ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಆಯೋಗದಯಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿಗಳ ಬಗ್ಗೆ ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಸಾರ್ವಜನಿಕರಿಗೆ ಮಾಹಿತಿ ನೀಡುವ ಉದ್ದೇಶದಿಂದ ಸಹಾಯವಾಣಿ (ಹೆಲ್ಪ್‍ಲೈನ್) ಸೇವೆಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಕಚೇರಿಯಲ್ಲಿ ಆರಂಭಿಸಲಾಗಿದೆ.
ಪ್ರತಿನಿತ್ಯ ಸಮೀಕ್ಷೆ ಕುರಿತಂತೆ ಸಾರ್ವಜನಿಕರಿಂದ ಬರುವ ಮಾಹಿತಿ, ದೂರು, ಆಕ್ಷೇಪಣೆ, ಸಲಹೆ ಇತ್ಯಾದಿಗಳನ್ನು ಸ್ವೀಕರಿಸಿ, ಕರೆಗಳಿಗೆ ಸೂಕ್ತ ಉತ್ತರ ನೀಡಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಸಮೀಕ್ಷೆ ಕುರಿತಂತೆ ಹೆಚ್ಚಿನ ಮಾಹಿತಿ ಅಗತ್ಯವಿದ್ದಲ್ಲಿ ಸಹಾಯವಾಣಿ ಸಂಖ್ಯೆ: 0836-2447961 ಗೆ ಕರೆ ಮಾಡಬಹುದು ಎಂದು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿಯ ಅಧ್ಯಕ್ಷರಾಗಿರುವ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.