ಕೋಲಾರ : ಶಿಕ್ಷಕರೊಬ್ಬರು ತರಗತಿಯಲ್ಲಿ ಪಾಠ ಮಾಡುತ್ತಿದ್ದ ವೇಳೆ ಏಕಾಏಕಿ ಮಾನಸಿಕಅಸ್ವಸ್ಥ ವ್ಯಕ್ತಿಯೊಬ್ಬ ದಾಳಿ ನಡೆಸಿ ಗಂಭೀರವಾಗಿ ಹಲ್ಲೆ ನಡೆಸಿದ ಘಟನೆ ಶ್ರೀನಿವಾಸಪುರ ತಾಲೂಕಿನ ಕೂರಿಗೇಪಲ್ಲಿ ಶಾಲೆಯಲ್ಲಿ ನಡೆದಿದೆ.
ಕೂರಿಗೇಪಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕ ವೆಂಕಟಶಿವ ಎಂಬುವವರು ಹಲ್ಲೆಗೊಳಗಾದ ಶಿಕ್ಷಕ ಎಂದು ಗುರುತಿಸಲಾಗಿದ್ದು, ಗ್ರಾಮದ ಮಂಜುನಾಥ್ ಎಂಬಾತ ಮಾನಸಿಕ ಅಸ್ವಸ್ಥ ಹಲ್ಲೆ ಮಾಡಿದ್ದಾನೆ.
ಗಾಯಗೊಂಡ ಶಿಕ್ಷಕನನ್ನು ಆಂಬುಲೆನ್ಸ್ ಮೂಲಕ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ರಾಯಲ್ಪಾಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ತನಿಖೆ ನಡೆಸುತ್ತಿದ್ದಾರೆ.