ಬೆಂಗಳೂರು: ಬೆಂಗಳೂರು ನಗರದಲ್ಲಿ ಫೀಲ್ಡ್ ಮಾರ್ಷಲ್ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್ 15 ರಂದು ನಡೆಯಲಿರುವ ರಾಜ್ಯ ಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ವೀಕ್ಷಿಸಿಸಲು ಸಾರ್ವಜನಿಕರಿಗೆ ಪ್ರಥಮ ಬಾರಿಗೆ E-Pass ವ್ಯವಸ್ಥೆ ಕಲ್ಪಿಸಿದ್ದು, ಆಸಕ್ತರು ಸೇವಾ ಸಿಂಧು ವೆಬ್ ಸೈಟ್ (www.sevasindhu.karnataka.gov.in) ನಲ್ಲಿ ಆಧಾರ್ ಹಾಗೂ ಮೊಬೈಲ್ ಸಂಖ್ಯೆಯನ್ನು ನಮೂದಿಸಿ OTP ಮೂಲಕ E-Pass ಅನ್ನು download ಮಾಡಿಕೊಳ್ಳಬಹುದು ಎಂದು ಬೆಂಗಳೂರು ನಗರ ಜಿಲ್ಲಾಧಿಕಾರಿಗಳಾದ ಜಿ. ಜಗದೀಶ ರವರು ತಿಳಿಸಿದ್ದಾರೆ.
ವಿಶೇಷ ಸೂಚನೆ : ಇ-ಪಾಸ್ ಕೇವಲ ಆಗಸ್ಟ್ 15 ರಂದು ಮಾತ್ರ ಮಾನ್ಯವಾಗಿರುತ್ತದೆ. ಇ-ಪಾಸ್ ನೊಂದಿಗೆ ಮೂಲ ಗುರುತಿನ ಚೀಟಿ (Original ID card) ಕಡ್ಡಾಯವಾಗಿ ಹೊಂದಿರಬೇಕು. ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08.15 ರೊಳಗೆ ಗೇಟ್ ನಂ 5 ರಿಂದ ಮಾತ್ರ ಮೈದಾನವನ್ನು ಪ್ರವೇಶಿಸಬೇಕು. ನಿಗದಿತ ಸಮಯದ ನಂತರ ಇ-ಪಾಸ್ ಅಮಾನ್ಯವಾಗಲಿದ್ದು, ಪ್ರವೇಶಕ್ಕೆ ಅನುಮತಿ ಇರುವುದಿಲ್ಲ. ಇ-ಪಾಸ್ ಅನ್ನು ವರ್ಗಯಿಸುವಂತಿಲ್ಲ.
ಒಂದು ಇ-ಪಾಸ್ ಗೆ ಒಬ್ಬರಿಗೆ ಮಾತ್ರ ಪ್ರವೇಶವಿರುತ್ತದೆ. ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್ ನ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು. ಆರು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ. ಇ-ಪಾಸ್ ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ “ಮೊದಲು ಬಂದವರಿಗೆ ಮೊದಲ” ಆದ್ಯತೆ ನೀಡಲಾಗುವುದು ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ. ಪಾರ್ಕಿಂಗ್ ವ್ಯವಸ್ಥೆ ಗೆ ಪೊಲೀಸ್ ಇಲಾಖೆ ನಿರ್ದೇಶನದಂತೆ ಸಾರ್ವಜನಿಕರು ವಾಹನ ನಿಲುಗಡೆ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ.
CRIME NEWS: ಗದಗದಲ್ಲಿ ಬಿರಿಯಾನಿ ತಿನ್ನಲು ಹೋಟೆಲ್ ಗೆ ತೆರಳಿದಾತನನ್ನು ಭೀಕರವಾಗಿ ಕೊಲೆ
B.Sc, GNM ನರ್ಸಿಂಗ್ ವಿದ್ಯಾರ್ಥಿಗಳ ಗಮನಕ್ಕೆ: ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