Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!

25/02/2026 7:11 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

25/02/2026 7:05 PM

ಚೈನ್ನೈನಲ್ಲಿ ತಾಂತ್ರಿಕ ದೋಷದಿಂದ 5 ಗಂಟೆ ಏರ್ಪೋರ್ಟ್ ನಲ್ಲೆ ನಿಂತ ಇಂಡಿಗೋ ವಿಮಾನ : ಪ್ರಯಾಣಿಕರು ಅಕ್ರೋಶ!

25/02/2026 7:02 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
KARNATAKA

ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಖಂಡನೀಯ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

By kannadanewsnow0924/02/2025 2:21 PM

ಬೆಳಗಾವಿ: ಬೆಳಗಾವಿಯಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ಸರ್ಕಾರಿ ನೌಕರನ ಮೇಲೆ ಹಲ್ಲೆ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಯಾಗಲೇ ಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಕುವೆಂಪುನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಸೋಮವಾರ ಮಾತನಾಡಿದ ಸಚಿವರು, ಘಟನೆ ನಡೆದ ತಕ್ಷಣವೇ ನಾನು ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿ, ಆರೋಪಿಗಳನ್ನು ಬಂಧಿಸುವಂತೆ ಸೂಚನೆ ನೀಡಿದೆ. ಬೆಳಗಾವಿಯಲ್ಲಿ ಭಾಷಾ ಸೌಹಾರ್ದತೆ ವೃದ್ಧಿಸುತ್ತಿದೆ, ನಾಡ ಪ್ರೇಮ ಪಸರಿಸುತ್ತಿದೆ. ಇದರ ಮಧ್ಯೆ ಸಮಾಜಘಾತುಕ ಕಿಡಿಗೇಡಿಗಳು ಭಾಷೆಯ ಹೆಸರಿನಲ್ಲಿ ಪುಂಡತನ ಮೆರೆಯುತ್ತಿರುವುದು ಅತ್ಯಂತ ಖಂಡನೀಯ ಎಂದರು.

ನಾವು ಎಲ್ಲರೂ ಸ್ವರಾಜ್ಯದ ಬಗ್ಗೆ ಮಾತನಾಡುತ್ತೇವೆ. ನಾವು ಮೊದಲಿಗೆ ಭಾರತೀಯರು, ಕನ್ನಡಿಗರು, ಕರ್ನಾಟಕದ ಸುವರ್ಣ ಮಹೋತ್ಸವನ್ನು ಅದ್ದೂರಿಯಾಗಿ ಅಚರಿಸಿದ್ದೇವೆ. ಸ್ವರಾಜ್ಯದ ಬಗ್ಗೆ ಮಾತನಾಡುವಾಗ ಕೆಲವೊಂದು ಪುಂಡರು ಬಂದು ರಾಜಕಾರಣದ ಬೇಳೆ ಬೇಯಿಸಿಕೊಳ್ಳಲು ಮುಂದಾಗಿರುವುದನ್ನು ಖಂಡಿಸುತ್ತೇನೆ ಎಂದು ಹೇಳಿದರು.

ನನ್ನ ಕ್ಷೇತ್ರದಲ್ಲಿ ಈ ಘಟನೆ ನಡೆದಿದ್ದು, ನಾವು ಭಾಷಾ ವಿವಾದವನ್ನೇ ಬೇರು ಸಮೇತ ಕಿತ್ತು ಹಾಕಿದ್ದೇವೆ. ನಮಗೆ ರಜೆ ದಿನಗಳು ಇವೆ. ಆದರೆ, ಸಾರಿಗೆ, ಆರೋಗ್ಯ, ಪೊಲೀಸ್ ಇಲಾಖೆ ನೌಕರರು ಹಬ್ಬದಿನಗಳಲ್ಲೂ ದುಡಿಯುತ್ತಾರೆ. ಇಂಥವರ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಲಾಗುವುದು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು.

