ಕೋಲಾರ: ಜಿಲ್ಲೆಯಲ್ಲಿ ಒತ್ತುವರಿ ತೆರವು ವೇಳೆ ತಹಶೀಲ್ದಾರ್ ಅವರ ಮೇಲೆ ಕಲ್ಲಿನಿಂದ ಹಲ್ಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಬಂಗಾರಪೇಟೆ ತಾಲೂಕಿನ ಸಕ್ಕನಹಳ್ಳಿ ಗ್ರಾಮದಲ್ಲಿ ಘಟನೆ ಘಟನೆ ಜರುಗಿದ್ದು, ಬಂಗಾರಪೇಟೆ ತಹಶೀಲ್ದಾರ್ ದಯಾನಂದ್ ಅವರ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ.
BIGG NEWS: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಭೇಟಿಯಾದ ಪೇಜಾವರಶ್ರೀ
ಇನ್ನು ಸಕ್ಕನಹಳ್ಳಿ ಗ್ರಾಮದ ಸರ್ವೆ ನಂ 29 ನಲ್ಲಿ ರವಿ ಸಿಂಗ್ ಎಂಬುವರು ಅಕ್ರಮವಾಗಿ ಸರ್ಕಾರಿ ಜಮೀನಿನಲ್ಲಿ ಕಾಂಪೌಂಡ್ ನಿರ್ಮಿಸಿಕೊಂಡಿದ್ದರು. ಈ ಸಂಬಂಧ ತಹಶೀಲ್ದಾರ್ ಅವರಿಗೆ ಸ್ಥಳೀಯರು ದೂರು ನೀಡಿದ್ದ ಹಿನ್ನೆಲೆ ತಹಶೀಲ್ದಾರ್ ದಯಾನಂದ್ ಅವರು, ಜಿಲ್ಲಾ ಭೂಮಾಪನ ಅಧಿಕಾರಿಗಳಿಂದ ಸರ್ವೆ ನಡೆಸಿ, ಒತ್ತುವರಿದಾರರಿಗೆ ಎರಡು ಬಾರಿ ನೋಟಿಸ್ ನೀಡಿದ್ರು ಪ್ರತಿಕ್ರಿಯೆ ನೀಡದ ಹಿನ್ನೆಲೆ ಇಂದು ಒತ್ತುವರಿ ತೆರವಿಗೆ ಮುಂದಾಗಿದ್ರು.
BIGG NEWS: ಬಿಜೆಪಿ ಹಿರಿಯ ನಾಯಕ ಎಲ್.ಕೆ ಅಡ್ವಾಣಿ ಭೇಟಿಯಾದ ಪೇಜಾವರಶ್ರೀ
ಈ ವೇಳೆ ಒತ್ತುವರಿ ತೆರವಿಗೆ ಅಡ್ಡಿಪಡಿಸಿದ್ದಲ್ಲದೇ ತಹಶೀಲ್ದಾರ್ ದಯಾನಂದ್ ಅವರ ಮೇಲೆ ಒತ್ತುವರಿದಾರ ರವಿಸಿಂಗ್ ಕಲ್ಲುಗಳಿಂದ ಹಲ್ಲೆ ನಡೆಸಲು ಮುಂದಾದ ವೇಳೆ, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇನ್ನು ಬಂಗಾರಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.