Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS : ಸಾರ್ವಜನಿಕರಿಗೆ ‘ಮಹತ್ವದ ಪ್ರಕಟಣೆ’ : ಗುಡುಗು-ಸಿಡಿಲಿನ ಅಪಾಯ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!
KARNATAKA

BIG NEWS : ಸಾರ್ವಜನಿಕರಿಗೆ ‘ಮಹತ್ವದ ಪ್ರಕಟಣೆ’ : ಗುಡುಗು-ಸಿಡಿಲಿನ ಅಪಾಯ ತಪ್ಪಿಸಲು ರಾಜ್ಯ ಸರ್ಕಾರದಿಂದ ಮಾರ್ಗಸೂಚಿ ಬಿಡುಗಡೆ.!

By kannadanewsnow5705/04/2025 6:24 AM

ಬೆಂಗಳೂರು : ಕರ್ನಾಟಕ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸನ್ನದ್ಧತೆಗಾಗಿ ಸಲಹೆ/ಸೂಚನೆಗಳನ್ನು ಪ್ರಕಟಿಸಿದೆ.

ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಗುಡುಗು ಮತ್ತು ಸಿಡಿಲು ಬಡಿತದಿಂದ ಉಂಟಾಗುವ ಪ್ರತಿಕೂಲ ಪರಿಣಾಮಗಳನ್ನು ತಗ್ಗಿಸಲು ಸಲಹೆ/ಸೂಚನೆಗಳನ್ನು ಉಲ್ಲೇಖಿತ ಪತ್ರದಲ್ಲಿ ನೀಡಿರುತ್ತದೆ. ಕರ್ನಾಟಕದ ಹಲವು ಭಾಗಗಳಲ್ಲಿ ಗುಡುಗು – ಸಿಡಿಲು ಸಾಮಾನ್ಯವಾಗಿ ಮುಂಗಾರು ಪೂರ್ವದಲ್ಲಿ ಹಾಗೂ ಮುಂಗಾರಿನಲ್ಲಿ ಕಾಣಿಸಿಕೊಳ್ಳುತ್ತದೆ. ಸಿಡಿಲು ಸಾಮಾನ್ಯವಾಗಿ ಮಧ್ಯಾಹ್ನ ಅಥವಾ ಸಂಜೆಯಲ್ಲಿ ಸಂಭವಿಸುವ ಸಾಧ್ಯತೆ ಹೆಚ್ಚಾಗಿರುತ್ತದೆ. ಗುಡುಗು ಸಿಡಿಲಿನಿಂದಾಗುವ ಅಪಾಯಗಳನ್ನು ತಗ್ಗಿಸಲು ಈ ಕೆಳಕಂಡ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ:

ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಅಗತ್ಯವಿರುವ ಉಪಶಮನ ಮತ್ತು ಸನ್ನದ್ಧತೆ ಕ್ರಮಗಳು :

ಸಿಡಿಲಿಗೆ ಸಾಮಾನ್ಯವಾಗಿ ತುತ್ತಾಗುವಂತಹ ಸ್ಥಳಗಳನ್ನು ಗುರುತಿಸಿ ಸಾರ್ವಜನಿಕ ಆಸ್ತಿ / ಮೂಲಸೌಕರ್ಯಗಳ ರಕ್ಷಣೆಗೆ ಕ್ರಮ ವಹಿಸುವುದು.

ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNMDC) ಹಾಗೂ Indian Meteorological Department (IMD) ಸಿಡಿಲಿನ ಮುನ್ಸೂಚನೆಗಳನ್ನು ಸ್ಥಳೀಯ ಮಟ್ಟಕ್ಕೆ ತಲುಪಿಸಲು ಸಾಮಾಜಿಕ ಮತ್ತು ಇತರ ಸಮೂಹ ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ನಿರ್ದಿಷ್ಟ ಮುನ್ನೆಚ್ಚರಿಕೆಯನ್ನು Common Alerting Protocol (CAP)ನ ಮೂಲಕ ಪ್ರಸಾರ ಮಾಡುವುದು ಹಾಗೂ ಈ ಕುರಿತು ಅರಿವು ಮೂಡಿಸುವುದು. ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಗ್ರಾಮ ಪಂಚಾಯಿತಿಗಳ ಮೂಲಕವೂ ಸಹ ಮಾಹಿತಿ ನೀಡುವುದು ಹಾಗೂ ಜಾಗೃತಿ ಮೂಡಿಸುವುದು.

