Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ
KARNATAKA

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0926/06/2025 8:46 PM

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅಭ್ಯರ್ಥಿಗಳು ವರ್ಗ- 1 ಮತ್ತು ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದವರಾಗಿರಬೇಕು. ಕುಟುಂಬದ ವಾರ್ಷಿಕ ಆದಾಯದ ಮಿತಿ ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ:3,50,000 ಹಾಗೂ ಪ್ರವರ್ಗ-2ಎ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳಿಗೆ ರೂ:2,50,000 ಒಳಪಟ್ಟಿರಬೇಕು. ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಪ್ರಥಮ ಆದ್ಯತೆ ನೀಡಲಾಗುವುದು.

ಪ್ರವರ್ಗ-1ರ ಅಭ್ಯರ್ಥಿಗಳ ಕೊರತೆ ಇದ್ದಲ್ಲಿ ಸರ್ಕಾರದ ಆದೇಶದನ್ವಯ ನಿಲಯಮಾನುಸಾರ ಇತರೆ ವರ್ಗಗಳಲ್ಲಿ ಆಯ್ಕೆ ಮಾಡಲಾಗುವುದು. ಅರ್ಜಿಯನ್ನು ಸ್ವೀಕರಿಸುವ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಯು ಕಾನೂನು ಪದವಿ ಪಡೆದು 02 ವರ್ಷದ ಒಳಗಿರಬೇಕು. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕಕ್ಕೆ ಅರ್ಜಿದಾರರ ವಯಸ್ಸು ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದೊಳಗಿರಬೇಕು. ಪ್ರವರ್ಗ 2ಎ, 3ಎ, 3ಬಿ ರ ಅಭ್ಯರ್ಥಿಗಳಿಗೆ 38 ವರ್ಷದೊಳಗಿರಬೇಕು. ಅಭ್ಯರ್ಥಿಯು ತನ್ನ ಹೆಸರನ್ನು ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿರಬೇಕು. ಕಾನೂನು ತರಬೇತಿಯು 04 ವರ್ಷಗಳ ಅವಧಿಯಾಗಿದ್ದು ಮಾಸಿಕ ರೂ:4,000 ರಂತೆ ಶಿಷ್ಯವೇತನ ನೀಡಲಾಗುವುದು. ಕಾನೂನು ತರಬೇತಿಯನ್ನು ಕೊಡಗು ಜಿಲ್ಲೆಯಿಂದ ಹಿಂದುಳಿದ ವರ್ಗಗಳ 10 ಅಭ್ಯರ್ಥಿಗಳಿಗೆ ನೀಡಲು ಅವಕಾಶವಿರುತ್ತದೆ.

ಆಯ್ಕೆಯಾದ ಅಭ್ಯರ್ಥಿಯು ವಕೀಲ ತರಬೇತಿಗೆ ಹೋಗುವ ಮುನ್ನ, ತರಬೇತಿಯನ್ನು ಮಧ್ಯದಲ್ಲಿ ಬಿಟ್ಟಲ್ಲಿ ತರಬೇತಿ ವೆಚ್ಚಕ್ಕೆ ಶೇ.10 ರಂತೆ ಬಡ್ಡಿ ಸೇರಿಸಿ ಸರ್ಕಾರಕ್ಕೆ ಪಾವತಿ ಮಾಡುತ್ತೇನೆಂದು ರೂ.100 ರ ಛಾಪಾ ಕಾಗದದಲ್ಲಿ ಬರೆದುಕೊಡತಕ್ಕದ್ದು.

ಅರ್ಜಿ ನಮೂನೆಯನ್ನು ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಮಡಿಕೇರಿ ಕಚೇರಿಯಿಂದ ಪಡೆದು ಜುಲೈ, 24 ರೊಳಗೆ ಕಚೇರಿ ವೇಳೆಯಲ್ಲಿ ಸಲ್ಲಿಸುವುದು. ಹೆಚ್ಚಿನ ಮಾಹಿತಿಗೆ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ದೇವರಾಜ ಅರಸು ಭವನ, ಜನರಲ್ ತಿಮ್ಮಯ್ಯ ಕ್ರೀಡಾಂಗಣ, ಮ್ಯಾನ್ಸ್ ಕಾಂಪೌಂಡ್ ಹತ್ತಿರ, ಮಡಿಕೇರಿ ಇವರನ್ನು ಕಚೇರಿ ವೇಳೆಯಲ್ಲಿ ಹಾಗೂ ದೂ.ಸಂ.08272-295628 ನ್ನು ಸಂಪರ್ಕಿಸಬಹುದು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಅವರು ತಿಳಿಸಿದ್ದಾರೆ.

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

ಉದ್ಯೋಗಿಗಳೇ ಗಮನಿಸಿ : ಪ್ರತಿ ತಿಂಗಳು ನಿಮ್ಮ ಸಂಬಳದಿಂದ `PF’ ಕಡಿತಗೊಂಡರೆ ಸಿಗಲಿವೆ ಈ 7 ಪ್ರಯೋಜನಗಳು.!

Share. Facebook Twitter LinkedIn WhatsApp Email

Related Posts

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM1 Min Read

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM1 Min Read

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM2 Mins Read
Recent News

1 ತಿಂಗಳು ಕಾಲ ಬೆಳಿಗ್ಗೆ ‘ಮಲಾಸನ’ದಲ್ಲಿ ಕುಳಿತು ನೀರು ಕುಡಿಯಿರಿ, ಪರಿಣಾಮ ಕಂಡು ನೀವೇ ಶಾಕ್ ಆಗ್ತೀರಾ!

26/06/2025 8:48 PM

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

26/06/2025 8:46 PM

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM
State News
KARNATAKA

ಕಾನೂನು ಪದವೀಧರರ ಗಮನಕ್ಕೆ: ನ್ಯಾಯಾಂಗ ಆಡಳಿತದಲ್ಲಿ ತರಬೇತಿಗೆ ಅರ್ಜಿ ಆಹ್ವಾನ

By kannadanewsnow0926/06/2025 8:46 PM KARNATAKA 1 Min Read

ಮಡಿಕೇರಿ : ಕೊಡಗು ಜಿಲ್ಲೆಯ ಹಿಂದುಳಿದ ವರ್ಗಗಳಿಗೆ ಸೇರಿದ ಅರ್ಹ ಕಾನೂನು ಪದವೀಧರರಿಗೆ 2025-26ನೇ ಸಾಲಿಗೆ ನ್ಯಾಯಾಂಗ ಆಡಳಿತದಲ್ಲಿ ತರಬೇತಿ…

JOB ALERT: ಅತಿಥಿ ಶಿಕ್ಷಕರು ಮತ್ತು ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ

26/06/2025 8:30 PM

ಮೆಣಸಿನಕಾಯಿ, ಮಾವು ಬೆಳಗಾರರಿಗೆ ಮಹತ್ವದ ಮಾಹಿತಿ: ಬೆಳೆ ವಿಮೆಗೆ ನೋಂದಣಿ ಪ್ರಾರಂಭ

26/06/2025 8:27 PM

ಇಲೆಕ್ಟ್ರಿಕ್ ವಾಹನದ ಬ್ಯಾಟರಿ ಬದಲಾಯಿಸಿಕೊಡದ ಕಂಪನಿಗೆ ವಾಹನದ ಹಣ ಮರಳಿಸಲು ಕೋರ್ಟ್ ಆದೇಶ

26/06/2025 8:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.