Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!
KARNATAKA

ರಾಜ್ಯದ ಜನತೆಯ ಗಮನಕ್ಕೆ : ನಿಮ್ಮ `BPL’ ರೇಷನ್ ಕಾರ್ಡ್ ರದ್ದಾಗಿದ್ದರೆ ಜಸ್ಟ್ ಹೀಗೆ ಮಾಡಿ.!

By kannadanewsnow57

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯಿಂದ ಪಡಿತರ ಕಾರ್ಡುಗಳ ಪರಿಷ್ಕರಣಾ ಕಾರ್ಯ ನಡೆಯುತ್ತಿದ್ದು, ಈ ಅವಕಾಶವನ್ನು ಅರ್ಹರು ಬಳಸಿಕೊಳ್ಳುವಂತಾಗಬೇಕು ಎಂದು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರಾದ ತಿತಿರ ಧರ್ಮಜ ಉತ್ತಪ್ಪ ಅವರು ತಿಳಿಸಿದ್ದಾರೆ.  

ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಮತ್ತು ಮೇಲ್ವಿಚಾರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯ ಅರ್ಹರಿಗೆ ಬಿಪಿಎಲ್‍ನಿಂದ ಎಪಿಎಲ್‍ಗೆ ಪಡಿತರ ಚೀಟಿ ವರ್ಗಾವಣೆ ಆಗಿದ್ದಲ್ಲಿ, ಆಹಾರ ಇಲಾಖೆ ಅಥವಾ  ತಾಲ್ಲೂಕಿನ ತಹಶೀಲ್ದಾರ್ ಕಚೇರಿಯ ಆಹಾರ ಶಿರಸ್ತೆದಾರರಿಗೆ ಮನವಿ ಸಲ್ಲಿಸುವಂತಾಗಬೇಕು. ಇದರಿಂದ ಪರಿಶೀಲಿಸಿ ಪುನಃ ಬಿಪಿಎಲ್ ಕಾರ್ಡ್ ವಿತರಿಸಲಿದ್ದಾರೆ. ಆ ನಿಟ್ಟಿನಲ್ಲಿ ಆಹಾರ ಇಲಾಖೆಯವರು ಅಗತ್ಯ ಜಾಗೃತಿ ಮೂಡಿಸುವಂತೆ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷರು ನಿರ್ದೇಶನ ನೀಡಿದರು.

ಅನ್ನಭಾಗ್ಯ ಯೋಜನೆಯಡಿ ಪ್ರತೀ ಫಲಾನುಭವಿಗೆ 10 ಕೆ.ಜಿ. ಅಕ್ಕಿ ವಿತರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳನ್ನು ಒಳಗೊಂಡ ಇಂದಿರಾ ಕಿಟ್ ವಿತರಿಸಲು ಸರ್ಕಾರ ಉದ್ದೇಶಿಸಿದೆ ಎಂದು ಧರ್ಮಜ ಉತ್ತಪ್ಪ ಅವರು ವಿವರಿಸಿದರು.

ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಕುಟುಂಬದ ಹಲವು ಬಡವರಿಗೆ ಎಪಿಎಲ್ ಕಾರ್ಡ್ ನೀಡಲಾಗಿದ್ದು, ಬಡವರಿಗೆ ಬಿಪಿಎಲ್ ಕಾರ್ಡ್ ವಿತರಿಸಬೇಕು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಆರ್ಥಿಕವಾಗಿ ಸಬಲರಾಗಿದ್ದಲ್ಲಿ ಅಂತಹ ಕುಟುಂಬಗಳನ್ನು ಗ್ರಾ.ಪಂ.ಮಟ್ಟದಲ್ಲಿ ಪರಿಶೀಲಿಸಬೇಕು. ಅದನ್ನು ಬಿಟ್ಟು ನಿಜವಾದ ಬಡವರಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ನೋವು ತರುತ್ತಿದೆ. ಆದ್ದರಿಂದ ಅರ್ಹರಿಗೆ ಬಿಪಿಎಲ್ ಕಾರ್ಡ್ ತಲುಪಿಸಬೇಕು ಎಂದು ಸೂಚಿಸಿದರು. ಈ ಸಂಬಂಧ ಸರ್ಕಾರಕ್ಕೂ ಸಹ ಪತ್ರ ಬರೆಯಲು ಸಭೆಯಲ್ಲಿ ನಿರ್ಧರಿಸಲಾಯಿತು.

ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಮತ್ತು ಪ್ರಗತಿ ಸಂಬಂಧ ಜಿಲ್ಲಾ ಮಟ್ಟದಲ್ಲಿ ಸಮ್ಮೇಳನ ಆಯೋಜಿಸಲಾಗುವುದು. ಸಮ್ಮೇಳನಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು, ಗ್ಯಾರಂಟಿ ಯೋಜನೆ ರಾಜ್ಯ ಅನುಷ್ಠಾನ ಸಮಿತಿ ಅಧ್ಯಕ್ಷರು, ಉಪಾಧ್ಯಕ್ಷರು, ಹೀಗೆ ಹಲವರು ಪಾಲ್ಗೊಳ್ಳಲಿದ್ದಾರೆ. ಈಗಾಗಲೇ ಕೆಲವು ಜಿಲ್ಲೆಗಳಲ್ಲಿ ಸಮ್ಮೇಳನ ನಡೆದಿದೆ ಎಂದು ತಿಳಿಸಿದರು.

ಗ್ಯಾರಂಟಿ ಯೋಜನಾ ಜಿಲ್ಲಾ ಅನುಷ್ಠಾನ ಸಮಿತಿ ಉಪಾಧ್ಯಕ್ಷರಾದ ಪಂಕಜ ಅವರು ಮಾತನಾಡಿ ತಿತಿಮತಿ ವ್ಯಾಪ್ತಿಯಲ್ಲಿ ಬೀದಿ ದೀಪ ಸರಿಪಡಿಸುವಂತಾಗಬೇಕು. ಜೊತೆಗೆ ವಿದ್ಯುತ್ ಪೂರೈಕೆ ಸಮರ್ಪಕವಾಗಿ ಪೂರೈಸಬೇಕು.  ಹಾಗೆಯೇ ಹಳೇ ಕಂಬಗಳನ್ನು ಬದಲಿಸಿ ಹೊಸ ವಿದ್ಯುತ್ ಕಂಬ ಹಾಗೂ ವಿದ್ಯುತ್ ಪರಿವರ್ತಕ ಅಳವಡಿಸುವಂತೆ ಸಲಹೆ ಮಾಡಿದರು.

ಮತ್ತೊಬ್ಬ ಸದಸ್ಯರಾದ ಜಾನ್ಸನ್ ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಶೇಕಡವಾರು ಪ್ರಗತಿ ಹಾಗೂ ಜಿಲ್ಲೆಯ ಇಬ್ಬರು ಶಾಸಕರು ಅಭಿವೃದ್ಧಿಗೆ ಸರ್ಕಾರದ ಮಟ್ಟದಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸಿದ್ದಾರೆ. ಆದ್ದರಿಂದ ಗ್ಯಾರಂಟಿ ಅನುಷ್ಠಾನ ಸಮಿತಿ ವತಿಯಿಂದ ಅಭಿನಂದನಾ ಕಾರ್ಯಕ್ರಮ ಹಮ್ಮಿಕೊಳ್ಳುವಂತಾಗಬೇಕು ಎಂದು ಸಲಹೆ ನೀಡಿದರು.

ಸದಸ್ಯರಾದ ಕಾಂತರಾಜು ಅವರು ಮಾತನಾಡಿ ಗ್ಯಾರಂಟಿ ಯೋಜನೆಗಳು ಪರಿಣಾಮಕಾರಿಯಾಗಿ ಅನುಷ್ಠಾನವಾಗಬೇಕು. ಆ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಎಚ್ಚರ ವಹಿಸಬೇಕು. ಯಾರನ್ನು ಸಹ ಸತಾಯಿಸದೆ ಸರ್ಕಾರದ ಯೋಜನೆಗಳನ್ನು ತಲುಪಿಸುವಂತಾಗಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರು ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಿದ್ದು, ಈ ಯೋಜನೆಗಳನ್ನು ಮತ್ತಷ್ಟು ಪ್ರಗತಿ ಆಗಬೇಕು. ಜಿಲ್ಲೆಯಲ್ಲಿ ಶೇ.99 ರಷ್ಟು ಪ್ರಗತಿ ಸಾಧಿಸಲಾಗಿದ್ದು, ಇನ್ನೂ ಹೆಚ್ಚಿನ ಸಾಧನೆ ಮಾಡುವಂತಾಗಬೇಕು ಎಂದು ಸೂಚಿಸಿದರು.

ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದಂತೆ ಗ್ರಾ.ಪಂ.ಮಟ್ಟದಲ್ಲಿ ನಾಮಫಲಕ ಅಳವಡಿಸುವಂತಾಗಬೇಕು. ಪ್ರತೀ ಗ್ರಾಮಕ್ಕೂ ಈಗಾಗಲೇ ಇರುವ ಮಾರ್ಗದಂತೆ ಸರಿಯಾಗಿ ಬಸ್ ಸಂಚಾರ ನಿರ್ವಹಣೆ ಮಾಡಬೇಕು ಎಂದು ಹೇಳಿದರು.

ವಿರಾಜಪೇಟೆಯಿಂದ ಮೈಸೂರು ಬೆಂಗಳೂರು ಕಡೆಗೆ ರಾತ್ರಿ ವೇಳೆಯಲ್ಲಿ ಬಸ್ ಸಂಚರಿಸುವಂತಾಗಬೇಕು ಎಂದು ಕೋರಿದರು.

ಈ ಸಂದರ್ಭದಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಅವರು ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿಧಿ ಈ ಪಂಚ ಗ್ಯಾರಂಟಿ ಯೋಜನೆಗಳು ಸರ್ಕಾರದ ಮಹತ್ವಾಕಾಂಕ್ಷಿ ಕಾರ್ಯಕ್ರಮಗಳಾಗಿವೆ ಎಂದು ಹೇಳಿದರು.

ಯುವನಿಧಿ ಕಾರ್ಯಕ್ರಮ ಅನುಷ್ಠಾನ ಸಂಬಂಧಿಸಿದಂತೆ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಉಪಾಧ್ಯಕ್ಷರಿಗೆ ವರದಿ ನೀಡುವಂತೆ ಸೂಚಿಸಿದರು.

ಉಪಾಧ್ಯಕ್ಷರಾದ ಶಾರಿ ಗಿರೀಶ, ಕೆ.ಸಿ.ಭೀಮಯ್ಯ, ನಾಸಿರ್ ಅವರು ಗ್ಯಾರಂಟಿ ಯೋಜನೆ ಅನುಷ್ಠಾನ ಸಂಬಂಧಿಸಿದಂತೆ ಹಲವು ವಿಷಯಗಳ ಕುರಿತು ಗಮನ ಸೆಳೆದರು.

ಸದಸ್ಯರಾದ ಕುಟ್ಟಂಡ ಕೃಷ್ಣ, ಸುಂದರ, ಕೆ.ಎಂ.ಬಸೀರ್, ಮುಸ್ತಪ, ಕೆ.ಜಿ.ಪೀಟರ್, ಮಂದ್ರಿರ ಮೋಹನ್ ದಾಸ್, ಕಾಳೇಮಾಡ ಪ್ರಶಾಂತ್ ಅವರು ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನ ಸಂಬಂಧ ಹಲವು ವಿಚಾರಗಳ ಕುರಿತು ಗಮನ ಸೆಳೆದರು.

ಆಹಾರ ಇಲಾಖೆಯ ಜಂಟಿ ನಿರ್ದೇಶಕರಾದ ಮಂಟೇಸ್ವಾಮಿ, ಸೆಸ್ಕ್ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವಿನಯ್ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಪ್ರಸನ್ನ ಕುಮಾರ್, ಜಿಲ್ಲಾ ಉದ್ಯೋಗ ವಿನಿಮಯಾಧಿಕಾರಿ ಮಂಜುನಾಥ್, ಕೆಎಸ್‍ಆರ್‍ಟಿಸಿ ಮಡಿಕೇರಿ ಘಟಕದ ವ್ಯವಸ್ಥಾಪಕರಾದ ಈರಸಪ್ಪ ಅವರು ತಮ್ಮ ಇಲಾಖೆಗೆ ಸಂಬಂಧಿಸದಂತೆ ಗ್ಯಾರಂಟಿ ಯೋಜನೆ ಪ್ರಗತಿ ಸಂಬಂಧ ಮಾಹಿತಿ ನೀಡಿದರು.