ಸ್ಥಳೀಯ ಜನರನ್ನು ಎಚ್ಚರಿಸಲು ಹಾಗೂ ಗುಡುಗು ಮತ್ತು ಸಿಡಿಲಿನ ಅಪಾಯಗಳನ್ನು ತಗ್ಗಿಸಲು ಸಲಹೆ ಸೂಚನೆಗಳನ್ನು ನೀಡಲು ಶಾಲೆ, ಕಾಲೇಜುಗಳು, ರೈತ ಸಂಪರ್ಕ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು, ಪ್ರಾಥಮಿಕ ಪಶು ವೈದ್ಯಕೀಯ ಚಿಕಿತ್ಸಾ ಕೇಂದ್ರಗಳು ಹಾಗೂ ಸಮುದಾಯ ಕೇಂದ್ರಗಳಲ್ಲಿ ವ್ಯಾಪಕ ತಿಳುವಳಿಕೆ ಹಾಗೂ ಮಾಹಿತಿ ನೀಡುವುದು.

ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳನ್ನು ಸಾಮಾಜಿಕ ಮಾಧ್ಯಮಗಳ ಮೂಲಕ ಪ್ರಸರಣ ಮಾಡುವುದು ಹಾಗೂ ಮಾಹಿತಿ ಶಿಕ್ಷಣ ಸಂವಹನ (ಐಇಸಿ) ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು.

ಕೃಷಿ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಕೃಷಿ ಅಧಿಕಾರಿಗಳು/ನೌಕರರು, ರೈತ ಸಂಪರ್ಕ ಕೇಂದ್ರಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಬರುವ ಅಧಿಕಾರಿ/ನೌಕರರು ಹಾಗೂ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವ್ಯಾಪ್ತಿಯಲ್ಲಿ ಬರುವ ಜಿಲ್ಲೆ, ತಾಲ್ಲೂಕು ಮತ್ತು ಹೋಬಳಿ ಮಟ್ಟದ ಅಧಿಕಾರಿಗಳು/ನೌಕರರು ಗುಡುಗು-ಸಿಡಿಲು ಸಂದರ್ಭಗಳಲ್ಲಿ ಮಾಡಬೇಕಾದ ಮತ್ತು ಮಾಡಬಾರದ ಕೆಲಸಗಳ ಬಗ್ಗೆ ಹಾಗೂ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಕೃಷಿಕರಿಗೆ, ಕುರಿ, ಮೇಕೆ ಹಾಗೂ ಇತರೆ ಜಾನುವಾರುಗಳ ಸಾಕಾಣಿಕೆದಾರರಿಗೆ ಸೂಕ್ತ ಅರಿವು ಮೂಡಿಸುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಪಾಲಿಸಬೇಕಾದ ಸಲಹೆ ಸೂಚನೆಗಳು :

ಹೊರಗೆ ಹೋಗುವ ಅನಿವಾರ್ಯವಿದ್ದಲ್ಲಿ ಹವಾಮಾನ ಮುನ್ಸೂಚನೆ ಹಾಗೂ Common Alerting Protocol (CAP) ಮುಖಾಂತರ ಬರುವ ಸಂದೇಶಗಳನ್ನು ಮೊಬೈಲ್ ನಲ್ಲಿ ಗಮನಿಸುವುದು.

ಪ್ರತಿಕೂಲ ಹವಾಮಾನದ ಸಮಯದಲ್ಲಿ ವಿಶೇಷವಾಗಿ ಕೃಷಿ ಕ್ಷೇತ್ರದಲ್ಲಿ ಕೆಲಸ ಮಾಡಲು, ಜಾನುವಾರುಗಳನ್ನು ಮೇಯಿಸಲು, ಮೀನುಗಾರಿಕೆ ಮತ್ತು ದೋಣಿಗಳನ್ನು ಓಡಿಸಲು ಅಥವಾ ಸಾಮಾನ್ಯ ಪ್ರಯಾಣಕ್ಕಾಗಿ ಮನೆಯಿಂದ ಹೊರಗೆ ಹೋಗದಿರುವುದು.

ಗುಡುಗು-ಸಿಡಿಲಿನ ಸಂದರ್ಭದಲ್ಲಿ ಲೋಹದ ತಗಡನ್ನು ಹೊದಿಸಿರುವ ಮನೆಗಳು ಸುರಕ್ಷಿತವಲ್ಲ, ಸುರಕ್ಷಿತವಾದ ಕಟ್ಟಡಗಳಲ್ಲಿ ಆಶ್ರಯ ಪಡೆಯುವುದು.

