ಬೆಂಗಳೂರು : 2024-25ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಮತ್ತು ಸ್ನಾತಕೋತ್ತರ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ವಿದ್ಯಾರ್ಥಿವೇತನ ಮಂಜೂರಾತಿಗಾಗಿ ಎಸ್.ಎಸ್.ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವ ಕುರಿತಂತೆ ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿದೆ.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಉಲ್ಲೇಖಿತ ಸರ್ಕಾರದ ಆದೇಶದ ಅನ್ವಯ 2024-25ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ/ವಿದ್ಯಾರ್ಥಿನಿಯರು ಇಲಾಖೆಯಿಂದ ಮಂಜೂರು ಮಾಡುತ್ತಿರುವ ಸಂಚಿ ಹೊನ್ನಮ್ಮ, ಸರ್.ಸಿ.ವಿ.ರಾಮನ್ ವಿದ್ಯಾರ್ಥಿವೇತನ, ಹೆಚ್.ಐ.ವಿ/ಲೆಪ್ರಸಿ ವಿದ್ಯಾರ್ಥಿವೇತನ, ಹೆಣ್ಣು ಮಕ್ಕಳ ಶುಲ್ಕ ಮರುಪಾವತಿ, ಪದವಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಸೈನಿಕ ಸಿಬ್ಬಂದಿ ಮಕ್ಕಳ ಕಾಲೇಜು ಶುಲ್ಕ ಮರುಪಾವತಿ ಮಂಜೂರಾತಿಗಾಗಿ ಎಸ್.ಎಸ್.ಪಿ ಪೋರ್ಟಲ್‌ನ ಈ ಮುಂದಿನ ಲಿಂಕ್ Link: https://ssp.postmatric.karnataka.gov.in/ ಮೂಲಕ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಷರತ್ತುಗಳು ಮತ್ತು ನಿಬಂಧನೆಗಳು
1. ಸಂಚಿ ಹೊನ್ನಮ್ಮ ಪ್ರತಿಭಾ ವಿದ್ಯಾರ್ಥಿವೇತನ:-
* 2024-25 ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್ ಗಳನ್ನು ಹೊರತುಪಡಿಸಿ) ಕಲಾ ಮತ್ತು ವಾಣಿಜ್ಯ ಪದವಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿಯರು ಮಾತ್ರ ಪ್ರಥಮ ವರ್ಷದ ನೂತನ ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.
+ ದ್ವಿತೀಯ ಪಿ.ಯು.ಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರು ಮಾತ್ರ ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನ ಮಂಜೂರಾತಿಗೆ ಅರ್ಹರಿರುತ್ತಾರೆ.
ಘೀ ಪ್ರಥಮ ವರ್ಷದ ನೂತನ ಸಂಚಿ ಹೊನ್ನಮ್ಮ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳು ಶೇ 75 ರಷ್ಟು ಅಂಕಗಳನ್ನು ಪರಿಶಿಷ್ಟ ಜಾತಿ/ಹಂಗಡದ ವಿದ್ಯಾರ್ಥಿಗಳು ಶೇ 60 ರಷ್ಟು ಅಂಕಗಳನ್ನು ಪಡೆದಿರಬೇಕು.
* ನವೀಕರಣ ವಿದ್ಯಾರ್ಥಿವೇತನ ಮಂಜೂರಾತಿ ಪಡೆಯಲು ವಿದ್ಯಾರ್ಥಿಗಳು ಹಿಂದಿನ ವರ್ಷದ ಎರಡೂ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು.
* 2024-25 ನೇ ಸಾಲಿನ ವಿದ್ಯಾರ್ಥಿವೇತನ ಮಂಜೂರಾತಿಗೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿನಿಯರು ಅಗತ್ಯ ದಾಖಲೆಗಳನ್ನು SSP PORTAL ನಲ್ಲಿ UPLOAD ಮಾಡುವುದು.
