Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಯ ಗಮನಕ್ಕೆ : `ಜನನ-ಮರಣ ನೋಂದಣಿ’ಗೆ ಶುಲ್ಕ ಎಷ್ಟು? ಇಲ್ಲಿದೆ ಮಾಹಿತಿ
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಜನನ-ಮರಣ ನೋಂದಣಿ’ಗೆ ಶುಲ್ಕ ಎಷ್ಟು? ಇಲ್ಲಿದೆ ಮಾಹಿತಿ

By kannadanewsnow57

ಬದುಕಿರುವ ಪ್ರತಿಯೊಬ್ಬ ವ್ಯಕ್ತಿಗೆ ಜನನ ಪ್ರಮಾಣ ಪತ್ರ ತುಂಬಾ ಅಗತ್ಯವಾದ ದಾಖಲೆಯಾಗಿದೆ ಮತ್ತು ವ್ಯಕ್ತಿಯ ಮರಣದ ನಂತರ ಕುಟುಂಬದವರಿಗೆ ಮರಣ ಪ್ರಮಾಣಪತ್ರ ಉಪಯುಕ್ತವಾದ ದಾಖಲೆಯಾಗಿದ್ದು, ಜನನ ಮತ್ತು ಮರಣ ಪ್ರಮಾಣ ಪತ್ರಗಳು ಜನರಿಗೆ ಸಕಾಲದಲ್ಲಿ ಸಿಗುವಂತಾಗಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಹೇಳಿದರು. 

 ಅವರು ಶುಕ್ರವಾರ ಕೊಪ್ಪಳ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಸಾಂಖ್ಯಿಕ ಇಲಾಖೆ ವತಿಯಿಂದ ಹಮ್ಮಿಕೊಂಡಿದ್ದ ನಾಗರೀಕ ನೋಂದಣಿ ಪದ್ದತಿಯ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದರು.

 “ಜನನ ಮರಣ ನೋಂದಣಿ ಅಧಿನಿಯಮಗಳು-1969” ಹಾಗೂ “ಕರ್ನಾಟಕ ಜನನ ಮರಣ ನೋಂದಣಿ ನಿಯಮಗಳು 1999” ರನ್ವಯ ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿದೆ. ನಿಗದಿತ ಅವಧಿಯೊಳಗೆ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿ ಮಾಡಲು ಅವಕಾಶವಿದ್ದು, ಆ ಅವಧಿಯೊಳಗೆ ಜನನ ಮರಣ ಮಾಹಿತಿಯು ಸಂಬಂಧಿಸಿದ ತಂತ್ರಾಶದಲ್ಲಿ ದಾಖಲಿಸಬೇಕು. ಜನನ-ಮರಣ ನೋಂದಣಿಯನ್ನು ಅಧಿನಿಯಮ ಮತ್ತು ನಿಯಮಗಳಂತೆ ಹಾಗೂ 2024ರ ತಿದ್ದುಪಡಿ ನಿಯಮದಂತೆ ಅನುಷ್ಠಾನಕ್ಕೆ ಕ್ರಮವಹಿಸಬೇಕು. ಶೇ.100 ರಷ್ಟು ಜನನ, ಮರಣ ಮತ್ತು ನಿರ್ಜೀವ ಜನನಗಳ ಘಟನೆಗಳನ್ನು ನೋಂದಾವಣೆ ಆಗಿರುವ ಬಗ್ಗೆ ಪರಿಶೀಲನೆ ಕೈಗೊಳ್ಳಬೇಕು. ವಿಳಂಭ ನೋಂದಣಿ ಘಟನೆಗಳನ್ನು ತಡೆಯುವ ಬಗ್ಗೆಯೂ ಸಹ ಕ್ರಮ ವಹಿಸಬೇಕು. ಶೇ. 100ರಷ್ಟು ವರದಿ ಸಾಮರ್ಥ್ಯ ಸಾಧಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.

