ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅಕ್ಟೋಬರ್.16ರಂದು ಲೋಕಾಯುಕ್ತ ಅಧಿಕಾರಿಗಳಿಂದ ಸಾರ್ವಜನಿಕರಿಂದ ಕುಂದುಕೊರತೆ ಅಹವಾಲು ಸ್ವೀಕಾರ ಸಭೆಯನ್ನು ಆಯೋಜಿಸಲಾಗಿದೆ. ಮದ್ದೂರು ತಾಲ್ಲೂಕಿನ ಜನತೆ ತಮ್ಮ ಕುಂದುಕೊರತೆಯನ್ನು ಸಲ್ಲಿಸಲು ಮನವಿ ಮಾಡಲಾಗಿದೆ.
ಈ ಕುರಿತಂತೆ ಲೋಕಾಯುಕ್ತದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಮಂಡ್ಯ ಲೋಕಾಯುಕ್ತ ವಿಭಾಗದ ಅಧಿಕಾರಿಗಳು ಮದ್ದೂರು ತಾಲ್ಲೂಕಿನಲ್ಲಿ ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಯಿಂದ ಮಧ್ಯಾಹ್ನ 1:30 ರ ವರೆಗೆ ಮದ್ದೂರು ತಾಲೂಕು ಕಚೇರಿ ಆವರಣದಲ್ಲಿ ಸಾರ್ವಜನಿಕರ ಕುಂದುಕೊರತೆ ಸಭೆ ನಡೆಸಿ ಸಾರ್ವಜನಿಕರಿಂದ ದೂರು ಅಹವಾಲು ಸ್ವೀಕಾರ ಮತ್ತು ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತಹ ದೂರುಗಳ ಸ್ವೀಕಾರ ಮಾಡಲಿದ್ದಾರೆ ಎಂದಿದೆ.
ಡಿ ವೈ ಎಸ್ ಪಿ ಸುನಿಲ್ ಕುಮಾರ್ ಹೆಚ್ ಟಿ, ಲೋಕಾಯುಕ್ತ ಪೋಲಿಸ್ ಇನ್ಸ್ ಪೆಕ್ಟರ್ ಗಳಾದ ಬ್ಯಾಟರಾಯಗೌಡ ಬಿ.ಪಿ, ಕುಮಾರ ಎಂ, ಲೇಪಾಕ್ಷ ಮೂರ್ತಿಯವರು ಸದರಿ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದೆ.
ಸದರಿ ಸಭೆಯಲ್ಲಿ ಸರ್ಕಾರಿ ಮತ್ತು ಅರೆ ಸರ್ಕಾರಿ ಕಚೇರಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಧಿಕಾರಿ/ ನೌಕರರುಗಳು ಸರ್ಕಾರಿ ಕೆಲಸ ಮಾಡಿಕೊಡಲು ಅನಗತ್ಯ ವಿಳಂಬ ಮಾಡಿದ ಬಗ್ಗೆ ಹಾಗೂ ಭ್ರಷ್ಟಾಚಾರದ ಬಗ್ಗೆ ದೂರು /ಅಹವಾಲುಗಳು ಏನಾದರೂ ಇದ್ದಲ್ಲಿ ಸ್ವೀಕರಿಸಲಾಗುವುದು ಎಂದು ಮಂಡ್ಯ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಸುರೇಶ್ ಬಾಬು ಎಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Good News ; ‘RBI’ನಿಂದ ‘e₹’ ಅನಾವರಣ ; ಈಗ ಇಂಟರ್ನೆಟ್ ಅಗತ್ಯವಿಲ್ಲ, ಒಂದೇ ಕ್ಲಿಕ್’ನಲ್ಲಿ ‘ಪಾವತಿ’