Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : 256 ಪ್ರಯಾಣಿಕರಿದ್ದ ಯುನೈಟೆಟ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ : ತುರ್ತು ಲ್ಯಾಂಡಿಂಗ್ !

03/03/2026 6:35 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ `ಗ್ರಾಮೀಣ ಜನತೆ’ಯ ಗಮನಕ್ಕೆ : `ಇ-ಸ್ವತ್ತು’ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ.!
KARNATAKA

ರಾಜ್ಯದ `ಗ್ರಾಮೀಣ ಜನತೆ’ಯ ಗಮನಕ್ಕೆ : `ಇ-ಸ್ವತ್ತು’ ತಾಂತ್ರಿಕ ಸಮಸ್ಯೆ ಪರಿಹಾರಕ್ಕೆ ತಪ್ಪದೇ ಈ ಸಂಖ್ಯೆಗೆ ಕರೆ ಮಾಡಿ.!

By kannadanewsnow5723/10/2025 12:51 PM

ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಸಿಹಿಸುದ್ದಿ ನೀಡಿದ್ದು, ಗ್ರಾಮಪಂಚಾಯಿತಿಗಳಲ್ಲೇ ಇ-ಸ್ವತ್ತು ವಿತರಣೆಗೆ ಚಾಲನೆ ನೀಡಿದ್ದು, ಇ-ಸ್ವತ್ತು ತಂತ್ರಾಂಶದ ತಾಂತ್ರಿಕ ಸಮಸ್ಯೆಗಳಿಗೆ ಪರಿಹಾರ ಪಡೆಯಲು ಇ-ಸ್ವತ್ತು ಸಹಾಯವಾಣಿಗೆ ಕರೆ ಮಾಡಿ, ಸೂಕ್ತ ಸಲಹೆ, ಪರಿಹಾರ ಪಡೆಯಿರಿ.

ಸಹಾಯವಾಣಿ ಸಂಖ್ಯೆ:
080-2203 2754

ಇಮೇಲ್ ವಿಳಾಸ:

eswathuhelpdesk@gmail.com

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ಕ್ಕೆ ತಿದ್ದುಪಡಿ ತರುವ ಮೂಲಕ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ವಿತರಿಸಲಾಗುವ ನಿರಾಕ್ಷೇಪಣ (NOC) ಪರವಾನಗಿ, ತೆರಿಗೆಗಳು, ಶುಲ್ಕ ಹಾಗೂ ದರಗಳನ್ನು ವೈಜ್ಞಾನಿಕವಾಗಿ ನಿಗದಿಮಾಡಿದ್ದು, ಆಸ್ತಿಗಳಿಗೆ ಇ-ಸ್ವತ್ತು ವಿತರಿಸಲಾಗುವುದು. ಈ ನಿಯಮಗಳ ಜಾರಿಯಿಂದ 95,75,935 ಆಸ್ತಿಗಳಿಗೆ ಆಸ್ತಿ ಪ್ರಮಾಣ ಪತ್ರ ನೀಡಲು ಅವಕಾಶ ಕಲ್ಪಿಸಲಾಗುತ್ತಿದೆ. ನಿಯಮಗಳಂತೆ ಹದಿನೈದು ದಿನಗಳೊಳಗಾಗಿ ತಂತ್ರಾಂಶದಲ್ಲಿ ತಾಂತ್ರಿಕ ಬದಲಾವಣೆಗಳನ್ನು ತಂದು ಗ್ರಾಮೀಣ ಜನರಿಗೆ ಸೌಲಭ್ಯವನ್ನು ಒದಗಿಸಲಾಗುವುದು.

ನೂತನ ನಿಯಮಗಳಲ್ಲಿ ತೆರಿಗೆ ಲೆಕ್ಕಾಚಾರ ಪ್ರಕ್ರಿಯೆಯನ್ನು ಸರಳೀಕರಣಗೊಳಿಸಿದ್ದು, ಇ-ಸ್ವತ್ತು ನಮೂನೆ ವಿತರಿಸಲು ನಿಗದಿತ ಕಾಲಾವಧಿಯನ್ನು 45 ದಿನಗಳಿಂದ 15 ದಿನಗಳಿಗೆ ಕಡಿತಗೊಳಿಸಲಾಗಿದೆ. ನಿಗದಿತ ಅವಧಿಯಲ್ಲಿ ಸಂಬಂಧಿಸಿದ ಅಧಿಕಾರಿಗಳು ಅನುಮೋದನೆ ನೀಡದಿದ್ದಲ್ಲಿ ಸ್ವಯಂಚಾಲಿತ ಅನುಮೋದನೆಗೆ ನಿಯಮಗಳಲ್ಲಿ ಅವಕಾಶ ಕಲ್ಪಿಸಲಾಗಿದೆ.

