ಬೆಂಗಳೂರು: ಅನಿರೀಕ್ಷಿತ ತಾಂತ್ರಿಕ ಸಮಸ್ಯೆಯ ಹಿನ್ನೆಲೆಯಲ್ಲಿ, ರಾಷ್ಟ್ರೀಯ ಸಾಮಾನ್ಯ ಸಂಚಾರ ಕಾರ್ಡ್ (NCMC) ಗಳ ಟಾಪ್-ಅಪ್/ರೀಚಾರ್ಜ್ ಸೌಲಭ್ಯವು ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಸೇವೆಯನ್ನು ಶೀಘ್ರದಲ್ಲೇ ಪುನಃ ಆರಂಬಿಸಲು ಆದ್ಯತೆಯ ಮೇರೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಅಂತ ಬಿಎಂಆರ್ ಸಿಎಲ್ ತಿಳಿಸಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಎನ್‌ಸಿಎಂಸಿ ಕಾರ್ಡ್ ಬಳಸುವ ಪ್ರಯಾಣಿಕರು ತಮ್ಮ ಪ್ರಯಾಣವನ್ನು ಅದಕ್ಕೆ ಅನುಗುಣವಾಗಿ ಯೋಜಿಸಿಕೊಳ್ಳುವಂತೆ ಕೋರಲಾಗಿದೆ. ಕಾರ್ಡ್‌ಗಳನ್ನು ರೀಚಾರ್ಜ್ ಮಾಡಲು ಅಥವಾ ಬಳಸಲು ಸಾಧ್ಯವಾಗದಿದ್ದಲ್ಲಿ, ಪ್ರಯಾಣಿಕರು ಯಾವುದೇ ತೊಂದರೆ ತಪ್ಪಿಸಲು ಕ್ಯೂಆರ್ ಟಿಕೆಟ್‌ಗಳು ಅಥವಾ ಟೋಕನ್‌ಗಳನ್ನು ಖರೀದಿಸಿ ಪ್ರಯಾಣಿಸಬಹುದು ಎಂದಿದೆ.
ಈ ತಾತ್ಕಾಲಿಕ ಅನಾನೂಕೂತೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತ (ಬಿಎಂಆರ್‌ಸಿಎಲ್) ವಿಷಾದ ವ್ಯಕ್ತಪಡಿಸುತ್ತಿದ್ದು, ಪ್ರಯಾಣಿಕರ ಸಹನೆ, ಸಹಕಾರ ಮತ್ತು ತಿಳುವಳಿಕೆಗೆ ಕೃತಜ್ಞತೆ ಸಲ್ಲಿಸುತ್ತದೆ ಅಂತ ಹೇಳಿದೆ.
ಸದರಿ ಸೇವೆ ಸಂಪೂರ್ಣವಾಗಿ ಯಾತಸ್ಥಿತಿಗೆ ಬಂದಕೂಡಲೇ ಮಾಹಿತಿಯನ್ನು ಪ್ರಕಟಿಸಲಾಗುವುದು ಎಂಬುದಾಗಿ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.








