ಹುಬ್ಬಳ್ಳಿ : ರಾಜ್ಯದಲ್ಲಿ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ನಿರ್ಬಂಧ ಹೇರಿದ ಬೆನ್ನಲ್ಲೇ, ಇದೀಗ ಹುಬ್ಬಳ್ಳಿಯಲ್ಲಿ ಆರೆಸ್ಸೆಸ್ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿದೆ. ಕೋಟಿಲಿಂಗೇಶ್ವರ ನಗರದಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ್ದಾರೆ.
ಹುಬ್ಬಳ್ಳಿಯಲ್ಲಿರುವ ಆರ್ ಎಸ್ ಎಸ್ ಕಚೇರಿಗೆ ಮುತ್ತಿಗೆ ಹಾಕಲು ಯುವ ಕಾಂಗ್ರೆಸ್ ಪ್ರತಿಭಟನಾಕಾರರು ಯತ್ನಿಸಿದರು. ಈ ವೇಳೆ ಗೋಕುಲ ರಸ್ತೆಯಲ್ಲಿಯೇ ಪೊಲೀಸರು ಪ್ರತಿಭಟನಾಕಾರರನ್ನು ತಡೆದಿದ್ದಾರೆ. ಸುಮಾರು ಮೂವತ್ತಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.