Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಇ –ಸ್ವತ್ತು’ ಅರ್ಜಿದಾರರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಸಲ್ಲಿಕೆಯ ವಿವರಗಳು ಹೀಗಿವೆ !
KARNATAKA

ರಾಜ್ಯದ `ಇ –ಸ್ವತ್ತು’ ಅರ್ಜಿದಾರರೇ ಗಮನಿಸಿ : `ಋಣಭಾರ ಪ್ರಮಾಣ ಪತ್ರ’ ಸಲ್ಲಿಕೆಯ ವಿವರಗಳು ಹೀಗಿವೆ !

By kannadanewsnow5716/02/2026 5:56 AM

ಇ-ಸ್ವತ್ತು ಹೊಸ ನಿಯಮಗಳು ಜಾರಿಗೊಳ್ಳುವ ಮುನ್ನ ಸೃಜನೆಯಾಗಿರುವ ಕಟ್ಟಡಗಳು ಹಾಗೂ ನಿವೇಶನಗಳನ್ನು ಗ್ರಾಮ ಪಂಚಾಯತಿಗಳು ಸಮೀಕ್ಷೆಯ ಸಂದರ್ಭದಲ್ಲಿ ಕೈಬಿಟ್ಟಿದ್ದು, ಇದರಿಂದ ತೊಂದರೆಗೊಳಗಾಗಿರುವ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮೇಲ್ಮನವಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳನ್ವಯ, ಈ ಹಿಂದೆ ಜಾರಿಯಲ್ಲಿದ್ದ ಇ-ಸ್ವತ್ತು ತಂತ್ರಾಂಶವನ್ನು ನಾಗರಿಕ ಸ್ನೇಹಿಯಾಗಿ ಪರಿಷ್ಕರಿಸಿ, ದಿನಾಂಕ 01-12-2025 ರಂದು ಇ-ಸ್ವತ್ತು 2.0 ತಂತ್ರಾಂಶಕ್ಕೆ ಚಾಲನೆ ನೀಡಲಾಗಿತ್ತು. ಅದರಂತೆ, ದಿನಾಂಕ 07-04-2025 ಕ್ಕಿಂತ ಮುಂಚಿತವಾಗಿ ಸೃಜನೆಯಾಗಿರುವ ಕಟ್ಟಡಗಳು ಮತ್ತು ನಿವೇಶನಗಳಿಗೆ, ಹಾಗೂ ಅಂತಹ ಆಸ್ತಿಗಳು ಪಂಚತಂತ್ರ ತಂತ್ರಾಂಶದಲ್ಲಿ ದಾಖಲೆಯಾಗಿರದಿದ್ದಲ್ಲಿ, 2- ಖಾತಾ ಪಡೆಯುವ ಉದ್ದೇಶದಿಂದ ಇ-ಸ್ವತ್ತು 2.0 ತಂತ್ರಾಂಶದ ಮೂಲಕ ಹೊಸ ನಮೂನೆ-11ಬಿ ಅರ್ಜಿಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ.

ಹೊಸ ನಿಯಮಗಳನ್ವಯ, ಸದರಿ ಕಟ್ಟಡಗಳು ಮತ್ತು ನಿವೇಶನಗಳು ದಿನಾಂಕ 07-04-2025 ಕ್ಕಿಂತ ಮುಂಚಿತವಾಗಿ ಸೃಜನೆಯಾಗಿವೆ ಎಂಬುದನ್ನು ಖಚಿತಪಡಿಸಿಕೊಳ್ಳುವ ಸಲುವಾಗಿ, ಇಂತಹ ಅರ್ಜಿಗಳನ್ನು ಗ್ರಾಮ ಪಂಚಾಯತಿಗಳ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳ ಮೂಲಕ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅನುಮೋದನೆಗಾಗಿ ಕಳುಹಿಸಲಾಗುತ್ತಿದೆ.

ನಮೂನೆ-11ಬಿ ಇ-ಖಾತಾಗಳಿಗೆ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಅನುಮೋದನಾ ಪ್ರಕ್ರಿಯೆಯನ್ನು ತಂತ್ರಾಂಶದಲ್ಲಿ ಅಳವಡಿಸಿರುವ ಕಾರಣ, ಹೊಸ ನಮೂನೆ-11ಬಿ ಅರ್ಜಿಗಳ ವಿಲೇವಾರಿಯಲ್ಲಿ ವಿಳಂಬ ಉಂಟಾಗಿದೆ. ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಅನುಮೋದನೆ ನೀಡಿದ ನಂತರ, ಗ್ರಾಮ ಪಂಚಾಯತಿಗಳಿಂದ 15 ಕೆಲಸ ದಿನಗಳ ಕಾಲಾವಧಿಯಲ್ಲಿ ನಮೂನೆ-11ಬಿ ಗಳನ್ನು ವಿತರಿಸಲಾಗುವುದು. ಈಗಾಗಲೇ ಸಲ್ಲಿಕೆಯಾಗಿರುವ ಹೊಸ ನಮೂನೆ-11ಬಿ ಅರ್ಜಿಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಿ ವಿತರಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಋಣಭಾರ ಪ್ರಮಾಣ ಪತ್ರ ಸಲ್ಲಿಕೆಯ ವಿವರಗಳು ಹೀಗಿವೆ:

ಇ -ಸ್ವತ್ತು ಅರ್ಜಿದಾರರ ನೋಂದಾಯಿತ ಪತ್ರವು 01-04-2004 ಕ್ಕಿಂತ ಮುಂಚಿತವಾಗಿದ್ದರೆ, ಅರ್ಜಿದಾರರು ಎರಡು ಋಣಭಾರ ಪ್ರಮಾಣಪತ್ರ ದಾಖಲೆಗಳನ್ನು ಪಡೆಯಬೇಕಾಗುತ್ತದೆ:

