Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ‘LPG ಪೂರೈಕೆ ಇನ್ನೂ ಕಳವಳಕಾರಿ, ಆದ್ರೆ ಚಿಲ್ಲರೆ ಅಂಗಡಿಗಳಲ್ಲಿ ಯಾವುದೇ ಕೊರತೆ ಇಲ್ಲ’ : ಕೇಂದ್ರ ಸರ್ಕಾರ

14/03/2026 4:44 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ ಅಂತಿಮ ಫಲಿತಾಂಶ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

BREAKING : ಪೆಟ್ರೋಲ್ ಸೇರಿ ಇತರ ಯಾವುದೇ ಇಂಧನ ಸಂಗ್ರಹಿಸ್ಬೇಡಿ : ಕೇಂದ್ರ ಸರ್ಕಾರ ಸೂಚನೆ

14/03/2026 4:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪೋಷಕರೇ ಗಮನಸಿ : 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ : ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ
KARNATAKA

ಪೋಷಕರೇ ಗಮನಸಿ : 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ : ರಾಜ್ಯ ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ ಬಿಡುಗಡೆ

By kannadanewsnow0506/10/2025 6:17 PM
cough syrup

ಬೆಂಗಳೂರು : ಮಧ್ಯಪ್ರದೇಶ ರಾಜಸ್ಥಾನದಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳ ಸರಣಿ ತಾವು ಸಂಭವಿಸಿದ ಹಿನ್ನೆಲೆಯಲ್ಲಿ ಇದೀಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ಈಗಾಗಲೇ ಎರಡು ಸಿರಪ್ ಗಳನ್ನು ಖರೀದಿ ಹಾಗೂ ಮಾರಾಟ ನಿಷೇಧಿಸಿದ್ದು, ರಾಜ್ಯ ಆರೋಗ್ಯ ಇಲಾಖೆ ಮಹತ್ವದ ಸಭೆ ನಡೆಸಿ ಕೆಮ್ಮಿನ ಸಿರಪ್ ಬಳಕೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಹೌದು ಆರೋಗ್ಯ ಇಲಾಖೆ ಮಾರ್ಗಸೂಚಿಯ ಪ್ರಕಾರ, 2 ವರ್ಷದೊಳಗಿನ ಮಕ್ಕಳಿಗೆ ಸಿರಪ್ ನೀಡುವಂತಿಲ್ಲ. 2-5 ವರ್ಷದ ಮಕ್ಕಳಿಗೆ ತಜ್ಞರ ಸಲಹೆ ಮೇರೆಗೆ ಔಷಧಿ ನೀಡಬೇಕು. ಅಲ್ಲದೇ 5 ವರ್ಷ ಮೇಲ್ಪಟ್ಟ ಮಕ್ಕಳಿಗೆ ವೈದ್ಯರ ಸಲಹೆ ಮೇರೆಗೆ ಔಷಧಿ ನೀಡಬೇಕು. ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಬಳಸಬೇಕು. ಮಲ್ಟಿಮೆಡಿಸನ್ ಒಳಗೊಂಡ ಸಿರಪ್‌ಗಳನ್ನ ಬಳಸಬಾರದು ಎಂದು ತಿಳಿಸಿದೆ.

ಇನ್ನು ವೈದ್ಯರ ಪ್ರಿಸ್ಕ್ರಿಪ್ಷನ್ ಇಲ್ಲದೆ ಕೆಮ್ಮಿನ ಸಿರಪ್‌ಗಳನ್ನ ಖರೀದಿಸಬಾರದು, ಬಳಸಬಾರದು. ಈ ಹಿಂದೆ ಬಳಸಿದ ಔಷಧಿಗಳನ್ನ ಮರುಬಳಕೆ ಮಾಡಬಾರದು. ಕೆಮ್ಮು ಉಲ್ಬಣಗೊಂಡರೆ ವೈದ್ಯರನ್ನ ಸಂಪರ್ಕಿಸಿ. ಅವಧಿ ಮೀರಿದ ಔಷಧಿಗಳನ್ನ ನೋಡಿ ಬಳಸಬೇಕು. ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ ವಾಂತಿ ಅಥವಾ ಉಸಿರಾಟ ತೊಂದರೆ ಇದ್ದರೆ ಹತ್ತಿರದ ವೈದ್ಯರನ್ನ ಸಂಪರ್ಕಿಸಿ. ಔಷಧ ಅವಧಿ ಮುಗಿಯುವ ದಿನಾಂಕವನ್ನು ಪರಿಶೀಲಿಸಿ ಮತ್ತು ಲೇಬಲ್‌ಗಳನ್ನು ಎಚ್ಚರಿಕೆಯಿಂದ ಓದಿ ಎಂದು ಸೂಚಿಸಲಾಗಿದೆ.

