ಬೆಂಗಳೂರು : ಬಿಎಂಟಿಸಿ ಬಸ್‌ಗಳಲ್ಲಿ ಉಚಿತ / ರಿಯಾಯಿತಿ ದರದಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳು ಪಾಸ್‌ಗಾಗಿ ಮೇ 26ರಿಂದ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಅರ್ಜಿ ಸಲ್ಲಿಸಿದವರಿಗೆ ಜೂನ್ 1ರಿಂದ ವಿದ್ಯಾರ್ಥಿ ಪಾಸ್‌ಗಳನ್ನು ವಿತರಣೆ ಮಾಡಲಾಗುವುದು. ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ನಲ್ಲಿ ಅರ್ಜಿ ನಮೂನೆ ಲಭ್ಯವಿದೆ. ಬೆಂಗಳೂರು ಒನ್ ಕೇಂದ್ರಗಳ ಮೂಲಕವು ಅರ್ಜಿ ಸಲ್ಲಿಸಲು ಅವಕಾಶವಿದೆ.
ಶಕ್ತಿ ಯೋಜನೆಯಡಿ ವಿದ್ಯಾರ್ಥಿನಿಯರಿಗೆ ಸಾಮಾನ್ಯ ಬಸ್‌ಗಳಲ್ಲಿ ಉಚಿತವಾಗಿ ಸಂಚರಿಸಲು ಅವಕಾಶ ಇದೆ. ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 080–22483777 ಸಂಪರ್ಕಿಸಬಹುದು ಎಂದು ಬಿಎಂಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.