ದಕ್ಷಿಣಕನ್ನಡ : ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕೇಸ್ ನಲ್ಲಿ ಬಿಎಸ್ ಯಡಿಯೂರಪ್ಪಗೆ ಅರೆಸ್ಟ್ ವಾರೆಂಟ್ ನೀಡಿರುವ ವಿಚಾರವಾಗಿ ಕಾರವಾರದಲ್ಲಿ ಸಂಸದ ವಿಶ್ವೇಶ್ವರ ಹೆಗಡೆ ಕಾವೇರಿ ಆರೋಪಿಸಿದ್ದು,ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ಕಾರವಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪ ಮೇಲೆ ವಿಶ್ವಾಸವಿಟ್ಟು ಹೇಳಿಕೆಯನ್ನು ನೀಡುತ್ತಿದ್ದೇನೆ. ಆರೋಪ ಮಾಡಿದ್ದ ಮಹಿಳೆ ಪ್ರತಿನಿತ್ಯ ದೂರು ಕೊಡುತ್ತಿದ್ದವಳು. ಬಿಎಸ್ ಯಡಿಯೂರಪ್ಪ ಅವರಂತಹ ಹಿರಿಯ ನಾಯಕರಿಗೆ ಕಪ್ಪು ಚುಕ್ಕೆ ತರಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದರು.
ನಾನು ಇನ್ನೇನು ಹೆಚ್ಚು ಹೇಳಲು ಬಯಸುವುದಿಲ್ಲ. ಯಡಿಯೂರಪ್ಪ ಆರೋಪ ಮುಕ್ತರಾಗಿ ಹೊರಬರುವ ವಿಶ್ವಾಸವಿದೆ. ಇದೊಂದು ರಾಜಕೀಯ ಪ್ರೇರಿತ ಷಡ್ಯಂತ್ರದ ಭಾಗವಾಗಿದೆ ಎಂದು ಕಾರವಾರದಲ್ಲಿ ಸಂಸದ ವಿಶ್ವೇಶ್ವರಹೆಗ್ಡೆ ಕಾಗೇರಿ ಅವರು ತಿಳಿಸಿದರು.