ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ನಮ್ಮ ಮೆಟ್ರೋದ ಹಳದಿ ಮಾರ್ಗ ಉದ್ಘಾಟನೆಗೆ ಭಾನುವಾರ ವಾಹನ ಸಂಚಾರ ಮತ್ತು ಪಾರ್ಕಿಂಗ್ ಮೇಲೆ ನಿರ್ಬಂಧಗಳನ್ನು ಬೆಂಗಳೂರು ಸಂಚಾರ ಪೊಲೀಸರು (ಬಿಟಿಪಿ) ಘೋಷಿಸಿದ್ದಾರೆ.
ಮುಖ್ಯಮಂತ್ರಿ ಕಚೇರಿ ಹಂಚಿಕೊಂಡಿರುವ ವೇಳಾಪಟ್ಟಿಯ ಪ್ರಕಾರ, ಮೋದಿ ಬೆಂಗಳೂರಿನಲ್ಲಿ ನಾಲ್ಕು ಗಂಟೆಗಳ ವಾಸ್ತವ್ಯದ ಅವಧಿಯಲ್ಲಿ ಮೂರು ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಬೆಳಿಗ್ಗೆ 10.30 ಕ್ಕೆ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ ಇಳಿದ ನಂತರ, ಪ್ರಧಾನಿ ಹೆಲಿಕಾಪ್ಟರ್ ಮತ್ತು ರಸ್ತೆಯ ಮೂಲಕ ಕೆಎಸ್‌ಆರ್ ಬೆಂಗಳೂರು (ನಗರ) ರೈಲು ನಿಲ್ದಾಣಕ್ಕೆ ಪ್ರಯಾಣಿಸಲಿದ್ದಾರೆ. ಅವರು ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳನ್ನು – ಕೆಎಸ್‌ಆರ್ ಬೆಂಗಳೂರು-ಬೆಳಗಾವಿ, ಅಮೃತಸರ-ಶ್ರೀ ಮಾತಾ ವೈಷ್ಣೋದೇವಿ ಕತ್ರಿ ಮತ್ತು ಅಜ್ನಿ (ನಾಗ್ಪುರ)-ಪುಣೆಗೆ ಚಾಲನೆ ನೀಡಲಿದ್ದಾರೆ. ನಂತರ ಅವರು ಹಳದಿ ಮಾರ್ಗದಲ್ಲಿರುವ ರಾಗಿಗುಡ್ಡ ಮೆಟ್ರೋ ನಿಲ್ದಾಣಕ್ಕೆ ರಸ್ತೆಯ ಮೂಲಕ ಪ್ರಯಾಣಿಸಲಿದ್ದಾರೆ. ಬೆಳಿಗ್ಗೆ 11.45 ರಿಂದ ಮಧ್ಯಾಹ್ನ 12.50 ರ ನಡುವೆ, ಅವರು ರಾಗಿಗುಡ್ಡದಿಂದ ಎಲೆಕ್ಟ್ರಾನಿಕ್ಸ್ ಸಿಟಿಗೆ ಮೆಟ್ರೋದಲ್ಲಿ ಪ್ರಯಾಣಿಸಲಿದ್ದಾರೆ.
ಮಧ್ಯಾಹ್ನ 12.50 ಕ್ಕೆ, ಅವರು ಎಲೆಕ್ಟ್ರಾನಿಕ್ಸ್ ಸಿಟಿ ಮೆಟ್ರೋ ನಿಲ್ದಾಣದಿಂದ ಎಲೆಕ್ಟ್ರಾನಿಕ್ಸ್ ಸಿಟಿ ಹಂತ 1 ರಲ್ಲಿರುವ ಅಂತರರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಸಂಸ್ಥೆ (IIIT) ಬೆಂಗಳೂರಿನವರೆಗೆ ರಸ್ತೆ ಮೂಲಕ ಪ್ರಯಾಣಿಸಲಿದ್ದಾರೆ.
