ಬೆಂಗಳೂರು: ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆನ್ ಲೈನ್ ಮೂಲಕ ಮಾಹಿತಿ ಸಲ್ಲಿಸಲು ನಿನ್ನೆ ಕೊನೆಯ ದಿನವಾಗಿತ್ತು. ಈ ದಿನಾಂಕವನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.
ಈ ಕುರಿತಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲಾಗಿತ್ತು. ನಿನ್ನೆಯವರೆಗೆ ಆನ್ ಲೈನ್ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳದವರಿಗೆ ಅವಕಾಶ ನೀಡಲಾಗಿತ್ತು. ಇನ್ನೂ ಕೆಲವರು ವಿವರ ದಾಖಲಿಸಲು ಅವಕಾಶ ಕೋರಿದ್ದರಿಂದಾಗಿ ಮತ್ತೆ ವಿಸ್ತರಿಸಲಾಗಿದೆ ಎಂದಿದ್ದಾರೆ.
ನವೆಂಬರ್.30, 2025ರವರೆಗೆ ಆನ್ ಲೈನ್ ಮೂಲಕ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಸ್ವಯಂ ಘೋಷಣೆ ಸಲ್ಲಿಸಲು ಅವಧಿ ವಿಸ್ತರಿಸಲಾಗಿದೆ. ಕಾರಣಾಂತರಗಳಿಂದ ಸಮೀಕ್ಷೆಯಲ್ಲಿ ಭಾಗವಹಿಸಲು ಸಾಧ್ಯವಾಗದವರು ಆನ್ ಲೈನ್ ಮೂಲಕ ತಮ್ಮ ಮಾಹಿತಿ ನೋಂದಾಯಿಸಿಬಹುದು ಎಂದು ತಿಳಿಸಿದೆ.
ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಎಲ್ಲರಿಗೂ ಅವಕಾಶ ನೀಡುವ ದೃಷ್ಟಿಯಿಂದ ಆನ್‌ಲೈನ್ ಲಿಂಕ್ https://kscbcselfdeclaration.karnataka.gov.in ಮೂಲಕ ಸ್ವಯಂ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ – 8050770004ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.








