Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

09/03/2026 2:01 PM

ತಿರುಪತಿಗೆ ತೆರಳುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ : ಕೊಡ, ಕ್ಯಾನ್ ಗಳಲ್ಲಿ ತುಂಬಿಸಿಕೊಳ್ಳಲು ಮುಗಿಬಿದ್ದ ಜನ!

09/03/2026 1:56 PM

ರಾಜ್ಯದ ಗ್ರಾಮೀಣ ಯುವಕರೇ ಗಮನಿಸಿ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

09/03/2026 1:53 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಗಣರಾಜ್ಯೋತ್ಸವ ಹಿನ್ನಲೆ ಇಂದು ಈ ಮಾರ್ಗದಲ್ಲಿ ಸಂಚಾರ ಬದಲಾವಣೆ
KARNATAKA

ಬೆಂಗಳೂರಿನ ವಾಹನ ಸವಾರರೇ ಗಮನಿಸಿ : ಗಣರಾಜ್ಯೋತ್ಸವ ಹಿನ್ನಲೆ ಇಂದು ಈ ಮಾರ್ಗದಲ್ಲಿ ಸಂಚಾರ ಬದಲಾವಣೆ

By kannadanewsnow5726/01/2026 5:44 AM

ಬೆಂಗಳೂರು: ದಿನಾಂಕ: 26/01/2026 ರಂದು ಬೆಳಗ್ಗೆ 09-00 ಗಂಟೆಗೆ ಕಬ್ಬನ್ ರಸ್ತೆಯಲ್ಲಿರುವ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದಲ್ಲಿ ಗಣರಾಜ್ಯೋತ್ಸವ ದಿನಾಚರಣೆ 2026 ರ ಅಂಗವಾಗಿ ವಿಶೇಷ ಕವಾಯತು ನಡೆಯಲಿದ್ದು, ಕರ್ನಾಟಕ ರಾಜ್ಯದ ರಾಜ್ಯಪಾಲರು ಧ್ವಜಾರೋಹಣ ಮಾಡಿ ಗೌರವ ವಂದನೆ ಸ್ವೀಕರಿಸಲಿದ್ದಾರೆ. ಇದರ ಅಂಗವಾಗಿ ಬೆಂಗಳೂರು ನಗರ ಸಂಚಾರ ಪೊಲೀಸರು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಕವಾಯತು ಮೈದಾನದ ಒಳಗಡೆ ಮತ್ತು ಸುತ್ತ-ಮುತ್ತಲು ಈ ಕೆಳಕಂಡಂತೆ ಸಂಚಾರ ಬಂದೋಬಸ್ತ ವ್ಯವಸ್ಥೆಯನ್ನು ಮಾಡಲಾಗಿದೆ ಎಂಬುದಾಗಿ ಸಂಚಾರ ಪೊಲೀಸರು ತಿಳಿಸಿದ್ದಾರೆ.

1. ಕಾರ್ ಪಾಸ್‌ಗಳನ್ನು ಹೊಂದಿರುವ ಎಲ್ಲಾ ಆಹ್ವಾನಿತರು ಅವರುಗಳ ಪಾಸ್‌ಗಳಲ್ಲಿ ನಿಗಧಿಪಡಿಸಿದ ಗೇಟ್‌ಗಳಲ್ಲಿ ಇಳಿದುಕೊಳ್ಳುವುದು ಹಾಗೂ ಪಾಸ್‌ನಲ್ಲಿ ನಿಗಧಿಪಡಿಸಿರುವ ಸ್ಥಳಗಳಲ್ಲಿ ವಾಹನಗಳನ್ನು ನಿಲುಗಡೆಮಾಡುವಂತೆ ಕೋರಲಾಗಿದೆ.

2. ತುರ್ತು ಸೇವಾ ವಾಹನಗಳಾದ ಅಂಬುಲೆನ್ಸ್, ಅಗ್ನಿಶಾಮಕ ದಳದ ವಾಹನಗಳು, ನೀರಿನಟ್ಯಾಂಕರ್, ಕೆ.ಎಸ್.ಆರ್.ಪಿ., ಕ್ಯೂ.ಆರ್.ಟಿ, ಬಿ.ಬಿ.ಎಂ.ಪಿ. ಹಾಗೂ ಪಿ.ಡಬ್ಲ್ಯೂ.ಡಿ ವಾಹನಗಳು ಪ್ರವೇಶ ದ್ವಾರ-2 ಮುಖಾಂತರ ಪರೇಡ್ ಮೈದಾನದ ಒಳಗೆ ಪ್ರವೇಶಿಸಿ ನಂತರ ಪೋರ್ಟ್ ವಾಲ್ ಹಿಂಭಾಗದಲ್ಲಿ (ದಕ್ಷಿಣದ ಕಡೆಗೆ) ವಾಹನಗಳನ್ನು ನಿಲುಗಡೆ ಮಾಡಬಹುದಾಗಿದೆ.