2. ಸರ್.ಸಿ.ವಿ.ರಾಮನ್ ಪ್ರತಿಭಾ ವಿದ್ಯಾರ್ಥಿವೇತನ:-
* 2024-25 ನೇ ಸಾಲಿಗೆ ಸರ್ಕಾರಿ ಮತ್ತು ಅನುದಾನಿತ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್ ಗಳನ್ನು ಹೊರತುಪಡಿಸಿ) ವಿಜ್ಞಾನದ ಕೋರ್ಸ್ ಗಳಿಗೆ ಪ್ರವೇಶ ಪಡೆದು ಭೌತಶಾಸ್ತ್ರ, ರಸಾಯನಶಾಸ್ತ್ರ, ಗಣಿತ, ಭೂಗರ್ಭಶಾಸ್ತ್ರ, ಸಸ್ಯಶಾಸ್ತ್ರ ಮತ್ತು ಪ್ರಾಣಿ ಶಾಸ್ತ್ರ ವಿಷಯಗಳಲ್ಲಿ ಕನಿಷ್ಟ 2 ವಿಷಯಗಳನ್ನಾದರೂ ತೆಗೆದುಕೊಂಡು ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಮಾತ್ರ ಪ್ರಥಮ ವರ್ಷದ ನೂತನ ಸರ್.ಸಿ.ವಿ.ರಾಮನ್ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.
* ಪ್ರಥಮ ವರ್ಷದ ನೂತನ ಸರ್.ಸಿ.ವಿ.ರಾಮನ್ ವಿದ್ಯಾರ್ಥಿವೇತನ ಮಂಜೂರಾತಿಗಾಗಿ ದ್ವಿತೀಯ ಪಿ.ಯು.ಸಿಯಲ್ಲಿ ಸಾಮಾನ್ಯ ವಿದ್ಯಾರ್ಥಿಗಳು ಶೇ 65 ರಷ್ಟು ಅಂಕಗಳನ್ನು ಪರಿಶಿಷ್ಟ ಜಾತಿ/ಪಂಗಡದ ವಿದ್ಯಾರ್ಥಿಗಳು ಶೇ 60 ರಷ್ಟು ಅಂಕಗಳನ್ನು
ಪಡೆದಿರಬೇಕು.
* ದ್ವಿತೀಯ ಪಿ.ಯು.ಸಿಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಮಾತ್ರ ಸರ್.ಸಿ.ವಿ.ರಾಮನ್ ವಿದ್ಯಾರ್ಥಿವೇತನ ಮಂಜೂರಾತಿಗೆ ಅರ್ಹರಿರುತ್ತಾರೆ.
* ನವೀಕರಣ ವಿದ್ಯಾರ್ಥಿವೇತನ ಮಂಜೂರಾತಿ ಪಡೆಯಲು ವಿದ್ಯಾರ್ಥಿಗಳು ಹಿಂದಿನ ವರ್ಷದ ಎರಡೂ ಸೆಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು.
* 2024-25 ನೇ ಸಾಲಿನ ವಿದ್ಯಾರ್ಥಿವೇತನ ಮಂಜೂರಾತಿಗೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು SSP PORTAL ನಲ್ಲಿ UPLOAD ಮಾಡುವುದು.
3. ಹೆಚ್‌ಐವಿ/ಲೆಪ್ರಸಿ ವಿದ್ಯಾರ್ಥಿವೇತನ (ವಿಶೇಷ ಚಾಲನೆ ಮತ್ತು ವಿಶೇಷ ವರ್ಗ):
+ 2024-25 ನೇ ಸಾಲಿಗೆ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್ ಗಳನ್ನು ಹೊರತುಪಡಿಸಿ) ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ವಿಶೇಷ ಪಾಲನೆ ಮತ್ತು ವಿಶೇಷ ವರ್ಗದ ಮಕ್ಕಳು (ಹೆಚ್‌ಐವಿ/ಲೆಪ್ರಸಿ ರೋಗ ಪೀಡಿತ ವಿದ್ಯಾರ್ಥಿಗಳು ಅಥವಾ ಹೆಚ್‌ಐವಿ/ಲೆಪ್ರಸಿ ರೋಗ ಪೀಡಿತ ಪೋಷಕರ ಮಕ್ಕಳು ಮಾತ್ರ) ಈ ಯೋಜನೆಯಡಿ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುತ್ತಾರೆ.
* ಈ ಯೋಜನೆಯಡಿ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇತರೆ ಇಲಾಖೆಗಳು ನೀಡುವ ವಿದ್ಯಾರ್ಥಿವೇತನ ಪಡೆಯಲು ಅರ್ಹರಿರುವುದಿಲ್ಲ.