 ಜನನ ಮತ್ತು ಮರಣ ನೋಂದಣಿ ಕಾರ್ಯವನ್ನು ಜಿಲ್ಲೆಯ ಎಲ್ಲಾ ಗ್ರಾಮ ಲೆಕ್ಕಿಗರು, ವೈದ್ಯಾಧಿಕಾರಿಗಳು ಹಾಗೂ ನಗರಸಭೆ ಪೌರಾಯುಕ್ತರು ಸರಿಯಾಗಿ ನಿರ್ವಹಿಸಬೇಕು. ನೋಂದಣಿ ವೇಳೆ ಸೂಕ್ತ ಪರಿಶೀಲನೆ ಕೈಗೊಂಡು ಅದರ ವದಿಯನ್ನು ಸಲ್ಲಿಸಬೇಕು. ವಿಳಂಬ ನೋಂದಣಿ ಘಟನೆಗಳನ್ನು ತಡೆಬೇಕು. ಯಾವುದೇ ದಾಖಲಾತಿ ಬಾಕಿ ಉಳಿಯದಂತೆ ಶೇ.100ರಷ್ಟು ನೋಂದಣಿ ಮಾಡುವಂತೆ ಕ್ರಮವಹಿಸಬೇಕು ಎಂದು ಹೇಳಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಪ್ರಕಾಶ ಪಿ. ದೇಶಪಾಂಡೆ ಅವರು ಮಾತನಾಡಿ, ಜನನ, ಮರಣ ಮತ್ತು ನಿರ್ಜೀವ ಜನನಗಳ ನೋಂದಣಿ ಕಡ್ಡಾಯವಾಗಿರುತ್ತದೆ. 21 ದಿವಸ ಗಳೊಳಗಾಗಿ ಯಾವುದೇ ಶುಲ್ಕವಿಲ್ಲದೆ ಜನನ ಮರಣ ನೋಂದಣಿಯನ್ನು ಮಾಡಲಾಗುವುದು. 2024ರ ತಿದ್ದುಪಡಿ ನಿಯಮದಂತೆ ಜನನ ಮರಣ ಹೆಚ್ಚುವರಿ ಪ್ರಮಾಣ ಪತ್ರಗಳ ಶುಲ್ಕವು ಈಗ ರೂ.50 ಆಗಿರುತ್ತದೆ. ವಿಳಂಬ (ತಡ) ನೋಂದಣಿಗೆ ಘಟನೆ ಸಂಭವಿಸಿದ 21 ದಿನಗಳಿಂದ 30 ದಿನದವರೆಗೆ ಶುಲ್ಕ 20 ಆಗಿರುತ್ತದೆ. ಘಟನೆ ಸಂಭವಿಸಿದ 30 ದಿನಗಳ ನಂತರ ಒಂದು ವರ್ಷದವರೆಗೆ ಶುಲ್ಕ ರೂ. 50 ಆಗಿರುತ್ತದೆ. ಗಂಗಾವತಿ ತಾಲ್ಲೂಕಿನಲ್ಲಿ 85 ನೋಂದಣಿ ಘಟಕಗಳು, ಕನಕಗಿರಿ 67, ಕಾರಟಗಿ 36, ಕೊಪ್ಪಳ 180, ಕುಕನೂರು 65, ಕುಷ್ಟಗಿ 197 ಹಾಗೂ ಯಲಬುರ್ಗಾ 101 ಸೇರಿ ಕೊಪ್ಪಳ ಜಿಲ್ಲೆಯಲ್ಲಿ ಒಟ್ಟು 731 ನೋಂದಣಿ ಘಟಕಗಳಿವೆ. ಇದರಲ್ಲಿ 713 ಗ್ರಾಮಾಂತರ ಮತ್ತು 18 ನಗರ ಪ್ರದೇಶದಲ್ಲಿವೆ ಎಂದರು.

