ಬೆಂಗಳೂರು: ಭಾರತೀಯ ಅಂಚೆ ಇಲಾಖೆಯ ಆದೇಶದಂತೆ ಬಳ್ಳಾರಿ ಪ್ರಧಾನ ಕಚೇರಿ ವ್ಯಾಪ್ತಿಗೆ ಬರುವ ಎಲ್ಲಾ ಉಪ ಅಂಚೆ ಕಚೇರಿ ಹಾಗೂ ಶಾಖಾ ಅಂಚೆ ಕಚೇರಿಗಳಲ್ಲಿ ಹೊಸ ತಂತ್ರಾಂಶ (ಎಪಿಟಿ 2.0) ಅಳವಡಿಕೆ ಜಾರಿಯಾಗುತ್ತಿದ್ದು, ಈ ಹಿನ್ನಲೆಯಲ್ಲಿ ಜೂ. 20 ಮತ್ತು 21 ರಂದು ಎರಡು ದಿನಗಳ ಕಾಲ ಅಂಚೆ ಕಚೇರಿಗಳಲ್ಲಿ ವಹಿವಾಟು ಸ್ಥಗಿತಗೊಳಿಸಲಾಗುವುದು ಎಂದು ಅಂಚೆ ಇಲಾಖೆ ತಿಳಿಸಿದೆ.
ಭಾರತೀಯ ಅಂಚೆ ಇಲಾಖೆಯು ಆಧುನಿಕ ಹಾಗೂ ಗ್ರಾಹಕ ಸ್ನೇಹಿ ತಂತ್ರಾಂಶವನ್ನು ಅಭಿವೃದ್ಧಿಪಡಿಸಿ, ಆಧುನಿಕ ತಂತ್ರಜ್ಞಾನದ ನೆಟ್ವರ್ಕ್ ಸಮಸ್ಯೆಯಂತಹ ತೊಡಕುಗಳಿಂದ ಗ್ರಾಹಕರ ಸೇವೆಗಳಿಗೆ ಚ್ಯುತಿ ಬರದಂತೆ ಗಮನಹರಿಸಿ (ಅಡ್ವನ್ಸ್ಡ್ ಪೋಸ್ಟಲ್ ಟೆಕ್ನಾಲಜಿ 2.0) ಯನ್ನು ದೇಶಾದ್ಯಂತ ಎಲ್ಲಾ ಅಂಚೆ ಕಚೇರಿಗಳಲ್ಲಿ ಅಳವಡಿಸಲು ಮುಂದಾಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಅಂಚೆ ಕಚೇರಿಯಲ್ಲಿ ಹಾಗೂ ಅದರಡಿ ಬರುವ ಎಲ್ಲಾ ಉಪ ಅಂಚೆ ಕಚೇರಿಗಳು ಮತ್ತು ಶಾಖಾ ಅಂಚೆ ಕಚೇರಿಗಳಲ್ಲಿ ಎ.ಪಿ.ಟಿ 2.0 ತಂತ್ರಾಂಶವನ್ನು ಅಳವಡಿಕೆ ಕಾರಣ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ.