ಬೆಂಗಳೂರು : ಬೆಂಗಳೂರಿನ ಮಾರತಹಳ್ಳಿ ಬ್ರಿಡ್ಜ್ ಮೇಲೆ ಮೆಟ್ರೋ ಕಾಮಗಾರಿ ಹಿನ್ನೆಲೆಯಲ್ಲಿ ನಾಳೆಯಿಂದ ಮೂರು ದಿನಗಳ ಕಾಲ ಸಂಚಾರ ನಿರ್ಬಂಧಿಸಲಾಗಿದ್ದು, ಮಾರ್ಗ ಬದಲಾವಣೆ ಆಗಲಿದೆ. ರಾತ್ರಿ 12 ರಿಂದ ಮುಂಜಾನೆ 3 ಗಂಟೆಯವರೆಗೆ ಮಾರ್ಗ ಬದಲಾವಣೆ ಆಗಲಿದೆ.
ಎಚ್ ಎ ಎಲ್ ಕಡೆಯಿಂದ ವರ್ತೂರು ಮುಖ್ಯರಸ್ತೆ, ಮಾರತಹಳ್ಳಿ ಬ್ರಿಡ್ಜ್ ಮೂಲಕ ವರ್ತೂರು ವೈಟ್ ಫೀಲ್ಡ್ ಕಡೆಗೆ ಹೋಗುವ ವಾಹನಗಳಿಗೆ ಸಂಚಾರ ನಿರ್ಬಂಧ ವಿಧಿಸಲಾಗಿದೆ. ವರ್ತೂರು ಮತ್ತು ವೈಟ್ ಫೀಲ್ಡ್ ಕಡೆಯಿಂದ ವರ್ತೂರು ಮುಖ್ಯರಸ್ತೆ ಮಾರತಹಳ್ಳಿ ಬ್ರಿಡ್ಜ್ ಮೂಲಕ ಎಚ್ ಎ ಎಲ್ ಕಡೆಗೂ ಸಂಚಾರ ನಿರ್ಬಂಧ ವಿಧಿಸಲಾಗಿದೆ. ನಿರ್ಬಂಧ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸೂಚನೆ ನೀಡಲಾಗಿದೆ.