* ವಿಶೇಷ ಪಾಲನೆ ಮತ್ತು ವಿಶೇಷ ವರ್ಗದ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿಗಳು ಇಲಾಖೆಯಿಂದ ಮಂಜೂರು ಮಾಡುವ ಸಂಚಿ ಹೊನ್ನಮ್ಮ ಮತ್ತು ಸರ್.ಸಿ.ವಿ. ರಾಮನ್ ವಿದ್ಯಾರ್ಥಿವೇತನ ಮಂಜೂರಾತಿಗೆ ನಿಗಧಿಪಡಿಸಿದ ಅಂಕಗಳಿಗೆ ಅರ್ಹತೆ ಹೊಂದಿದಲ್ಲಿ ಸಂಚಿ ಹೊನ್ನಮ್ಮ ಮತ್ತು ಸರ್.ಸಿ.ವಿ. ರಾಮನ್ ವಿದ್ಯಾರ್ಥಿವೇತನ ಮಂಜೂರಾತಿಗೆ ಅರ್ಜಿ ಸಲ್ಲಿಸಬಹುದು.
* ವಿಶ್ಲೇಷ ಸೂಚನೆ:- ಎಸ್ ಎಸ್ ಪಿ ಪೋರ್ಟಲ್ ಮೂಲಕ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ತಮ್ಮ ಅಥವಾ ಪೋಷಕರು ಕುಷ್ಠ ರೋಗಕ್ಕೆ ಚಿಕಿತ್ಸೆ ಪಡೆದ ಬಗ್ಗೆ ಎಂ.ಡಿ.ಟಿ ಪ್ರಮಾಣ ಪತ್ರ ಅಥವಾ ಹೆಚ್ ಐ ವಿ ರೋಗಕ್ಕೆ ಚಿಕಿತ್ಸೆ ಪಡೆದ ಬಗ್ಗೆ ಎ ಆರ್ ಟಿ ಪ್ರಮಾಣ ಪತ್ರವನ್ನು ಜಿಲ್ಲಾ ವೈಧ್ಯಾಧಿಕಾರಿಗಳಿಂದ ದೃಢೀಕರಿಸಿ ಅರ್ಜಿಯೊಂದಿಗೆ ದಾಖಲಾತಿಗಳನ್ನು ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿಗೆ ಸಲ್ಲಿಸುವುದು.
* ನವೀಕರಣ ವಿದ್ಯಾರ್ಥಿವೇತನ ಮಂಜೂರಾತಿ ಪಡೆಯಲು ವಿದ್ಯಾರ್ಥಿಗಳು ಹಿಂದಿನ ವರ್ಷದ ಎರಡೂ ಸಮಿಸ್ಟರ್ ಪರೀಕ್ಷೆಯಲ್ಲಿ ಪ್ರಥಮ ಪ್ರಯತ್ನದಲ್ಲಿ ಉತ್ತೀರ್ಣರಾಗಿರಬೇಕು.
* 2023-24 ನೇ ಸಾಲಿನ ವಿದ್ಯಾರ್ಥಿವೇತನ ಮಂಜೂರಾತಿಗೆ SSP ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸುವಾಗ ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು SSP PORTAL ನಲ್ಲಿ UPLOAD ಮಾಡಿ ದಾಖಲಾತಿಗಳನ್ನು ಕಾಲೇಜು ಶಿಕ್ಷಣ ಇಲಾಖೆಯ ಕೇಂದ್ರ ಕಛೇರಿಗೆ ಸಲ್ಲಿಸುವುದು.
4. ಸೈನಿಕ ಸಿಬ್ಬಂದಿ ಮಕ್ಕಳ ಕಾಲೇಜು ಶುಲ್ಕ ಮರು ಪಾವತಿ:-
* 2023-24 ನೇ ಸಾಲಿಗೆ ಸರ್ಕಾರಿ, ಅನುದಾನಿತ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್ ಗಳನ್ನು ಹೊರತುಪಡಿಸಿ) ಪ್ರಥಮ ಪದವಿ ತರಗತಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ದೇಶದ ರಕ್ಷಣಾ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ/ನಿರ್ವಹಿಸಿದ ಸೈನಿಕ ಸಿಬ್ಬಂದಿ ಮಕ್ಕಳು/ದತ್ತು ಮಕ್ಕಳು ಈ ಯೋಜನೆಯಡಿ ಶುಲ್ಕ ಮರುಪಾವತಿಗೆ ಅರ್ಹರಿದ್ದು, ಅಗತ್ಯ ದಾಖಲೆಗಳನ್ನು SSP PORTAL ನಲ್ಲಿ UPLOAD ಮಾಡಿ ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಬಹುದು.