3. ಕಾರ್ಯಕ್ರಮಕ್ಕೆ ಬರುವಎಲ್ಲಾ ಮಾಧ್ಯಮದವರ ವಾಹನಗಳು ಪ್ರವೇಶ ದ್ವಾರ-4 ರ ಮೂಲಕ ಒಳ ಪ್ರವೇಶಿಸಿ ಮೈದಾನದ ಪೂರ್ವ ಭಾಗದಲ್ಲಿ ನಿಗಧಿತ ಸ್ಥಳದಲ್ಲಿ ವಾಹನ ನಿಲುಗಡೆ ಮಾಡಬಹುದಾಗಿದೆ.

4. ದಿನಾಂಕ:26/01/2026 ರಂದು ಬೆಳಗ್ಗೆ 08-30 ಗಂಟೆಯಿಂದ ಬೆಳಗ್ಗೆ 10-30 ರ ವರೆಗೆ ಕಬ್ಬನ್ ರಸ್ತೆಯಲ್ಲಿ ಬಿ.ಆರ್.ವಿ ಜಂಕ್ಷನ್ ನಿಂದ ಕಾಮರಾಜರಸ್ತೆ ಜಂಕ್ಷನ್‌ವರೆಗೆ ಎರಡೂ ದಿಕ್ಕುಗಳಲ್ಲಿನ ಸಂಚಾರವನ್ನು ನಿರ್ಬಂಧಿಸಿ ಈ ಕೆಳಕಂಡಂತೆ ಪರ್ಯಾಯ ಮಾರ್ಗದಲ್ಲಿ ಸಂಚರಿಸುವ ವ್ಯವಸ್ಥೆ ಮಾಡಲಾಗಿದೆ.

ಇನ್‌ಫೆಂಟ್ರಿ ರಸ್ತೆಯಲ್ಲಿ ಮಣಿಪಾಲ್ ಸೆಂಟರ್‌ ಕಡೆಗೆ ಸಂಚರಿಸುವ ವಾಹನಗಳು ನೇರವಾಗಿ ಇನ್‌ಫೆಂಟ್ರಿರಸ್ತೆ ಸಫೀನಾ ಪ್ಲಾಜಾ ಎಡತಿರುವು ಪಡೆದು ಮೈನ್‌ಗಾರ್ಡ್‌ರಸ್ತೆ- ಆಲೀಸ್ ಸರ್ಕಲ್- ಡಿಸ್ಪೆನ್ಸರಿ ರಸ್ತೆ- ಕಾಮರಾಜರಸ್ತೆ ಮತ್ತು ಡಿಕನ್ಸನ್‌ರಸ್ತೆ ಜಂಕ್ಷನ್ ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್‌ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್ ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ಕಡೆಗೆ ಸಾಗಬಹುದಾಗಿದೆ.

ಕಬ್ಬನ್ ರಸ್ತೆಯಲ್ಲಿ, ಮಣಿಪಾಲ್ ಸೆಂಟರ್‌ ಜಂಕ್ಷನ್‌ನಿಂದ ಬಿ.ಆರ್.ವಿ. ಜಂಕ್ಷನ್ ಕಡೆಗೆ ಬರುವ ವಾಹನಗಳ ಸಂಚಾರವನ್ನು ಮಣಿಪಾಲ್ ಸೆಂಟರ್‌ ಬಳಿ ನಿರ್ಬಂಧಿಸಿದ್ದು, ಸದರಿ ವಾಹನಗಳು ವೆಬ್ ಜಂಕನ್ ಬಳಿ ಬಲ ತಿರುವು ಪಡೆದು ಎಂ.ಜಿ. ರಸ್ತೆಯ ಮೂಲಕ ಮೆಯೋ ಹಾಲ್, ಕಾವೇರಿ ಎಂಪೋರಿಯಂ, ಅನಿಲ್‌ ಕುಂಬ್ಳೆ ವೃತ್ತದಲ್ಲಿ ಬಲ ತಿರುವು ಪಡೆದು ಮುಂದೆ ಸಾಗಬಹುದು.

