ಬೆಂಗಳೂರು: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಶ್ರಮ ಶಕ್ತಿ ಸಾಲ / ಸಹಾಯಧನ ಯೋಜನೆ, ರೇಷ್ಮೆ ನೂಲು ಬಿಚ್ಚಾಣಿಕೆ ಉದ್ಯಮಕ್ಕೆ ಪ್ರೋತ್ಸಾಹ, ಟ್ಯಾಕ್ಸಿ / ಗೂಡ್ಸ್ ವಾಹನ ಖರೀದಿ ಸಹಾಯಧನ ಯೋಜನೆ, ವೃತ್ತಿ ಪ್ರೋತ್ಸಾಹ ಸಾಲ / ಸಹಾಯಧನ ಯೋಜನೆ, ಸಾಂತ್ವನ ಯೋಜನೆ , ವಿದೇಶದಲ್ಲಿ ಉನ್ನತ ವ್ಯಾಸಂಗಕ್ಕಾಗಿ Foreign Education / Overseas Education Loan) ವ್ಯಾಪಾರ / ಉದ್ದಿಮೆಗಳಿಗೆ ನೇರ ಸಾಲ ಯೋಜನೆಯಡಿಯಲ್ಲಿ ಸಾಲ ಸೌಲಭ್ಯ ಪಡೆಯಲು ಮತೀಯ ಅಲ್ಪಸಂಖ್ಯಾತರಿಂದ ಕ್ರಿಶ್ಚಿಯನ್ ಸಮುದಾಯ ಹೊರತುಪಡಿಸಿ (ಅಂದರೆ ಮುಸ್ಲಿಂ, ಜೈನರು, ಬೌದ್ಧರು, ಸಿಖ್ಖರು ಹಾಗೂ ಪಾರ್ಸಿ ಜನಾಂಗದವರಿಂದ ) ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಜಿದಾರರು ಮತೀಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿರಬೇಕು. ಕರ್ನಾಟಕ ರಾಜ್ಯದಲ್ಲಿ ಕನಿಷ್ಠ 15 ವರ್ಷದಿಂದ ಖಾಯಂ ನಿವಾಸಿಯಾಗಿರಬೇಕು. ಈ ಹಿಂದೆ ನಿಗಮದ ಸೌಲಭ್ಯವನ್ನು ಪಡೆದವರು ಮತ್ತೆ ಸೌಲಭ್ಯವನ್ನು ಪಡೆಯಲು ಅರ್ಹರಿರುವುದಿಲ್ಲ.
ಆಸಕ್ತರು ವೆಬ್ ಸೈಟ್ https://kmdconline.karnataka.gov.in ನಲ್ಲಿ ಅಕ್ಟೋಬರ್ 16, 2025 ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದು. ಅರ್ಜಿಯ ಪ್ರತಿ ಹಾಗೂ ದಾಖಲಾತಿಗಳೊಂದಿಗೆ ನಿಗಮದ ಕಛೇರಿಗೆ ಅಕ್ಟೋಬರ್ 10, 2025 ರೊಳಗಾಗಿ ಸಲ್ಲಿಸಬಹದು.
ಗಮನಿಸಿ : ನಿಮ್ಮ ಮನೆಯಲ್ಲಿ ಎಷ್ಟು ದಿನಗಳವರೆಗೆ `ನೀರು’ ಸಂಗ್ರಹಿಸಿಡಬಹುದು ಗೊತ್ತಾ?
ಬೆಂಗಳೂರಲ್ಲಿ ನಮ್ಮ ಮೆಟ್ರೋ ರೈಲು ಹಳಿಗೆ ಹಾರಿ ಆತ್ಮಹತ್ಯೆ ಯತ್ನ: ರೈಲು ಸಂಚಾರ ಪುನರಾರಂಭ