ಬೆಂಗಳೂರು: ಟಿಇಟಿ ಪರೀಕ್ಷೆ ಪಾಸು ಮಾಡಿದಂತ ಪ್ರಾಥಮಿಕ ಶಾಲಾ ಶಿಕ್ಷಕರು 6, 7ನೇ ತರಗತಿಗೆ ಬೋಧಿಸಲು ಅರ್ಹರು ಎಂಬುದಾಗಿ ಸರ್ಕಾರ ರಾಜ್ಯ ಪತ್ರದಲ್ಲಿ ಅಧಿಕೃತ ಆದೇಶ ಮಾಡಿತ್ತು. ಈ ಬೆನ್ನಲ್ಲೇ ಶಿಕ್ಷಕರ ಹುದ್ದೆ ಆಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟಿಇಟಿ ಪರೀಕ್ಷೆಗೆ ಅರ್ಜಿ ಆಹ್ವಾನಿಸಲಾಗಿದೆ. ನವೆಂಬರ್.9 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಮಾಹಿತಿ ನೀಡಿದ್ದು, ಬೆಳಕಿನ ಹಬ್ಬ ದೀಪಾವಳಿಯ ಮುನ್ನ, ಬಹು ದಿನಗಳಿಂದ ನಿರೀಕ್ಷೆಯಲ್ಲಿದ್ದ ಶಿಕ್ಷಕರ ನೇಮಕಾತಿ ಪ್ರಕ್ರಿಯೆಗೆ ಇದೀಗ ಚಾಲನೆ ದೊರಕಿರುವುದನ್ನು ತಿಳಿಸಲು ನನಗೆ ಅತೀವ ಸಂತೋಷವಾಗುತ್ತಿದೆ ಎಂದಿದ್ದಾರೆ.
ಈ ಪ್ರಕ್ರಿಯೆಯ ಭಾಗವಾಗಿ ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ) ಕುರಿತ ಅಧಿಸೂಚನೆ ಹೊರಡಿಸಲಾಗುತ್ತಿದ್ದು, ಅಭ್ಯರ್ಥಿಗಳು ಅರ್ಜಿಯನ್ನು ಆನ್ ಲೈನ್ ನಲ್ಲಿ 23.10.2025 ರಿಂದ 09.11.2025 ರವರೆಗೆ ಸಲ್ಲಿಸಬಹುದು. ಪರೀಕ್ಷೆಯನ್ನು 07.12.2025 ರಂದು ನಡೆಸಲಾಗುತ್ತದೆ. ಪರೀಕ್ಷಾ ಪ್ರಕ್ರಿಯೆಯನ್ನು ಶೀಘ್ರವಾಗಿ ಪೂರ್ಣಗೊಳಿಸಿ 31.12.2025 ರಂದು ಫಲಿತಾಂಶ ಪ್ರಕಟಿಸುವ ಉದ್ದೇಶವಿದೆ ಎಂದು ತಿಳಿಸಿದ್ದಾರೆ.
ಕಲ್ಯಾಣ ಕರ್ನಾಟಕ ಪ್ರದೇಶದ ಮತ್ತು ಉಳಿದ ಶಿಕ್ಷಕರ ಹುದ್ದೆಗಳ ಭರ್ತಿಗೂ ಸಿಇಟಿ ಪರೀಕ್ಷೆಯ ಮೂಲಕ ಶೀಘ್ರದಲ್ಲೇ ಕ್ರಮ ಕೈಗೊಳ್ಳಲಾಗುವುದು. ಮುಂದಿನ ಟಿಇಟಿ ಪರೀಕ್ಷೆಗೆ ಸಜ್ಜಾಗುತ್ತಿರುವ ಎಲ್ಲ ಅಭ್ಯರ್ಥಿಗಳಿಗೆ ಹೃತ್ಪೂರ್ವಕ ಶುಭಾಶಯಗಳು ಅಂತ ಹೇಳಿದ್ದಾರೆ.
RSS ಚಟುವಟಿಕೆ ನಿಷೇಧ ಬಿಜೆಪಿಯೇ ಜಾರಿಗೆ ತಂದಿತ್ತು, ಈಗ ಅನುಷ್ಠಾನಕ್ಕೆ ಬಂದಿದೆ: ಸಚಿವ ಶರಣಪ್ರಕಾಶ್ ಪಾಟೀಲ್
Good News: ಬೆಂಗಳೂರಿನ ಜನತೆಗೆ ದೀಪಾವಳಿ ಗಿಫ್ಟ್: ಈ ಎಲ್ಲರಿಗೂ ‘ಎ’ ಖಾತೆ ವಿತರಣೆ, ಇಷ್ಟು ಶುಲ್ಕ ನಿಗದಿ