2025-26 ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-272ರಲ್ಲಿ ಪಂಚಾಯತ್ ರಾಜ್ ವ್ಯವಸ್ಥೆಯ ಬಲವರ್ಧನೆಗಾಗಿ ಮತ್ತು ಗ್ರಾಮೀಣ ಜನರಿಗೆ ವ್ಯವಸ್ಥಿತ ರೀತಿಯಲ್ಲಿ ಸೇವೆಗಳನ್ನು ಒದಗಿಸುವ ಹಿತದೃಷ್ಟಿಯಿಂದ ‘ಎಲ್ಲ ಅಗತ್ಯ ದಾಖಲೆಗಳನ್ನು ಹೊಂದಿರುವ ಆಸ್ತಿಗಳಿಗೆ ಪ್ರಮಾಣ ಪತ್ರಗಳನ್ನು ವಿತರಿಸಲು ಇ-ಸ್ವತ್ತು ಅಭಿಯಾನವನ್ನು ಆರಂಭಿಸಲಾಗುವುದು’ ಎಂದು ಘೋಷಿಸಲಾಗಿತ್ತು.

ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ 1993ವನ್ನು ದಿನಾಂಕ: 07.04.2025 ರಂದು ಅಧಿಸೂಚಿಸಿ ಪ್ರಕರಣ 199(ಬಿ) ಹಾಗೂ ಪ್ರಕರಣ 199(ಸಿ) ಅನ್ನು ಸೇರಿಸಲಾಗಿದೆ. ಪ್ರಕರಣ 199 (ಬಿ) ಸ್ವತ್ತುಗಳಿಗೆ ಖಾತಾ ಅಥವಾ ಪಿಐಡಿ ನೀಡುವ ಕುರಿತಂತೆ ಹಾಗೂ ಪ್ರಕರಣ 199(ಸಿ) ಕಟ್ಟಡ ಮತ್ತು ಪರಿವರ್ತನೆಯಾಗದೇ ಇರುವ ಭೂಮಿ ಅಥವಾ ಪರಿವರ್ತನೆಯಾದ ಭೂಮಿ ಆದರೆ ಕಂದಾಯ ಭೂಮಿಯಲ್ಲಿನ ಅನುಮೋದಿತವಲ್ಲದ ಬಡಾವಣೆಯ ಮೇಲಿನ ತೆರಿಗೆಗಳ ಮೇಲೆ ಉಲ್ಲೇಖಿಸುತ್ತದೆ. ಈ ತಿದ್ದುಪಡಿಯನ್ನು ಆಧರಿಸಿ ಅಸ್ತಿತ್ವದಲ್ಲಿದ್ದ ತೆರಿಗೆ ನಿಯಮಗಳು 2021ನ್ನು ನಿರಸನಗೊಳಿಸಿ ಹೊಸದಾಗಿ ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ಗ್ರಾಮ ಪಂಚಾಯಿತಿಗಳ ತೆರಿಗೆ, ದರ ಮತ್ತು ಶುಲ್ಕಗಳು) ನಿಯಮಗಳು, 2025 ಅನ್ನು ಅಧಿಸೂಚಿಸಲಾಗಿದೆ. ಈ ನಿಯಮಗಳ ಜಾರಿಯಿಂದ ರಾಜ್ಯಾದ್ಯಂತ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಇ-ಸ್ವತ್ತು ಅಭಿಯಾನವನ್ನು ಯಶಸ್ವಿಯಾಗಿ ಕೈಗೊಳ್ಳಲಾಗುವುದು.

ಗ್ರಾಮ ಪಂಚಾಯತಿಯ ಎಲ್ಲ ಆಸ್ತಿಗಳ ಕರಡು ಪ್ರತಿಗಳನ್ನು ಸಾರ್ವಜನಿಕರಿಗೆ ತಂತ್ರಾಂಶದ ಮೂಲಕ ಒದಗಿಸಿ ತಮ್ಮ ಆಸ್ತಿಗಳ ಮಾಹಿತಿಯನ್ನು ಸರಿಪಡಿಸಿಕೊಳ್ಳುವ ಅವಕಾಶವನ್ನು ಕಲ್ಪಿಸಲಾಗಿದೆ. ಆಸ್ತಿ ಮಾಲೀಕರು ತಮ್ಮ ಆಸ್ತಿಗಳ ತೆರಿಗೆಯನ್ನು ಗ್ರಾಮ ಪಂಚಾಯತಿಗೆ ಪಾವತಿಸುವ ಮೂಲಕ ದಾಖಲೆ ಪಡೆಯಲು ಹಾಗೂ ಗ್ರಾಮ ಪಂಚಾಯತಿಯ ಸ್ವಂತ ಸಂಪನ್ಮೂಲಗಳನ್ನು ವೃದ್ಧಿಗೊಳಿಸುವುದರ ಮೂಲಕ ಗ್ರಾಮ ಪಂಚಾಯತಿಯ ಅಭಿವೃದ್ಧಿ ಕಾರ್ಯಗಳಲ್ಲಿ ಪಾಲ್ಗೊಳ್ಳಲು ಸಹಕಾರಿಯಾಗಲಿದೆ.