ಬೆಟ್ಟಗಳು, ಪರ್ವತ ಶ್ರೇಣಿಗಳು ಅಥವಾ ಶಿಖರಗಳಂತಹ ಎತ್ತರದ ಪ್ರದೇಶಗಳಿಂದ ಕೆಳಗೆ ಇಳಿದು ಪ್ರವಾಹ ಬರದಂತಹ ತಗ್ಗು ಪ್ರದೇಶವನ್ನು ಖಚಿತಪಡಿಸಿ ಆಶ್ರಯ ಪಡೆಯುವುದು.

ನೀರಿನ ಮೂಲಗಳಾದ ಕೆರೆ ಮತ್ತು ನದಿಗಳಿಂದ ದೂರವಿರುವುದು.

ವಿದ್ಯುತ್ ಉಪಕರಣ ಹಾಗೂ ವಿದ್ಯುತ್ ಸರಬರಾಜು ಮಾರ್ಗ, ದೂರವಾಣಿ ಸಂಪರ್ಕ, ಮೊಬೈಲ್ ಟವರ್, ಪವನ ವಿದ್ಯುತ್ ಗೋಪುರ ಹಾಗೂ ರೈಲು ಹಳಿಗಳಿಂದ ದೂರವಿರುವುದು.

ವಾಹನ ಚಾಲನೆಯಲ್ಲಿದ್ದರೆ ತಕ್ಷಣವೇ ವಾಹನ ನಿಲ್ಲಿಸಿ ವಾಹನದಲ್ಲಿಯೇ ಆಶ್ರಯ ಪಡೆಯುವುದು.

ಗುಡುಗು ಸಿಡಿಲಿನ ಸಮಯದಲ್ಲಿ ಗುಂಪಿನಲ್ಲಿದ್ದರೆ ಅಪಾಯವನ್ನು ಕಡಿಮೆ ಮಾಡಲು ಸಾಕಷ್ಟು ಅಂತರವನ್ನು ಕಾಯ್ದುಕೊಳ್ಳುವುದು.

ಗುಡುಗು ಮತ್ತು ಸಿಡಿಲು ಸಂದರ್ಭದಲ್ಲಿ ಹೊರಾಂಗಣದಲ್ಲಿ ಕೆಲಸ ಮಾಡುತ್ತಿದ್ದರೆ ಮತ್ತು ಸುರಕ್ಷಿತ ಸ್ಥಳದಲ್ಲಿ ಆಶ್ರಯ ಪಡೆಯಲು ಸಾಕಷ್ಟು ಸಮಯವಿಲ್ಲದಿದ್ದರೆ ಎರಡು ಕಾಲುಗಳನ್ನು ಜೋಡಿಸಿ ಮಂಡಿಯೂರಿ ಕುಳಿತುಕೊಂಡು ತಲೆಯನ್ನು ಬಗ್ಗಿಸಿ ಕಿವಿಗಳನ್ನು ಮುಚ್ಚಿಕೊಳ್ಳುವುದು.

ವಿದ್ಯುತ್ ಅಥವಾ ಟೆಲಿಫೋನ್ ಕಂಬಗಳು ಅಥವಾ ಮರಗಳ ಕೆಳಗೆ ಆಶ್ರಯ ಪಡೆಯಬಾರದು ಇವು ಸಿಡಿಲನ್ನು ಆಕರ್ಷಿಸುತ್ತವೆ.

ಅರಣ್ಯ ಪ್ರದೇಶದಲ್ಲಿದ್ದರೆ ಸಣ್ಣ/ಚಿಕ್ಕ ಮರಗಳ ಕೆಳಗೆ ಆಶ್ರಯ ಪಡೆಯುವುದು.

ಲೋಹದ ವಸ್ತುಗಳನ್ನು ಬಳಸಬಾರದು ಮತ್ತು ದ್ವಿಚಕ್ರ ವಾಹನಗಳು, ವಿದ್ಯುತ್ ಅಥವಾ ದೂರವಾಣಿ ಕಂಬಗಳು, ತಂತಿ ಬೇಲಿ, ಯಂತ್ರಗಳು ಇತ್ಯಾದಿಗಳಿಂದ ದೂರವಿರುವುದು.

ಸಿಡಿಲು ಸಂದರ್ಭದಲ್ಲಿ ಮೊಬೈಲ್ ಫೋನ್ ಗಳನ್ನು ಬಳಸಬಾರದು.

ಕಬ್ಬಿಣದ ಸರಳುಗಳಿಂದ ಕೂಡಿದ ಛತ್ರಿಗಳನ್ನು ಬಳಸಬಾರದು.

