ಬೆಂಗಳೂರು: ಸಾಧು ವಾಸವಾನಿ ಜಯಂತಿಯ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ಆದೇಶಿಸಿದೆ. ಹೀಗಾಗಿ ನವೆಂಬರ್.25ರಂದು ಬೆಂಗಳೂರು ನಗರದಲ್ಲಿ ಮಾಂಸ ಸಿಗೋದಿಲ್ಲ.
ಈ ಕುರಿತಂತೆ ಜಿ ಬಿ ಎ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 25-11-2025 (ಮಂಗಳವಾರ) ದಂದು “ಸಾಧು ವಾಸವಾನಿ ಜಯಂತಿ” ಪ್ರಯುಕ್ತ ಬೆಂಗಳೂರು ಉತ್ತರ ನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆ ಹಾಗೂ ಮಾಂಸ ಮಾರಾಟ ಮಳಿಗೆಗಳಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆ ಆಯುಕ್ತರವರು ತಿಳಿಸಿದ್ದಾರೆ.
ಈ ಹಂತ ಅನುಸರಿಸಿ ಬ್ಯಾಂಕ್ ಖಾತೆಯೊಂದಿಗೆ ಪ್ಯಾನ್ ನಂಬರ್ ಕುಳಿತಲ್ಲೇ ಲಿಂಕ್ ಮಾಡಿ | Link PAN With Bank Account