Attention to the people of the state: If your `BPL' ration card has been cancelled just do this!
Share. Facebook Twitter LinkedIn WhatsApp Email

Related Posts

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

1 Min Read

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

2 Mins Read

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

1 Min Read
Recent News

​ಬಾಂಗ್ಲಾದೇಶದಲ್ಲಿ ಶ್ರೀರಾಮನ ಮೂರ್ತಿ ವಿರೂಪಕ್ಕೆ ಆಕ್ರೋಶ: ಹಿಂದೂಗಳಿಂದ ಬೃಹತ್ ಪಂಜಿನ ಮೆರವಣಿಗೆ, ಸರ್ಕಾರಕ್ಕೆ 72 ಗಂಟೆಗಳ ಗಡುವು!

BIG NEWS : `PF’ ಖಾತೆದಾರರೇ ಖಾತೆಗೆ ಬಡ್ಡಿ ಹಣ ಜಮೆಯಾಗಿದೆಯೇ? ಜಸ್ಟ್ ಮಿಸ್ಡ್ ಕಾಲ್ ಕೊಟ್ಟು ಹೀಗೆ ಚೆಕ್ ಮಾಡಿ!

ನೀಟ್ ಮರುಪರೀಕ್ಷೆ: ಟೆಲಿಗ್ರಾಂ ನಿಷೇಧದ ನಡುವೆಯೂ ನಕಲಿ ಪ್ರಶ್ನೆಪತ್ರಿಕೆ ಮಾರಾಟ; ರಾಜಸ್ಥಾನದ ಯುವಕನ ಬಂಧನ!

ನಾಳೆ ದೇಶದ 551 ನಗರಗಳಲ್ಲಿ `NEET-UG’ ಮರು ಪರೀಕ್ಷೆ : ಅಭ್ಯರ್ಥಿಗಳಿಗೆ ಮಾರ್ಗಸೂಚಿ ಪ್ರಕಟ | NEET-UG Re Exam

State News
KARNATAKA

ಸೂರ್ಯನ ಸುತ್ತ `ಉಂಗುರಾಕಾರ’ದ ಮನಮೋಹಕ ದೃಶ್ಯ : ಅಪರೂಪದ ಖಗೋಳ ವಿಸ್ಮಯ ಕಂಡು ಬೆರಗಾದ ವಿದ್ಯಾರ್ಥಿಗಳು.!

By kannadanewsnow57 KARNATAKA 1 Min Read

ವಿಜಯಪುರ: ಜಿಲ್ಲೆಯ ತಿಕೋಟ ತಾಲೂಕಿನ ಘೋನಸಗಿ ಗ್ರಾಮದಲ್ಲಿ ವಿಶಿಷ್ಟ ಹಾಗೂ ಅಪರೂಪದ ಖಗೋಳ ವಿಸ್ಮಯವೊಂದು ಸಂಭವಿಸಿದೆ. ಇಲ್ಲಿನ ಸರ್ಕಾರಿ ಕನ್ನಡ…

ಬಡವರು, ರೈತರಿಗೆ ಮಾರಕವಾದ ವಿದ್ಯುತ್ ಖಾಸಗೀಕರಣ ನಿರ್ಧಾರ ಕೈಬಿಡಿ: ಸಾಗರದಲ್ಲಿ ಹೆಚ್.ಎಲ್.ಶ್ರೀಧರ್ ಆಗ್ರಹ

BREAKING : ಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಅಪ್ರಚಾರ: ‘ಕುಮಾರಸ್ವಾಮಿ ಫಾರ್ ಸಿಎಂ’ ಜಾಲತಾಣದ ವಿರುದ್ಧ `FIR’ ದಾಖಲು.!

ಮನ್ಮುಲ್ ನಿಂದ ಕೆರೆಗೆ ಹರಿದ ರಾಸಾಯನಿಕಯುಕ್ತ ನೀರು: ಸಾವಿರಾರು ಮೀನುಗಳ ಮಾರಣಹೋಮ, ಲಕ್ಷಾಂತರ ರೂ. ನಷ್ಟ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.