ಗುಡುಗು ಸಿಡಿಲಿನ ಸಮಯದಲ್ಲಿ ಕಿಟಕಿ, ಬಾಗಿಲುಗಳನ್ನು ಮುಚ್ಚಿ ಬೆಂಕಿ ಮತ್ತು ವಿದ್ಯುತ್ ಶಕ್ತಿ ಸಂಪರ್ಕದಿಂದ ದೂರವಿರುವುದು.

ಮಕ್ಕಳು, ವಯೋವೃದ್ಧರು ಹಾಗೂ ಜಾನುವಾರುಗಳನ್ನು ಸುರಕ್ಷಿತ ಸ್ಥಳಗಳಲ್ಲಿ ಇರುವಂತೆ ಗಮನಹರಿಸುವುದು.

Attention public: State government releases guidelines to avoid thunderstorms!
Share. Facebook Twitter LinkedIn WhatsApp Email

Related Posts

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM1 Min Read

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM2 Mins Read

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM1 Min Read
Recent News

ಅಂತರಂಗದ ಬದುಕಿಗೆ ಲಗ್ಗೆ ಇಟ್ಟ AI; ಈಗ ‘AI-ಸೆಕ್ಷುವಲ್’ ಹೊಸ ಟ್ರೆಂಡ್! | AI-sexual

22/03/2026 9:41 PM

ಇಸ್ರೇಲ್ – ಇರಾನ್ ವಾರ್ ಎಫೆಕ್ಟ್; ವಿಮಾನಯಾನ ಸಂಸ್ಥೆಗಳಿಗೆ ಬರೋಬ್ಬರಿ 5,000 ಕೋಟಿ ನಷ್ಟ

22/03/2026 9:38 PM

ಗುಜರಾತ್ ಸಿಎಂಯಿಂದ ಭಾರತದ ಪ್ರಧಾನಿವರೆಗೆ, 24 ವರ್ಷಗಳ ನಿರಂತರ ಸೇವೆ : ಮೋದಿಯ ‘ಅಚಲ ಸಮರ್ಪಣೆ’ಯ ಸ್ಟೋರಿಯಿದು!

22/03/2026 9:33 PM

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

22/03/2026 9:33 PM
State News
KARNATAKA

ದಾವಣಗೆರೆಯಲ್ಲಿ ಕಾಂಗ್ರೆಸ್ ಟಿಕೆಟ್ ಹಂಚಿಕೆ ವಿರುದ್ಧ ಅಲ್ಪಸಂಖ್ಯಾತರ ಆಕ್ರೋಶ; ಕೈ ಪಾಳೆಯದಲ್ಲಿ ಭುಗಿಲೆದ್ದ ಅಸಮಾಧಾನ!

By kannadanewsnow0922/03/2026 9:33 PM KARNATAKA 1 Min Read

ದಾವಣಗೆರೆ: ಮುಂಬರುವ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಪಟ್ಟಿ ದಾವಣಗೆರೆ ಜಿಲ್ಲೆಯಲ್ಲಿ ಹೊಸ ಸಂಚಲನ…

BIG NEWS: ಸಾಗರದ ಶೆಡ್ತೀಕೆರೆಯಲ್ಲಿ ವಿದ್ಯಾರ್ಥಿ ಮೇಲೆ ಹಲ್ಲೆ: ರಮೇಶ್ ನಾರಾಯಣ್ ಹಾಗೂ ಇತರ ಶಿಕ್ಷಕರ ವಿರುದ್ಧ ‘ಮಕ್ಕಳ ಆಯೋಗ ಸುಮೋಟೋ ಕೇಸ್’ ದಾಖಲು

22/03/2026 9:07 PM

BIG NEWS: ಮಂಡ್ಯದಲ್ಲಿ ‘LPG ಸಿಲಿಂಡರ್‌’ಗೆ ಮುಗಿಬಿದ್ದ ಜನ: ಪೊಲೀಸ್ ರಕ್ಷಣೆಯಲ್ಲಿ ‘ಗ್ಯಾಸ್‌’ ವಿತರಣೆ

22/03/2026 8:13 PM

ಸಾಗರದಲ್ಲಿ ಅದ್ದೂರಿಯಾಗಿ ನೆರವೇರಿದ ‘ಶ್ರೀ ಮಹಾಗಣಪತಿ ರಥೋತ್ಸವ’: ಭಕ್ತಿಯ ಪರಾಕಾಷ್ಠೆ, ಸಂಸ್ಕೃತಿಯ ಸಂಗಮ

22/03/2026 7:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.