ಮೊದಲಿಗೆ ನಾವು ಭಾರತೀಯರು. ದೇಶ ಅಂತ ಬಂದರೆ ಎಲ್ಲರೂ ಒಂದೇ. ನಾವು ನಾವುಗಳೇ ಜಗಳವಾಡುವುದು ಬೇಡ. ಎಲ್ಲರಿಗೂ ಭಾಷಾ ಅಭಿಮಾನ ಇರುತ್ತದೆ. ಈ ಪ್ರಕರಣವನ್ನು ಇಲ್ಲಿಗೆ ನಿಲ್ಲಿಸೋಣ ಎಂದು ಹೇಳಿದರು.

ಕಂಡಕ್ಟರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಸಂಬಂಧ ಪ್ರತಿಕ್ರಿಯಿಸಿದ ಸಚಿವರು, ಈ ಕುರಿತು ತನಿಖೆಯಿಂದ ಸತ್ಯಾಸತ್ಯತೆ ಹೊರಬರಲಿದೆ. ಕೆಳಹಂತದ ಅಧಿಕಾರಿಗಳಿಂದ ಕೆಲವು ತಪ್ಪುಗಳಾಗಿವೆ. ಈ ಸಂಬಂಧ ನಾನು ಈಗಾಗಲೇ ಗೃಹ ಸಚಿವರು, ಡಿಐಜಿ ಅವರೊಂದಿಗೆ ಮಾತನಾಡಿದ್ದು, ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಮನವಿ ಮಾಡಿರುವೆ ಎಂದರು.

ಗೃಹಲಕ್ಷ್ಮೀ ಹಣ ಶೀಘ್ರವೇ ಬಿಡುಗಡೆ

ವಿರೋಧ ಪಕ್ಷಗಳು ನಮ್ಮ ಗ್ಯಾರಂಟಿ ಯೋಜನೆಗಳ ಬಗ್ಗೆ ಸುಖಾಸುಮ್ಮನೆ ಅಪಪ್ರಚಾರ ಮಾಡುತ್ತಿವೆ. ಇನ್ನು 8 ದಿನಗಳಲ್ಲಿ ಯಜಮಾನಿಯರ ಖಾತೆಗೆ ಹಣ ಸಂದಾಯವಾಗಲಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ವೈದ್ಯರು ಅನುಮತಿ ಕೊಟ್ಟರೆ ಪ್ರಯಾಣ

ನಾಳೆ ಮತ್ತೊಂದು ಸಿಟಿ ಸ್ಕ್ಯಾನ್ ಮಾಡಿಸುತ್ತಿದ್ದು, ವೈದ್ಯರು ಅನುಮತಿ ನೀಡಿದರೆ ಬೆಂಗಳೂರಿಗೆ ಪ್ರಯಾಣಿಸುವೆ. ಮಾರ್ಚ್ 3 ರಿಂದ ನಡೆಯಲಿರುವ ಬಜೆಟ್ ಅಧಿವೇಶನದಲ್ಲಿ ಪಾಲ್ಗೊಳ್ಳುವೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ವಿಶ್ರಾಂತಿಯ ಅಗತ್ಯವಿದೆ: ಸಚಿವ ರಾಮಲಿಂಗಾರೆಡ್ಡಿ

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಕುವೆಂಪುನಗರದಲ್ಲಿರುವ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. “ನಾನು ಬೆಳಗಾವಿಗೆ ಬರಲು ಸಾಧ್ಯವಾಗಿರಲಿಲ್ಲ. ಹೀಗಾಗಿ ಅವರ ಆರೋಗ್ಯ ವಿಚಾರಿಸಲು ಬಂದಿರುವೆ. ಸಚಿವೆ ಲಕ್ಷ ಹೆಬ್ಬಾಳಕರ್ ಅವರಿಗೆ ಇನ್ನು ವಿಶ್ರಾಂತಿಯ ಅಗತ್ಯವಿದೆ’ ಎಂದು ಸಚಿವ ರಾಮಲಿಂಗಾರೆಡ್ಡಿ ಹೇಳಿದರು.

