಾಹ ಉಂಟಾಗಿದೆ. ಇದರಿಂದಾಗಿ ಸುಮಾರು 17 ಜನರು ಸಾವನ್ನಪ್ಪಿದ್ದಾರೆ. ಭಾರಿ ಮಳೆಯ ಸಮಯದಲ್ಲಿ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವಾಹನವು ಅಪಘಾತಕ್ಕೀಡಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬಸ್ಸಿನಲ್ಲಿದ್ದ ಚಾಲಕ ಮತ್ತು ಮಕ್ಕಳು ಸಾವನ್ನಪ್ಪಿದ್ದಾರೆ. ಒಮಾನ್ ನ ಉತ್ತರ ಅಲ್ ಶರ್ಕಿಯಾ ಪ್ರಾಂತ್ಯವು ಹೆಚ್ಚು ಹಾನಿಗೊಳಗಾಗಿದೆ.
ಪ್ರವಾಹ ಪೀಡಿತ ಪ್ರದೇಶಗಳಿಂದ ನಾಗರಿಕರನ್ನು ಸ್ಥಳಾಂತರಿಸಲು ರಾಯಲ್ ಒಮಾನ್ ಪೊಲೀಸರು ಮತ್ತು ಒಮಾನ್ ಸೇನೆಯನ್ನು ನಿಯೋಜಿಸಲಾಗಿದೆ ಎಂದು ಒಮಾನ್ ನ ಸರ್ಕಾರಿ ಸುದ್ದಿ ಸಂಸ್ಥೆ ತಿಳಿಸಿದೆ.
ಏತನ್ಮಧ್ಯೆ, ದುಬೈನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ. ಗಂಟೆಗೆ 70 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು, ಮಳೆ ಮತ್ತು ಆಲಿಕಲ್ಲು ಮಳೆಯಾಗಲಿದೆ ಎಂದು ರಾಷ್ಟ್ರೀಯ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.