ತೆರಿಗೆ, ದರ ಅಥವಾ ಶುಲ್ಕಗಳ ನಿರ್ಧಾರ, ವಸೂಲಿ ಅಥವಾ ವಿಧಿಸುವಿಕೆಯಿಂದ ಬಾಧಿತನಾದ ಯಾವುದೇ ವ್ಯಕ್ತಿಯು ಉಪ ಕಾರ್ಯದರ್ಶಿ (ಅಭಿವೃದ್ದಿ) ಅವರಿಗೆ ಮೊದಲನೆ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಲಾಗಿದೆ. ಸದರಿ ಆದೇಶದಿಂದ ಬಾಧಿತನಾದ ವ್ಯಕ್ತಿಯು ಎರಡನೇ ಮೇಲ್ಮನವಿಯನ್ನು ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

Attention to the 'rural people' of the state: Call this number without fail to resolve 'e-asset' technical issues!
Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM2 Mins Read

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM1 Min Read

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM1 Min Read
Recent News

BREAKING : 256 ಪ್ರಯಾಣಿಕರಿದ್ದ ಯುನೈಟೆಟ್ ಏರ್ ಲೈನ್ಸ್ ವಿಮಾನದಲ್ಲಿ ಬೆಂಕಿ : ತುರ್ತು ಲ್ಯಾಂಡಿಂಗ್ !

03/03/2026 6:35 AM

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

03/03/2026 6:20 AM

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM
State News
KARNATAKA

ರಾಜ್ಯದ ಜನತೆಯ ಗಮನಕ್ಕೆ : `ಕರ್ನಾಟಕ ಸೇವಾ ಸಿಂಧು ಪೋರ್ಟಲ್‌’ನಲ್ಲಿ ಸಿಗಲಿದೆ ಈ ಎಲ್ಲಾ ಸೌಲಭ್ಯಗಳು !

By kannadanewsnow5703/03/2026 6:20 AM KARNATAKA 2 Mins Read

ಬೆಂಗಳೂರು: ಇಂದಿನ ಡಿಜಿಟಲ್ ಯುಗದಲ್ಲಿ ನಾಗರಿಕರು ಸರ್ಕಾರಿ ಕೆಲಸಗಳಿಗಾಗಿ ಕಚೇರಿಯಿಂದ ಕಚೇರಿಗೆ ಅಲೆಯುವ ಸಂಪ್ರದಾಯಕ್ಕೆ ಕರ್ನಾಟಕ ಸರ್ಕಾರ ಬ್ರೇಕ್ ಹಾಕಿದೆ.…

ಮದ್ಯಪ್ರಿಯರಿಗೆ ಸರ್ಕಾರದಿಂದ ‘ಬಿಗ್ ಶಾಕ್’: ಬಜೆಟ್‌ನಲ್ಲಿ `ಎಣ್ಣೆ’ ಬೆಲೆ ಏರಿಕೆ ಸಾಧ್ಯತೆ

03/03/2026 6:18 AM

BREAKING: KPSCಯಿಂದ ಗೆಜೆಟೆಡ್‌ ಪ್ರೊಬೇಷನರಿ 384 ಹುದ್ದೆಗಳ ಮುಖ್ಯ ಪರೀಕ್ಷೆ ಫಲಿತಾಂಶ ಪ್ರಕಟ

03/03/2026 6:16 AM

ರಾಜ್ಯದ ಹೊಸ ಬಡಾವಣೆಗಳ ನಿವಾಸಿಗಳಿಗೆ ಗುಡ್ ನ್ಯೂಸ್ : `ಇ-ಖಾತೆ’ ಪಡೆಯಲು ಗ್ರಾ.ಪಂ. ನಲ್ಲೇ ಅರ್ಜಿ ಸಲ್ಲಿಸಲು ಅವಕಾಶ !

03/03/2026 6:16 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.