ರಾಯಚೂರು : ಇಲ್ಲಿಯ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ 2021ನೇ ಸಾಲಿನ ಕ್ರೀಡಾ ಕ್ಷೇತ್ರದಲ್ಲಿ ಅಸಾಧಾರಣ ಪ್ರತಿಭೆಯನ್ನು ತೋರಿರುವ ರಾಜ್ಯದ ಕ್ರೀಡಾಪಟುಗಳಿಗೆ ಏಕಲವ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದ್ದು, ರಾಜ್ಯದ ಪ್ರತಿಭಾನ್ವಿತ ಕ್ರೀಡಾಪಟುಗಳಿಂದ 2020ನೇ ಸಾಲಿನ ಏಕಲವ್ಯ ಪ್ರಶಸ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು 2022ರ ಆಗಸ್ಟ್ 4ರೊಳಗಾಗಿ ಅರ್ಜಿಗಳನ್ನು ಇಲಾಖೆಯಲ್ಲಿ ಪಡೆದು ಭರ್ತಿ ಮಾಡಿ ಸಾಯಂಕಾಲ 5:30 ರೊಳಗಾಗಿ ದ್ವಿ ಪ್ರತಿಗಳಲ್ಲಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.