ಶಿವಮೊಗ್ಗ: ಸಾಗರದಲ್ಲಿ ಬಿಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ದಿನಾಂಕ: 29.10.2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ತಿಳಿಸಿದೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 29.10.2025 ರ ಬುಧವಾರದಂದು ಸಾಗರದ ಬಿ.ಹೆಚ್ ರಸ್ತೆ ಅಗಲೀಕರಣ ಕಾಮಗಾರಿಯ ಸಲುವಾಗಿ ವಿದ್ಯುತ್ ಕಂಬಗಳ ಸ್ಥಳಾಂತರಿಸುವ ಕಾರ್ಯ ಹಮ್ಮಿಕೊಂಡಿರುವುದರಿಂದ ಈ ಕೆಳಕಂಡ ಪ್ರದೇಶಗಳಲ್ಲಿ ಬೆಳಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ.
ನಾಳೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ
ದಿನಾಂಕ 29.10.2025 ರಂದು ಸಾಗರ ಪಟ್ಟಣ ವ್ಯಾಪ್ತಿಯ ಎಫ್-1 ಸಾಗರ ಟೌನ್ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್‌ಗಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಬಿ.ಹೆಚ್ ರಸ್ತೆ, ಅಶೋಕ ರಸ್ತೆ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ಮತ್ತು ಎಫ್-17 ಎಸ್.ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಗಾಂಧೀನಗರ, ವಿಜಯನಗರ, ಬಿ.ಕೆ ರಸ್ತೆ, ರಾಮನಗರ, ಹೆಗಡೆ ಫಾರಂ, ಎಸ್.ಎನ್ ನಗರ, ಕಂಬಳಿಕೊಪ್ಪ, ಚಿಪ್ಪಿ ಮತ್ತು ಆಧಿಶಕ್ತಿನಗರ ಹಾಗೂ ಎಫ್-13 ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಯಲಗಳಲೆ ಇಂಡಸ್ಟ್ರೀಯಲ್ ಏರಿಯಾ ವ್ಯಾಪ್ತಿಗೆ ಒಳಪಡುವ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದೆ.
ವರದಿ; ವಸಂತ ಬಿ ಈಶ್ವರಗೆರೆ.., ಸಂಪಾದಕರು
GOOD NEWS: ಶೀಘ್ರವೇ 8,500 ಕಾನ್ ಸ್ಟೇಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಅಧಿಸೂಚನೆ: ಗೃಹ ಸಚಿವ ಪರಮೇಶ್ವರ್
ಕಾಂಗ್ರೆಸ್ ಪಕ್ಷ, ಈ ಸರಕಾರವನ್ನು ಯಾರೂ ನಂಬುತ್ತಿಲ್ಲ: MLC ಛಲವಾದಿ ನಾರಾಯಣಸ್ವಾಮಿ








