ಬೆಳಗಾವಿ: ದಿನೇ ದಿನೇ ಕೋಮುಸೌಹಾರ್ದತೆಯನ್ನು ಕೆಡಿಸುವಂತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಜಿಲ್ಲೆಯಲ್ಲಿ ಇಂದು ಮಹಿಳೆಯೊಬ್ಬರನ್ನು ಮುಸ್ಲೀಂ ಮತಾಂತರಕ್ಕೆ ಯತ್ನಿಸಿದಂತ ಘಟನೆ ನಡೆದಿದೆ. ಅಲ್ಲದೇ ಈ ಸಂಬಂಧ ದೂರು ದಾಖಲಾಗಿದೆ.
ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಮುನವಳ್ಳಿಯಲ್ಲಿ ಮುಸ್ಲೀಂ ಮತಾಂತರಕ್ಕೆ ಮಹಿಳೆಯೊಬ್ಬರನ್ನು ಯತ್ನಿಸಿದಂತ ಘಟನೆ ನಡೆದಿದೆ. ವಿಷಯ ತಿಳಿದು ಮಹಿಳೆಯ ನಿವಾಸಕ್ಕೆ ಬಿಜೆಪಿ ಮುಖಂಡರು ಭೇಟಿ ನೀಡಿದ್ದಾರೆ.
ಬಿಜೆಪಿ ಜಿಲ್ಲಾಧ್ಯಕ್ಷ ಸುಭಾಷ್, ಮಾಜಿ ಶಾಸಕ ಸಂಜಯ್ ಪಾಟೀಲ್, ವಿರೂಪಾಕ್ಷ ಮಾಮನಿ ಸೇರಿದಂತೆ ಸ್ಛಳೀಯ ನಾಯಕರು ಭೇಟಿ ನೀಡಿ, ಸಂತ್ರಸ್ತ ಮಹಿಳೆಗೆ ಧೈರ್ಯ ತುಂಬಿ, ಸಾಂತ್ವಾನ ಹೇಳಿದ್ದಾರೆ.
ಇದೇ ಸಂದರ್ಭದಲ್ಲಿ ಮಹಿಳೆಯ ಕುಟುಂಬಸ್ಥರು ತಮಗೆ ಜೀವ ಭಯವಿದೆ. ರಕ್ಷಣೆ ಕೊಡಿಸುವಂತೆ ಕೋರಿ ಕೊಂಡಿದೆ. ಬಳಿಕ ಪೊಲೀಸರಿಗೆ ದೂರು ನೀಡಲಾಗಿದೆ.
ಇಸ್ಲಾಂ ದೇಶಗಳಲ್ಲಿ ಮುಸ್ಲೀಮರ ಜನಸಂಖ್ಯೆ ಕಡಿಮೆಯಾಗುತ್ತಿದ್ದು, ಭಾರತದಲ್ಲಿ ವೇಗವಾಗಿ ಹೆಚ್ಚಾಗುತ್ತಿದೆ: ಬೊಮ್ಮಾಯಿ
ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