ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಜುಲೈ 16 ರಿಂದ 27ನೇ ಜುಲೈ 2025 ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ.
BREAKING: ವಿದ್ಯಾರ್ಥಿನಿ ಮೇಲಿನ ಅತ್ಯಾಚಾರ ಆರೋಪದಡಿ ‘SDA ಸಸ್ಪೆಂಡ್’
ಗೂಗಲ್ ಪೇ, ಪೋನ್ ಪೇನಲ್ಲಿ ಹಣ ಸ್ವೀಕರಿಸೋ ಮುನ್ನಾ ಅಂಗಡಿ-ಮುಂಗಟ್ಟು ಮಾಲೀಕರೇ ಈ ಸುದ್ದಿ ಓದಿ.! | UPI Transaction