ಬೆಂಗಳೂರು: ಬನಶಂಕರಿ ವಿದ್ಯುತ್ ಚಿತಾಗಾರದ ಫರ್ನೆಸ್ ಅನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ.
ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವ್ಯಾಪ್ತಿಯ ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ.
ಮುಂದುವರಿದು, ಬನಶಂಕರಿ ವಿದ್ಯುತ್ ಚಿತಾಗಾರದಲ್ಲಿ ಫರ್ನೇಸ್ ಗಳ ಬಾಡಿ ಬ್ರಿಕ್ ಹಾಗೂ ಕಾಯಿಲ್ ಗಳನ್ನು ಬದಲಿಸಿ ದುರಸ್ಥಿಪಡಿಸುವ ಕಾಮಗಾರಿಗಳನ್ನು ಕೈಗೊಳ್ಳುತ್ತಿರುವುದರಿಂದ ಸದರಿ ಚಿತಾಗಾರದ 2 ಫರ್ನೇಸ್ ಗಳನ್ನು ದಿನಾಂಕ: 23-10-2025 ರಿಂದ 31-10-2025 ರವರೆಗೆ 7 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸುತ್ತಿದೆ. ಈ ಸಂಬಂಧ ಸಾರ್ವಜನಿಕರು ಸಹಕರಿಸಬೇಕೆಂದು ಬೆಂಗಳೂರು ದಕ್ಷಿಣ ನಗರ ಪಾಲಿಕೆಯ ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಸಾರ್ವಜನಿಕ ಪ್ರಕಟಣೆ ಮೂಲಕ ಕೋರಿದ್ದಾರೆ.
ಚಿತ್ತಾಪುರದ ಪಥಸಂಚಲನಕ್ಕೆ ಅನುಮತಿ ನಿರಾಕರಣೆಗೆ ಛಲವಾದಿ ನಾರಾಯಣಸ್ವಾಮಿ ಆಕ್ಷೇಪ
ರಾಜ್ಯದ ‘ಗ್ರಾಮೀಣ ಜನತೆ’ಗೆ ಮತ್ತೊಂದು ಗುಡ್ ನ್ಯೂಸ್: ಇನ್ಮುಂದೆ ಸಿಗಲಿದೆ ಗ್ರಾ.ಪಂ ವ್ಯಾಪ್ತಿಯಲ್ಲಿ ‘ಇ-ಸ್ವತ್ತು’