ಗೈಡ್ ಲೈನ್ಸ್ ನಲ್ಲಿ ಏನಿದೆ?

1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ.

2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು.

2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ ಮೇರೆಗೆ ಮಾತ್ರ ಈ ಔಷಧಿಗಳನ್ನು ನೀಡುವುದು.

2. ಹಿರಿಯ ಮಕ್ಕಳಲ್ಲಿ,

ಕೆಮ್ಮಿನ ಸಿರಪ್ ಗಳನ್ನು ವೈದ್ಯರ ಸಲಹೆಯ ಮೇರೆಗೆ ಮಾತ್ರ ಬಳಸಬೇಕು.

ಸಾಧ್ಯವಾದಷ್ಟು ಕಡಿಮೆ ಅವಧಿಗೆ ಕನಿಷ್ಠ ಅಗತ್ಯವಿರುವ ಡೋಸ್ ಅನ್ನು ಬಳಸಿ.

ಬಹು ಔಷಧಿಗಳ ಸಂಯೋಜನೆ ಇರುವ ಸಿರಪ್ ಗಳನ್ನು ಉಪಯೋಗಿಸಬಾರದು.

3. ಸುರಕ್ಷಿತ ಮನೆಮದ್ದುಗಳು

ಹೆಚ್ಚಿನ ಸಂದರ್ಭಗಳಲ್ಲಿ, ಮಕ್ಕಳಲ್ಲಿ ಕೆಮ್ಮು ಮತ್ತು ಶೀತವು ಸೌಮ್ಯವಾಗಿರುತ್ತದೆ ಮತ್ತು ಸುರಕ್ಷಿತವಾದ ಕ್ರಮಗಳಿಂದ ನಿಧಾನವಾಗಿ ಉತ್ತಮಗೊಳ್ಳುತ್ತದೆ.

ಪೋಷಕರು ಮಕ್ಕಳಿಗೆ, ಸಾಕಷ್ಟು ದ್ರವಪದಾರ್ಥಗಳನ್ನು ನೀಡುವುದು

ಸಾಕಷ್ಟು ವಿಶ್ರಾಂತಿ ಮತ್ತು ನಿದ್ರೆ ಮಾಡಲು ಅವಕಾಶ ನೀಡುವುದು ಪೌಷ್ಟಿಕ ಆಹಾರವನ್ನು ನೀಡುವ4. ಸ್ವಯಂ ಔಷಧೋಪಚಾರ ಮಾಡಬೇಡಿ

ವೈದ್ಯರ ಪ್ರಿಸ್ಕಿಪ್ಟನ್ ಇಲ್ಲದೆ ಕೆಮ್ಮಿನ ಸಿರಪ್ ಗಳನ್ನು ಎಂದಿಗೂ ಖರೀದಿಸಬೇಡಿ ಅಥವಾ ಬಳಸಬೇಡಿ.

ಈ ಹಿಂದೆ ಬಳಸಿ ಉಳಿದ ಔಷಧಿಗಳನ್ನು ಅಥವಾ ಇತರರು ಶಿಫಾರಸು ಮಾಡಿದ ಔಷಧಿಗಳನ್ನು ಬಳಸುವುದನ್ನು ನಿಲ್ಲಿಸಿ.

ಯಾವುದೇ ಅಸಹಜ ಪ್ರತಿಕ್ರಿಯೆ, ನಿದ್ರಾವಸ್ಥೆ, ವಾಂತಿ ಅಥವಾ ಉಸಿರಾಟದ ತೊಂದರೆಯನ್ನು ತಕ್ಷಣ ಹತ್ತಿರದ ತಜ್ಞ ವೈದ್ಯರಿಗೆ ವರದಿ ಮಾಡಿ.
ಯಾವಾಗಲೂ ಔಷಧದ ಅವಧಿ ಮುಗಿಯುವ ದಿನಾಂಕಗಳನ್ನು (expiry date) ಪರಿಶೀಲಿಸಿ ಮತ್ತು ಲೇಬಲ್ ಗಳನ್ನು ಎಚ್ಚರಿಕೆಯಿಂದ ಓದಿ.

