ಬೆಂಗಳೂರು: ನಗರದಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಕೈಗೊಳ್ಳುತ್ತಿರುವ ಕಾರಣ, ಸೆ.29ರಂದು ಕೆಲ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಎಂಬುದಾಗಿ ಬೆಸ್ಕಾಂ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು 26: 220/66/11ಕೆವಿ ಎಸ್‌ಆರ್‌ಎಸ್ ಪೀಣ್ಯ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್4, ಎನ್5. ಎನ್7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 29.09.2024 ರಂದು ಬೆಳಗ್ಗೆ 09:30 ಯಿಂದ ಮಧ್ಯಾಹ್ನ 15:30 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ.
ಪೀಣ್ಯ 10ನೇ ಮುಖ್ಯರಸ್ತೆ, 11ನೇ ಮುಖ್ಯರಸ್ತೆ, ಉಡುಪಿ ಹೋಟೆಲ್ ಸುತ್ತಮುತ್ತ, ಐಆರ್ ಪಾಲಿಟೆಕ್ನಿಕ್ ರಸ್ತೆ, ಲಕ್ಷ್ಮೀದೇವಿ ನಗರ. ಲಗ್ಗೆರೆ ಹಳೆ ಗ್ರಾಮ, ಲವ ಕುಶಾ ನಗರ, ರಾಗೀವ್ ಗಾಂಧಿ ನಗರ, ಚೌಡೇಶ್ವರಿ ನಗರ 6ನೇ, 7ನೇ, 8ನೇ, 9ನೇ ಕ್ರಾಸ್, 1ನೇ ಹಂತ ಪಿಐಎ 7ನೇ ಕ್ರಾಸ್, 1ನೇ ಹಂತ ಪಿಯುಎ, ಟಿವಿಎಸ್ ಕ್ರಾಸ್ ರಸ್ತೆ ಬಳಿ, ಇಸ್ರೋ 1ನೇ, 2ನೇ ಕ್ರಾಸ್, 1ನೇ ಹಂತದ ಪಿಐಎ ಏರಿಯಾ ಮತ್ತು ಯಶವಂತ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.