ಅನಿಲ್‌ ಕುಂಬ್ಳೆ ವೃತ್ತದಿಂದ ಕಬ್ಬನ್‌ರಸ್ತೆ ಕಡೆಗೆ ಬರುವ ವಾಹನಗಳು ನೇರವಾಗಿ ಸೆಂಟ್ರಲ್ ಸ್ಟ್ರೀಟ್‌ನಲ್ಲಿ ಸಾಗಿ, ಬಲಕ್ಕೆ ತಿರುವು ಪಡೆದು-ಇನ್‌ಫೆಂಟ್ರಿರಸ್ತೆ- ಸಫೀನಾ ಪ್ಲಾಜಾ-ಎಡಕ್ಕೆತಿರುವು ಪಡೆದು ಮೈನ್‌ಗಾರ್ಡ್‌ರಸ್ತೆ- ಆಲಿ ಸರ್ಕಲ್- ಡಿಸ್ಪೆನ್ಸರಿರಸ್ತೆ- ಕಾಮರಾಜರಸ್ತೆ ಮತ್ತು ಡಿಕನ್ಸನ್‌ರಸ್ತೆ ಜಂಕ್ಷನ್-ಬಲಕ್ಕೆ ತಿರುವು ಪಡೆದು ಕಾಮರಾಜ ರಸ್ತೆ- ಕಬ್ಬನ್‌ರಸ್ತೆ ಮತ್ತು ಕಾಮರಾಜ ರಸ್ತೆ ಜಂಕ್ಷನ್ ನಲ್ಲಿ ಎಡಕ್ಕೆ ತಿರುವು ಪಡೆದು, ಕಬ್ಬನ್‌ರಸ್ತೆ ಮುಖಾಂತರ ಮಣಿಪಾಲ್ ಸೆಂಟರ್‌ ಕಡೆಗೆ ಸಾಗಬಹುದಾಗಿದೆ.

5. ಭದ್ರತಾ ದೃಷ್ಠಿಯಿಂದ ಪೆರೇಡ್‌ಗೆ ಬರುವ ಎಲ್ಲಾ ಆಹ್ವಾನಿತರು ಹಾಗೂ ಸಾರ್ವಜನಿಕರು ಮೊಬೈಲ್ ಫೋನ್, ಹೆಲೈಟ್, ಕ್ಯಾಮೆರಾ, ರೇಡಿಯೋ, ಕೊಡೆ ಮುಂತಾದ ವಸ್ತುಗಳನ್ನು ಜೊತೆಯಲ್ಲಿತೆಗೆದುಕೊಂಡು ಹೋಗದಂತೆಕೋರಲಾಗಿದೆ. ಇಂತಹ ವಸ್ತುಗಳನ್ನು ಹೊಂದಿರುವವರನ್ನು ಒಳಗೆ ಬಿಡಲಾಗುವುದಿಲ್ಲ. ಎಲ್ಲರೂ ಬೆಳಗ್ಗೆ 08-00 ಗಂಟೆಯ ಒಳಗೆ ಮೈದಾನದಲ್ಲಿ ಆಸೀನರಾಗುವಂತೆ ಕೋರಲಾಗಿದೆ.

ವಾಹನ ನಿಲುಗಡೆ ನಿಷಿದ್ದ ರಸ್ತೆಗಳು:

ಸೆಂಟ್ರಲ್ ಸ್ಟ್ರೀಟ್, ಅನಿಲ್ ಕುಂಬ್ಳೆ ವೃತ್ತದಿಂದ ಶಿವಾಜಿನಗರ ಬಸ್ ನಿಲ್ದಾಣದವರೆಗೆ ಕಬ್ಬನ್ ರಸ್ತೆ, ಸಿ.ಟಿ.ಓ. ವೃತ್ತ ದಿಂದಕೆ.ಆರ್.ರಸ್ತೆ&ಕಬ್ಬನ್‌ರಸ್ತೆ ಜಂಕ್ಷನ್‌ವರೆಗೆ ಎಂ.ಜಿ.ರಸ್ತೆ, ಅನಿಲ್ ಕುಂಬ್ಳೆವೃತ್ತದಿಂದಲ್ವೇನ್ಸ್ ವೃತ್ತದವರೆಗೆ

ವಿಶೇಷ ಸೂಚನೆಗಳು :

1. ಮಾಣಿಕ್‌ ಪೆರೇಡ್‌ ಮೈದಾನ ಹಾಗೂ ಸುತ್ತಮುತ್ತ ವಾಹನಗಳ ನಿಲುಗಡೆಗೆ ಸ್ಥಳಾವಕಾಶ ಕೊರತೆ ಇರುವುದರಿಂದ ಹಾಗೂ ಸಂಚಾರ ದಟ್ಟಣೆಯನ್ನ ಕಡಿಮೆ ಮಾಡಲು ಸಾರ್ವಜನಿಕರು, ಸಾರ್ವಜನಿಕ ಸಾರಿಗೆ ವ್ಯವಸ್ಥೆ ಮತ್ತು ಮೆಟ್ರೋ ಸೇವೆಯನ್ನು ಬಳಸಲು ಕೋರಲಾಗಿದೆ.