ಬೆಂಗಳೂರಿನ ಈ ರಸ್ತೆಗಳಲ್ಲಿ ಇಂದು ಸಂಚಾರ ನಿರ್ಬಂಧ
ದಿನಾಂಕ:10/08/2025ರಂದು “ಅತಿ ಗಣ್ಯ ವ್ಯಕ್ತಿಗಳು ಬೆಂಗಳೂರು ನಗರಕ್ಕೆ ಭೇಟಿ ನೀಡುತ್ತಿರುವ” ಪ್ರಯುಕ್ತ ನೈಸ್ ರಸ್ತೆ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರವನ್ನು ‘ಬೆಳಿಗ್ಗೆ 10:00 ಗಂಟೆಯಿಂದ ಮಧ್ಯಾಹ್ನ 2:30 ಗಂಟೆಯವರೆಗೆ ತಾತ್ಕಾಲಿಕವಾಗಿ ನಿರ್ಭಂಧಿಸಿದ್ದು, ಈ ಕೆಳಕಂಡಂತೆ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿರುತ್ತದೆ. ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ಎಲ್ಲಾ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ಮುಖಾಂತರ ಸಂಚರಿಸಲು ಮಾರ್ಗ ಬದಲಾಯಿಸಲಾಗಿದೆ.
ಸಂಚಾರ ನಿರ್ಬಂಧ
* ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್‌ವರೆಗೆ
* ಕನಕಪುರ ರಸ್ತೆ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
+ ನಾಯಂಡಹಳ್ಳಿ ನೈಸ್ ಟೋಲ್ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
+ ಸೋಂಪುರ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
* ಪಿಇಎಸ್ ಕಾಲೇಜು ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ಕೆಂಗೇರಿ ನೈಸ್ ಟೋಲ್‌ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
← ಮಾಗಡಿ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
* ಮಾಧವರ ರಸ್ತೆ ನೈಸ್ ಟೋಲ್ ನಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
* ಪಾರ್ಲೆ ಬಿಸ್ಕಟ್ಸ್ ಫಾಕ್ಟರಿ ಕಡೆಯಿಂದ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಹೋಗುವ ವಾಹನಗಳ ಸಂಚಾರ ನಿರ್ಬಂಧ
ನಿರ್ಬಂಧಿಸಲಾದ ಸಂಚಾರಕ್ಕೆ ಪರ್ಯಾಯ ಮಾರ್ಗಗಳು
> ನೆಲಮಂಗಲ ನೈಸ್ ಟೋಲ್-ಮಾಗಡಿ ರಸ್ತೆ ನೈಸ್ ಟೋಲ್-ಕೆಂಗೇರಿ ನೈಸ್ ಟೋಲ್-ಕನಕಪುರ ಟೋಲ್ ಮಾರ್ಗವಾಗಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಕಡೆಗೆ ಸಂಚರಿಸುವ ವಾಹನಗಳನ್ನು ಬನ್ನೇರುಘಟ್ಟ ರಸ್ತೆ ನೈಸ್ ಟೋಲ್‌ನಲ್ಲಿ ತಡೆದು, ಬನ್ನೇರುಘಟ್ಟ ರಸ್ತೆಗೆ ವಾಹನಗಳನ್ನು ಡೈವರ್ಶನ್ ಮಾಡುತ್ತಿದ್ದು, ಎಲೆಕ್ಟ್ರಾನಿಕ್ ಸಿಟಿ ಕಡೆಗೆ ಚಲಿಸುವ ವಾಹನಗಳು ಪ್ರಮುಖವಾಗಿ ಬನ್ನೇರುಘಟ್ಟ ರಸ್ತೆ ಮಾರ್ಗವಾಗಿ-ನೈಸ್ ರಸ್ತೆ ಜಂಕ್ಷನ್-ಶೇರ್‌ವುಡ್ ಜಂಕ್ಷನ್-ಕೋಳಿಫಾರಂಗೇಟ್ ಜಂಕ್ಷನ್-ಬನ್ನೇರುಘಟ್ಟ ಗ್ರಾಮ-ಜಿಗಣಿ ಮಾರ್ಗವಾಗಿ ಹೊಸೂರು ರಸ್ತೆ /ಎಲೆಕ್ಟ್ರಾನಿಕ್ ಸಿಟಿ ಕಡೆಗೆ ತಲುಪಬಹುದಾಗಿರುತ್ತದೆ.
> ದಾಬಸ್‌ಪೇಟೆ ಬಳಿ ಎಡ ತಿರುವು ಪಡೆದು-ದೊಡ್ಡಬಳ್ಳಾಪುರ-ದೇವನಹಳ್ಳಿ-ಸೂಲಿಬೆಲೆ-ಹೊಸಕೋಟೆ-ಮಾರ್ಗವಾಗಿ ಚಲಿಸಿ-ಚಂದಾಪುರ-ಅತ್ತಿಬೆಲೆ-ಹೊಸೂರು ರಸ್ತೆ ತಲುಪಬಹುದಾಗಿರುತ್ತದೆ. ಸಾರ್ವಜನಿಕರು ಸಹಕರಿಸಲು ಕೋರಿದೆ.