 ಜನನ ಮರಣ ಘಟನೆಗಳನ್ನು ಇ-ಜನ್ಮ ತಂತ್ರಾಂಶದ ಮೂಲಕ ನೋಂದಣಿ ಮಾಡುವ ಕಾರ್ಯ 2015 ರಿಂದ ಪ್ರಾರಂಭಿಸಲಾಗಿದೆ. ತದನಂತರ ಎಲ್ಲಾ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮತ್ತು ಸರ್ಕಾರಿ ಆಸ್ಪತ್ರೆಗಳಲ್ಲಿ 2018 ರಿಂದ ಸಂಪೂರ್ಣವಾಗಿ ಇ-ಜನ್ಮ ತಂತ್ರಾಂಶದ ಮೂಲಕ ಜನನ ಮರಣ ಘಟನೆಗಳನ್ನು ನೋಂದಣಿ ಮಾಡುವ ಕಾರ್ಯವನ್ನು ಜಿಲ್ಲೆಯಾದ್ಯಂತ ಕಡ್ಡಾಯಗೊಳಿಸಲಾಗಿದೆ. ಎಲ್ಲಾ ನೋಂದಣಾಧಿಕಾರಿಗಳು ಅಥವಾ ಉಪನೋಂದಣಾಧಿಕಾರಿಗಳು ಕಡ್ಡಾಯವಾಗಿ ಡಿಜಿಟಲ್ ಸಹಿಯೊಂದಿಗೆ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಬೇಕು. ಜನನ ಮರಣ ನೋಂದಣಿ ಘಟಕಗಳ ಪರಿಶೀಲನೆ ಸೆಕ್ಷನ್ 18ರ ಪ್ರಕಾರ ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಯುತ್ತಿರುವ ಬಗ್ಗೆ ಹಾಗೂ ಶೇಕಡಾ 100ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರಿಶೀಲನೆಯನ್ನು ಕಂದಾಯ, ನಗರಾಭಿವೃದ್ಧಿ ಅಥವಾ ಸಾಂಖ್ಯಿಕ ಇಲಾಖೆಯ ಅಧಿಕಾರಿಗಳು ನಡೆಸಬೇಕಾಗಿರುತ್ತದೆ ಎಂದು ತಿಳಿಸಿದರು.

Attention to the people of the state: How much is the fee for `Birth-Death Registration'? Here is the information
Share. Facebook Twitter LinkedIn WhatsApp Email

Related Posts

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

2 Mins Read

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

2 Mins Read

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

2 Mins Read
Recent News

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

SHOCKING : ಪೋಷಕರೇ ಹುಷಾರ್ : ‘AI’ ನಲ್ಲಿ ಯುವತಿಯ ಅಶ್ಲೀಲ ಫೋಟೋ, ವಿಡಿಯೋ ರಚಿಸಿ ಹಣಕ್ಕೆ ಬೇಡಿಕೆ : ಇಬ್ಬರು ಅರೆಸ್ಟ್!

State News
KARNATAKA

BIG NEWS : ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಪ್ರಕರಣ : ಕೋರ್ಟ್ ಗೆ 410 ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ

By ಸುರೇಶ್‌ KARNATAKA 2 Mins Read

ದಾವಣಗೆರೆ: ಹರಿಹರದ ಹರಜಾತ್ರೆ ಮತ್ತು ಯೋಗದ ಮೂಲಕ ರಾಜ್ಯಾದ್ಯಂತ ಚಿರಪರಿಚಿತರಾಗಿರುವ ವಚನಾನಂದ ಸ್ವಾಮೀಜಿ ವಿರುದ್ಧದ ಪೋಕ್ಸೋ (POCSO) ಪ್ರಕರಣಕ್ಕೆ ಸಂಬಂಧಿಸಿದಂತೆ,…

BREAKING : ನಾನು ಆರೋಗ್ಯವಾಗಿದ್ದೇನೆ, ಯಾವುದೇ ಆತಂಕ ಬೇಡ : ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ ಹಿರಿಯ ನಟ ದೊಡ್ಡಣ್ಣ

ALERT : ಬೈಕ್ ಸವಾರರೇ ಎಚ್ಚರ : ಮಳೆಗಾಲದಲ್ಲಿ ಈ 5 ತಪ್ಪುಗಳನ್ನು ಮಾಡಿದರೆ ಅಪಘಾತ ಗ್ಯಾರಂಟಿ

SHOCKING : ಪೋಷಕರೇ ಹುಷಾರ್ : ‘AI’ ನಲ್ಲಿ ಯುವತಿಯ ಅಶ್ಲೀಲ ಫೋಟೋ, ವಿಡಿಯೋ ರಚಿಸಿ ಹಣಕ್ಕೆ ಬೇಡಿಕೆ : ಇಬ್ಬರು ಅರೆಸ್ಟ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.