2. ಯಾವುದೇ ಸಹಾಯಕ್ಕಾಗಿ ಪೊಲೀಸರು ಸದಾ ನಿಮ್ಮೊಂದಿಗಿರುತ್ತಾರೆ. ದಯವಿಟ್ಟು ಸ್ಥಳದಲ್ಲಿರುವ ಪೊಲೀಸರನ್ನು ಸಂಪರ್ಕಿಸಿ ಅಥವಾ ಪೊಲೀಸ್ ಸಹಾಯವಾಣಿ ಸಂಖ್ಯೆ 112 ಗೆ ಕರೆ ಮಾಡಬಹುದಾಗಿದೆ.

3. ಗಣರಾಜ್ಯೋತ್ಸವ ದಿನಾಚರಣೆ ಸಂಭ್ರಮಾಚರಣೆಯನ್ನು ಯಶಸ್ವಿಗೊಳಿಸಲು ತಮ್ಮ ಸಹಕಾರವನ್ನು ಬಯಸುತ್ತೇವೆ.

4. ಕುಡಿಯುವ ನೀರಿನ ವ್ಯವಸ್ಥೆ ಮತ್ತು ಶೌಚಾಲಯಗಳನ್ನು ಜಿ.ಬಿ.ಎ ವತಿಯಿಂದ ಏರ್ಪಡಿಸಿದ್ದು, ಅವುಗಳನ್ನು ಸದುಪಯೋಗಪಡಿಸಿಕೊಳ್ಳಲು ಸಾರ್ವಜನಿಕರಲ್ಲಿ ಕೋರಿದೆ.

 

Attention motorists of Bengaluru: Traffic changes on this route today due to Republic Day
Share. Facebook Twitter LinkedIn WhatsApp Email

Related Posts

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

09/03/2026 2:01 PM1 Min Read

ತಿರುಪತಿಗೆ ತೆರಳುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ : ಕೊಡ, ಕ್ಯಾನ್ ಗಳಲ್ಲಿ ತುಂಬಿಸಿಕೊಳ್ಳಲು ಮುಗಿಬಿದ್ದ ಜನ!

09/03/2026 1:56 PM1 Min Read

ರಾಜ್ಯದ ಗ್ರಾಮೀಣ ಯುವಕರೇ ಗಮನಿಸಿ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

09/03/2026 1:53 PM2 Mins Read
Recent News

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

09/03/2026 2:01 PM

ತಿರುಪತಿಗೆ ತೆರಳುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ : ಕೊಡ, ಕ್ಯಾನ್ ಗಳಲ್ಲಿ ತುಂಬಿಸಿಕೊಳ್ಳಲು ಮುಗಿಬಿದ್ದ ಜನ!

09/03/2026 1:56 PM

ರಾಜ್ಯದ ಗ್ರಾಮೀಣ ಯುವಕರೇ ಗಮನಿಸಿ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

09/03/2026 1:53 PM

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

09/03/2026 1:46 PM
State News
KARNATAKA

BREAKING : ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಶರಣು!

By kannadanewsnow0509/03/2026 2:01 PM KARNATAKA 1 Min Read

ಬೆಂಗಳೂರು : ಚನ್ನಗಿರಿ ಕಾಂಗ್ರೆಸ್ ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ…

ತಿರುಪತಿಗೆ ತೆರಳುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ : ಕೊಡ, ಕ್ಯಾನ್ ಗಳಲ್ಲಿ ತುಂಬಿಸಿಕೊಳ್ಳಲು ಮುಗಿಬಿದ್ದ ಜನ!

09/03/2026 1:56 PM

ರಾಜ್ಯದ ಗ್ರಾಮೀಣ ಯುವಕರೇ ಗಮನಿಸಿ : ‘ಗ್ರಾಮ ಒನ್’ಕೇಂದ್ರ ಆರಂಭಿಸಲು ಸುವರ್ಣಾವಕಾಶ, ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ

09/03/2026 1:53 PM

ALERT : ವಯಸ್ಸಿಗೆ ಅನುಗುಣವಾಗಿ ತಿಂಗಳಿಗೆ ಯಾರು ಎಷ್ಟು ಬಾರಿ `ಸೆಕ್ಸ್’ ಮಾಡುವುದು ಸೂಕ್ತ? ಇಲ್ಲಿದೆ ಮಾಹಿತಿ

09/03/2026 1:46 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.