ನಿಮ್ಮ ಮಕ್ಕಳಲ್ಲಿ ಈ ಕೆಳಗಿನ ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆರೋಗ್ಯ ಕೇಂದ್ರಗಳನ್ನು ಸಂಪರ್ಕಿಸಿ:

ಉಸಿರಾಟದ ತೊಂದರೆ ಅಥವಾ ವೇಗವಾಗಿ ಉಸಿರಾಟ ನಿರಂತರ ಅಥವಾ ಉಲ್ಬಣಗೊಳ್ಳುತ್ತಿರುವ ಕೆಮ್ಮು ಅತಿಯಾದ ಜ್ವರ ಅಥವಾ ಆಹಾರ ತಿರಸ್ಕರಿಸುವುದು.

ನಿದ್ರಾವಸ್ಥೆ ಅಥವಾ ಅಸಹಜ ಪ್ರತಿಕ್ರಿಯೆ ಮಕ್ಕಳ ಆರೋಗ್ಯ ಮತ್ತು ಸುರಕ್ಷತೆಯ ಹಿತದೃಷ್ಟಿಯಿಂದ, ಔಷಧಿಗಳ ತರ್ಕಬದ್ಧ ಬಳಕೆಯನ್ನು ಉತ್ತೇಜಿಸಲು ಮತ್ತು ಕೆಮ್ಮು ಸಿರಪ್ ಗಳ ಅನುಚಿತ ಬಳಕೆಯಿಂದ ಉಂಟಾಗುವ ಹಾನಿಯನ್ನು ತಡೆಗಟ್ಟಲು ಈ ಸಲಹೆಯನ್ನು ನೀಡಲಾಗಿದೆ ಎಂದಿದೆ.

Share. Facebook Twitter LinkedIn WhatsApp Email

Related Posts

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ ಅಂತಿಮ ಫಲಿತಾಂಶ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM2 Mins Read

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM1 Min Read

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM1 Min Read
Recent News

BREAKING : ‘LPG ಪೂರೈಕೆ ಇನ್ನೂ ಕಳವಳಕಾರಿ, ಆದ್ರೆ ಚಿಲ್ಲರೆ ಅಂಗಡಿಗಳಲ್ಲಿ ಯಾವುದೇ ಕೊರತೆ ಇಲ್ಲ’ : ಕೇಂದ್ರ ಸರ್ಕಾರ

14/03/2026 4:44 PM

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ ಅಂತಿಮ ಫಲಿತಾಂಶ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

14/03/2026 4:39 PM

BREAKING : ಪೆಟ್ರೋಲ್ ಸೇರಿ ಇತರ ಯಾವುದೇ ಇಂಧನ ಸಂಗ್ರಹಿಸ್ಬೇಡಿ : ಕೇಂದ್ರ ಸರ್ಕಾರ ಸೂಚನೆ

14/03/2026 4:35 PM

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM
State News
KARNATAKA

‘ಕುವೆಂಪು ವಿವಿ ಸಹ್ಯಾದ್ರಿ ಉತ್ಸವ’ ಅಂತಿಮ ಫಲಿತಾಂಶ: ಸಾಗರದ ‘ಇಂದಿರಾ ಗಾಂಧಿ ಕಾಲೇಜಿಗೆ ಸಮಗ್ರ ಪ್ರಶಸ್ತಿ’

By kannadanewsnow0914/03/2026 4:39 PM KARNATAKA 2 Mins Read

ಶಿವಮೊಗ್ಗ: ಜಿಲ್ಲೆಯ ಶಂಕರಘಟ್ಟದ ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆ ವಿಭಾಗದ ವತಿಯಿಂದ ಜ್ಞಾನಸಹ್ಯಾದ್ರಿ ಆವರಣದಲ್ಲಿ ನಡೆದ ‘ಸಹ್ಯಾದ್ರಿ ಉತ್ಸವ-2026’ ಅಂತರ್…

ಯುದ್ಧದ ಭೀತಿ: ಕರ್ನಾಟಕದಲ್ಲಿರುವ ವಿದೇಶಿ ಪ್ರವಾಸಿಗರ ನೆರವಿಗೆ ಧಾವಿಸಿದ ಸರ್ಕಾರ, ಹೆಲ್ಪ್‌ಲೈನ್ ಆರಂಭ

14/03/2026 4:25 PM

150ಕ್ಕೂ ಹೆಚ್ಚು ಕಾಯಿಲೆಗಳಿಗೆ ರಾಮಬಾಣ ಈ ‘ಛಾಯಾ ಮಾನಸ’ ಸೊಪ್ಪು

14/03/2026 4:14 PM

ಮೇ 1ರಿಂದ ಶಿವಮೊಗ್ಗದಲ್ಲಿ ಇಂಡಿಗೋ ವಿಮಾನ ಸೇವೆ ಸ್ಥಗಿತ? ಆತಂಕದಲ್ಲಿ ಪ್ರಯಾಣಿಕರು

14/03/2026 4:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.