* ಈ ಯೋಜನೆಯಡಿ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಇತರ ಇಲಾಖೆಗಳು ನೀಡುವ ವಿದ್ಯಾರ್ಥಿವೇತನ ಅಥವಾ ಶುಲ್ಕ ಮರುಪಾವತಿ ಮಂಜೂರಾತಿ ಪಡೆಯಲು ಅರ್ಹರಿರುವುದಿಲ್ಲ.
5. ಎಸ್.ಸಿ.ಎಸ್.ಟಿ ಪದವಿ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ :-
+ ಪೋಷಕರ ಆದಾಯ ಮಿತಿ ರೂ. 2.50 ಲಕ್ಷದಕ್ಕಿಂತ ಹೆಚ್ಚು ಇರುವ 2024-25 ನೇ ಸಾಲಿಗೆ ಪದವಿ ತರಗತಿಗೆ ಪ್ರವೇಶ ಪಡೆದು ವಿದ್ಯಾಭ್ಯಾಸ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳ ಬೋಧನಾ ಶುಲ್ಕವನ್ನು ಮರುಪಾವತಿಸಲಾಗುವುದು.
6. ಹೆಣ್ಣು ಮಕ್ಕಳ ಶುಲ್ಕ ಮರುಪಾವತಿ:-
* 2024-25 ನೇ ಸಾಲಿಗೆ ಸರ್ಕಾರಿ ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳಲ್ಲಿ (ಅನುದಾನರಹಿತ ಕೋರ್ಸ್ ಗಳನ್ನು ಹೊರತುಪಡಿಸಿ) ಪ್ರಥಮ, ದ್ವಿತೀಯ ಮತ್ತು ಅಂತಿಮ ಪದವಿ ತರಗತಿಗೆ ಅಥವಾ ಸ್ನಾತಕೋತ್ತರ ತರಗತಿಗೆ ಪ್ರವೇಶ ಪಡೆದು ವ್ಯಾಸಂಗ ಮಾಡುತ್ತಿರುವ ಎಲ್ಲಾ ವರ್ಗದ ಹೆಣ್ಣು ಮಕ್ಕಳು ಕಾಲೇಜು ಶಿಕ್ಷಣ ಇಲಾಖೆಯಿಂದ ಮಂಜೂರು ಮಾಡುವ ಶುಲ್ಕ ಮರುಪಾವತಿ ಸೌಲಭ್ಯ ಪಡೆಯಲು ಅಗತ್ಯ ದಾಖಲೆಗಳೊಂದಿಗೆ ಎಸ್ ಎಸ್ ಪಿ ಪೋರ್ಟಲ್ ಮೂಲಕ ಅರ್ಜಿ ಸಲ್ಲಿಸಬಹುದು.
* ಕಾಲೇಜು ಶಿಕ್ಷಣ ಇಲಾಖೆಯಿಂದ ಮಂಜೂರು ಮಾಡುವ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿನಿಯರು ಇತರ ಇಲಾಖೆಗಳು ನೀಡುವ ಯಾವುದೇ ಶುಲ್ಕ ಮರುಪಾವತಿ ಪಡೆದಿರಬಾರದು ಅಥವಾ ಯಾವುದೇ ಶುಲ್ಕ ಮರುಪಾವತಿಗೆ ಅರ್ಜಿ ಸಲ್ಲಿಸುವಂತಿಲ್ಲ.
* ನಂಚಿ ಹೊನ್ನಮ್ಮ ಅಥವಾ ಸರ್.ಸಿ.ವಿ.ರಾಮನ್ ಪ್ರತಿಭಾ ವಿದ್ಯಾರ್ಥಿವೇತನ ಪಡೆದ ವಿದ್ಯಾರ್ಥಿನಿಯರು ಹೆಣ್ಣುಮಕ್‌ಕಳ ಶುಲ್ಕ ಮರುಪಾವತಿ ಯೋಜನೆಯಡಿ ಶುಲ್ಕ ಮರುಪಾವತಿಗಾಗಿ ಅರ್ಜಿ ಸಲ್ಲಿಸಲು ಅರ್ಹರಿರುತ್ತಾರೆ (ಕರಡು ಪ್ರತಿ ಮಾನ್ಯ ಆಯುಕ್ತರಿಂದ ಅನುಮೋದಿಸಲ್ಪಟ್ಟಿದೆ)