ಅರ್ಜಿದಾರರ ನೋಂದಾಯಿತ ಪತ್ರವು ದಿನಾಂಕ : 17-08-1998 ರಂದು ನೋಂದಣಿಯಾಗಿದ್ದರೆ, ದಿನಾಂಕ 16-08-1998 ರಿಂದ 31-03-2004 ವರೆಗಿನ ಋಣಭಾರ ಪ್ರಮಾಣಪತ್ರ ಪಡೆದುಕೊಳ್ಳಬಹುದು ಹಾಗೂ ದಿನಾಂಕ 01-04- 2004 ರಿಂದ ಅರ್ಜಿ ಸಲ್ಲಿಸಿದವರು ಋಣಭಾರ ಪ್ರಮಾಣಪತ್ರ ಪಡೆದುಕೊಳ್ಳಬಹುದು.

ನೋಂದಾಯಿತ ಪತ್ರವು ದಿನಾಂಕ 13-12-2004 ನೋಂದಣಿಯಾಗಿದ್ದರೆ, 12.12.2004 ರಿಂದ ಅರ್ಜಿ ಸಲ್ಲಿಸುವವರೆಗಿನ ಒಂದೇ ಋಣಭಾರ ಪ್ರಮಾಣಪತ್ರ (EC) ಪಡೆದುಕೊಳ್ಳುವುದು.

ಅರ್ಜಿದಾರರು ಸಲ್ಲಿಸಿದ ಋಣಭಾರ ಪ್ರಮಾಣಪತ್ರ (EC) ದಾಖಲೆಯಲ್ಲಿ ನಿಮ್ಮ ನೋಂದಾಯಿತ ಪತ್ರದ ಸಂಖ್ಯೆ ಇಲ್ಲವಾದಲ್ಲಿ, ಇ-ಸ್ವತ್ತು ಖಾತೆಗೆ ಸಲ್ಲಿಸಿದ ಅರ್ಜಿಯನ್ನು ಮುಂದಿನ ಪ್ರಕ್ರಿಯೆಗೆ ತೆಗೆದುಕೊಳ್ಳಲಾಗುವುದಿಲ್ಲ.

ಮೇಲಿನ ನಿಯಮಗಳ ಅನುಸಾರ ಇ-ಸ್ವತ್ತು ಅರ್ಜಿಗಳನ್ನು ಸಲ್ಲಿಸಬೇಕಾಗಿ ಈ ಮೂಲಕ ಕೋರಲಾಗಿದೆ.

Attention state 'e-asset' applicants: Here are the details for submitting 'Debt Certificate'!
Share. Facebook Twitter LinkedIn WhatsApp Email

Related Posts

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM2 Mins Read

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM1 Min Read

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM1 Min Read
Recent News

ಸಂಕಷ್ಟದ ಸಮಯದಲ್ಲಿ ಶ್ರೀಲಂಕಾಕ್ಕೆ ಭಾರತದ ನೆರವು: 38,000 ಮೆಟ್ರಿಕ್ ಟನ್ ಇಂಧನ ಪೂರೈಕೆ!

29/03/2026 9:54 PM
nitish kumar

ಬಿಹಾರ ರಾಜಕೀಯದಲ್ಲಿ ಸಂಚಲನ: ನಾಳೆ ವಿಧಾನ ಪರಿಷತ್ ಸದಸ್ಯತ್ವಕ್ಕೆ ನಿತೀಶ್ ಕುಮಾರ್ ರಾಜೀನಾಮೆ?

29/03/2026 9:12 PM

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

29/03/2026 8:35 PM

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM
State News
KARNATAKA

ಎಚ್ಚರ! ಆನ್‌ಲೈನ್ ಟ್ರೇಡಿಂಗ್ ಆಸೆಗೆ ಬಿದ್ದು 1.28 ಕೋಟಿ ಕಳೆದುಕೊಂಡ ವ್ಯಕ್ತಿ | Cyber Crime Alert

By kannadanewsnow0929/03/2026 8:35 PM KARNATAKA 2 Mins Read

ಚಿಕ್ಕಮಗಳೂರು: “ಕಡಿಮೆ ಹೂಡಿಕೆ, ಅಲ್ಪ ಅವಧಿಯಲ್ಲಿ ಕೋಟಿ ಕೋಟಿ ಲಾಭ” – ಇಂತಹ ಆಕರ್ಷಕ ಜಾಹೀರಾತುಗಳು ಅಥವಾ ವಾಟ್ಸಾಪ್ ಸಂದೇಶಗಳು…

Rain Alert: ಬೆಂಗಳೂರು ಸೇರಿ 6 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಯಲ್ಲಿ ಗುಡುಗು ಸಹಿತ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ!

29/03/2026 8:31 PM

ಬೆಂಗಳೂರಲ್ಲಿ ಬಳಿ ಸರಣಿ ಅಪಘಾತ: ಆಕ್ರೋಶಗೊಂಡ ಸಾರ್ವಜನಿಕರಿಂದ ಕೆಎಸ್‌ಆರ್‌ಟಿಸಿ ಚಾಲಕನಿಗೆ ಧರ್ಮದೇಟು

29/03/2026 8:05 PM

ಸಾಗರದಲ್ಲಿ ಕೌಟುಂಬಿಕ ಕಲಹಕ್ಕೆ ಮನನೊಂದು ಸ್ಟಾಫ್ ನರ್ಸ್ ಆತ್ಮಹತ್ಯೆ ಯತ್ನ, ಸ್ಥಿತಿ ಗಂಭೀರ

29/03/2026 8:00 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.