ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ಗೆ ಶಾಸಕ ಜನಾರ್ದನ ರೆಡ್ಡಿ ನಿಂದನೆ ಮಾಡಿರುವ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಶಾಸಕ ಜನಾರ್ದನ ರೆಡ್ಡಿ ನಿವಾಸಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ರೆಡ್ಡಿ ಮನೆ ಮುಂದೆ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದು ಬೆಂಗಳೂರಿನ ಸದಾಶಿವನಾಗರದಲ್ಲಿರುವ ಗಾಲಿ ಜನಾರ್ಧನ ರೆಡ್ಡಿ ನಿವಾಸದ ಮುಂದೆ ಪ್ರತಿಭಟನೆ ಮಾಡುತ್ತಿದ್ದಾರೆ.
ಹೌದು ಡಿಸಿಎಂ ಡಿಕೆ ಶಿವಕುಮಾರ್ ಜನಾರ್ಧನ ರೆಡ್ಡಿ ನಿಂದನೆ ಮಾಡಿರುವ ಆರೋಪ ಹಿನ್ನೆಲೆಯಲ್ಲಿ ಬೆಂಗಳೂರಿನ ಜನಾರ್ಧನ ರೆಡ್ಡಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ. ಕಾಂಗ್ರೆಸ್ ಕಾರ್ಯಕರ್ತರಿಂದ ಭಾರಿ ಹೈಡ್ರಾಮಾ ನಡೆದಿದೆ. ಮನೋಹರ ನೇತೃತ್ವದಲ್ಲಿ ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನ ನಡೆಸಲಾಗಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ ಮನೋಹರ್ ನೇತೃತ್ವದಲ್ಲಿ ಪ್ರತಿಭೆ ನಡೆಸುತ್ತಿದ್ದು ಕಾರ್ಯಕರ್ತರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.








