ಬೆಂಗಳೂರು : ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ಧಿ ನಿಗಮದಿಂದ 2025-26 ನೇ ಸಾಲಿನ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ವೈಯಕಿಕ್ತ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವ ವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ, ಸ್ವಯಂ ಉದ್ಯೋಗ ಸಾಲ ಯೋಜನೆ, (ವ್ಯಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಗಳಡಿಯಲ್ಲಿ ಸೌಲಭ್ಯ ಪಡೆಯಲು ಹಿಂದುಳಿದ ವರ್ಗಗಳಿಗೆ ಸೇರಿದ (ವಿಶ್ವಕರ್ಮ, ಉಪ್ಪಾರ, ಅಂಬಿಗ, ಮಡಿವಾಳ, ಸವಿತಾ, ಒಕ್ಕಲಿಗ, ಲಿಂಗಾಯತ, ಕಾಡುಗೊಲ್ಲ, ಮರಾಠ ಮತ್ತು ಇದರ ಉಪ ಸಮುದಾಯಗಳನ್ನು ಹೊರತುಪಡಿಸಿ) ಸಮುದಾಯಗಳ ಆಸಕ್ತರಿಂದ ಆನ್ಲೈನ್ ಅರ್ಜಿ ಆಹ್ವಾನಿಸಿದೆ.
ಈ ಮೇಲಿನ ಎಲ್ಲಾ ಯೋಜನೆಗಳ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸುವಾಗ ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆ ಹೊಂದಿರಬೇಕು. ಆಧಾರ್ ಕಾರ್ಡ್ ನಲ್ಲಿರುವಂತೆ ಅರ್ಜಿದಾರರ ಹೆಸರು ಮತ್ತು ಇತರೆ ದಾಖಾಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇದ್ದೂ ಹೊಂದಾಣಿಕೆಯಾಗಬೇಕು. ಒಂದು ಬಾರಿ ನಿಗಮದ ಯಾವುದಾದರೂ ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಪಡೆಯಲು ಅರ್ಹರಿರುವುದಿಲ್ಲ. 2023-24 ಮತ್ತು 2024-25 ನೇ ಸಾಲಿನಲ್ಲಿ ಅರ್ಜಿ ಸಲ್ಲಿಸಿರುವವರು ಪುನಃ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ http:/sevasindhu.karnataka.gov.in ಮುಖಾಂತರ ಗ್ರಾಮ ಒನ್/ ಬೆಂಗಳೂರು ಒನ್/ ಕರ್ನಾಟಕ ಒನ್ ನಾಗರೀಕ ಸೇವಾಕೇಂದ್ರಗಳಲ್ಲಿ ದಾಖಲೆಗಳ ಸಹಿತ ಜೂನ್ 30 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.