ಬೆಂಗಳೂರಿನ ಆರ್ ಓ ಘಟಕಗಳ ನಿರ್ವಹಣೆಯನ್ನು BWSSBಗೆ ಹಸ್ತಾಂತರಿಸುವಂತೆ ಡಿಸಿಎಂ ಡಿಕೆಶಿ ಆದೇಶ

BREAKING : ರಾಜ್ಯದ ವಾಹನ ಸವಾರರಿಗೆ ಗುಡ್ ನ್ಯೂಸ್ : ‘HSRP’ ನಂಬರ್ ಪ್ಲೇಟ್ ಅಳವಡಿಕೆ ಮಾ.31ರವರೆಗೆ ವಿಸ್ತರಣೆ

Share. Facebook Twitter LinkedIn WhatsApp Email

Related Posts

ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!

25/02/2026 7:11 PM1 Min Read

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

25/02/2026 7:05 PM1 Min Read

BREAKING : ರಾಜ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 300 ಕೋಟಿ ಹಣ ಬಿಡುಗಡೆ

25/02/2026 6:52 PM2 Mins Read
Recent News

ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!

25/02/2026 7:11 PM

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

25/02/2026 7:05 PM

ಚೈನ್ನೈನಲ್ಲಿ ತಾಂತ್ರಿಕ ದೋಷದಿಂದ 5 ಗಂಟೆ ಏರ್ಪೋರ್ಟ್ ನಲ್ಲೆ ನಿಂತ ಇಂಡಿಗೋ ವಿಮಾನ : ಪ್ರಯಾಣಿಕರು ಅಕ್ರೋಶ!

25/02/2026 7:02 PM

ALERT : ಹೆಡ್ ಫೋನ್ ಬಳಕೆದಾರರೇ ಎಚ್ಚರ : ಇವುಗಳಲ್ಲಿ ಅಪಾಯಕಾರಿ ರಾಸಾಯನಿಕ ಅಂಶ ಪತ್ತೆ !

25/02/2026 6:56 PM
State News
KARNATAKA

ಉರ್ದು ಕೂಡ ಒಂದು ಭಾಷೆ ತಾನೇ? : ಉರ್ದು ಭಾಷೆಯಲ್ಲಿ ಸರ್ಕಾರಿ ಆಹ್ವಾನ ಪತ್ರಿಕೆ ಕುರಿತು, ದಿನೇಶ್ ಗುಂಡುರಾವ್ ಸಮರ್ಥನೆ!

By kannadanewsnow0525/02/2026 7:11 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ಉರ್ದು ಭಾಷೆಯನ್ನು ಬಳಸಿದ್ದಕ್ಕೆ ವ್ಯಕ್ತವಾಗಿರುವ ಟೀಕೆಗಳ ವಿರುದ್ಧ ಆರೋಗ್ಯ ಸಚಿವ…

BREAKING : ಚಿಕ್ಕಬಳ್ಳಾಪುರದಲ್ಲಿ ಘೋರ ದುರಂತ : ರೆಸಾರ್ಟ್‌ನ ಈಜುಕೊಳದಲ್ಲಿ ಮುಳುಗಿ ಮಹಿಳೆ ದಾರುಣ ಸಾವು!

25/02/2026 7:05 PM

BREAKING : ರಾಜ್ಯದ ಕಬ್ಬು ಬೆಳೆಗಾರರಿಗೆ ಗುಡ್ ನ್ಯೂಸ್ : ಸರ್ಕಾರದಿಂದ 300 ಕೋಟಿ ಹಣ ಬಿಡುಗಡೆ

25/02/2026 6:52 PM

`ಪಾಸ್ ಪೋರ್ಟ್’ ವೆರಿಫಿಕೇಶನ್ ಗೆ ಠಾಣೆಗೆ ಅಲೆಯುವಂತಿಲ್ಲ : `ಬಾಡಿ ಕ್ಯಾಮರಾ’ದ ಜೊತೆಗೆ ಮನೆಗೆ ಬರಲಿದ್ದಾರೆ ಪೊಲೀಸರು !

25/02/2026 6:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.